ಬೆಂಗಳೂರು: ಆರು ಮಂದಿ ನಕ್ಸಲರಿಗೆ ರಾಜ್ಯ ರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಯಾವ ಮಾನದಂಡದ ಮೇಲೆ ರ್ಕಾರ ಈ ಕ್ರಮಕ್ಕೆ ಮುಂದಾಗಿದೆ ? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಮಾಜಿ ಸಚಿವ, ಬಿಜೆಪಿ ಶಾಸಕ ಸುನೀಲ್ ಕುಮಾರ್ ರಾಜ್ಯ ರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌರ್ಯ ಎಲ್ಲವೂ ಸಿಗುತ್ತದೆ ಎಂದು ಟೀಕಿಸಿದ್ದಾರೆ.
ರಾಷ್ಟ್ರಕವಿ ಕುವೆಂಪು ಅವರ ರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ ? ಇದರಿಂದ ಪೊಲೀಸರ ಆತ್ಮ ಸ್ಥರ್ಯ ಏನಾಗಬೇಡ ? ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದಿದ್ದಾರೆ.