ಗ್ರಾಮ ಪಂಚಾಯತಿ ಗ್ರಂಥಪಾಲಕರಿಗೆ ಕನಿಷ್ಠ ವೇತನ ನಿಗದಿ ಪಡಿಸಿ ರಾಜ್ಯ ಸರ್ಕಾರ ಆದೇಶ

ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಮಾಸಿಕ ಕನಿಷ್ಠ ಮೂಲವೇತನ ನಿಗದಿಪಡಿಸಿ, ಅವರ ಮಾಸಿಕ ವೇತನವನ್ನು ಹೆಚ್ಚಿಸಿ ಇಂದು ರಾಜ್ಯ ಸರ್ಕಾರ ಆದೇಶಿಸಿದೆ.

 

ಕಳೆದ ಜುಲೈ 27ರಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಗ್ರಂಥಾಲಯಗಳ ಗ್ರಂಥಪಾಲಕರ ಸಂಘದ ಪ್ರತಿನಿಧಿಗಳು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ತಮ್ಮ ಹಲವಾರು ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದ್ದರು, ಈ ಬೇಡಿಕೆಗಳಲ್ಲಿ ಪ್ರಮುಖವಾಗಿ ವೇತನ ಪರಿಷ್ಕರಣೆಯ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು.

ಸಮಾಜದ ಪ್ರಜ್ಞಾವಂತಿಕೆ ಹಾಗೂ ಗ್ರಾಮೀಣ ಯುವಜನರ ಉಜ್ವಲ ಭವಿಷ್ಯದ ಅವಕಾಶಕ್ಕೆ ಸಹಾಯಕವಾಗಿ

1) ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳು “ಅರಿವು ಕೇಂದ್ರ ಗಳಾಗಿ ಕಾರ್ಯ ನಿರ್ವಹಿಸಲು

2) ಗ್ರಂಥಪಾಲಕರ ಕೆಲಸದ ಸಮಯವನ್ನು ಹೆಚ್ಚಿಸಿ

3) ಹೆಚ್ಚಿದ ಗಂಟೆಗಳು ಹಾಗೂ ವಿಭಜಿತ ಸಮಯವನ್ನು ಗಮನದಲ್ಲಿರಿಸಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಕನಿಷ್ಠ ಮಾಸಿಕ ಮೂಲ ವೇತನವನ್ನು ನಿಗದಿಪಡಿಸಿ ಜೊತೆಗೆ ಕಾರ್ಮಿಕ ಇಲಾಖೆ ಕಾಲಕಾಲಕ್ಕೆ ನಿಗದಿಪಡಿಸುವ ವ್ಯತ್ಯಯವಾಗುವ ತುಟ್ಟಿ ಭತ್ಯೆಯನ್ನು ಪಾವತಿಸುವಂತೆ ಮಹತ್ವಾಕಾಂಕ್ಷಿ ಆದೇಶವನ್ನು ಹೊರಡಿಸಿದೆ.

ಬಸವಣ್ಣನವರ ‘ಅರಿವೇ ಗುರು’ ತತ್ವದ ಆಶಯದಂತೆ ಗ್ರಂಥಾಲಯಗಳನ್ನು ‘ಅರಿವು ಕೇಂದ್ರ’ಗಳನ್ನಾಗಿ ಮಾರ್ಪಡಿಸಿ ಗ್ರಾಮ ಪಂಚಾಯತಿ ಗ್ರಂಥಾಲಯಗಳನ್ನು ಗ್ರಾಮೀಣ ವಿಶ್ವವಿದ್ಯಾಲಯಗಳಂತೆ ರೂಪಿಸಲು ಈ ಮಹತ್ವಾಕಾಂಕ್ಷಿ ಹೆಜ್ಜೆ ಇರಿಸಲಾಗಿದೆ.

 

ಸಮೃದ್ಧ ಸಮಾಜ ನಿರ್ಮಿಸಲು, ಸ್ಥಿರ ಸಮಾಜದ ಅಗತ್ಯವಿದೆ. ಸ್ಥಿರ ಸಮಾಜ ನಿರ್ಮಾಣವಾಗಲು ಪ್ರಬುದ್ಧ ಸಮಾಜದ ಅಗತ್ಯವಿದೆ. ನಾಡಿನ ಗ್ರಂಥಾಲಯ ಹಾಗೂ ಇವುಗಳನ್ನು ಪೂರ್ಣಬಳಕೆಗೆ ಸನ್ನದ್ಧಗೊಳಿಸುವ ಗ್ರಂಥಪಾಲಕರನ್ನು ಸಬಲೀಕರಣಗೊಳಿಸಲು ಹೊರಡಿಸಲಾಗಿರುವ ಈ ಆದೇಶ ಪ್ರಬುದ್ಧ ಸಮಾಜದ ನಿರ್ಮಾಣಕ್ಕೆ ನಮ್ಮ ಸರ್ಕಾರದ ಬದ್ಧತೆಯ ಪ್ರತೀಕವಾಗಿದೆ.

Facebook
Twitter
LinkedIn
WhatsApp
Telegram
Email
Tumblr

Leave a Comment

Your email address will not be published. Required fields are marked *

Translate »
Scroll to Top