ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟ ಉದ್ಘಾಟಿಸಿದ ಸಚಿವ ಬಿ. ನಾಗೇಂದ್ರ

ಮಂಗಳೂರು: ನಮ್ಮ ಉತ್ತರ ಕರ್ನಾಟಕಕ್ಕಿಂತಲೂ ಮಂಗಳೂರು ಭಾಗದ ಜನರು ಬಹಳ ಬುದ್ಧಿವಂತರಾದ ಕಾರಣ ಮಂಗಳೂರು ಜಿಲ್ಲೆಯನ್ನು ಬುದ್ಧಿವಂತರ ನಾಡು ಅನ್ನುತ್ತಾರೆ. ಇಂದು ವಿಶೇಷವಾಗಿ 30 ರಿಂದ 90 ವರ್ಷದವರೆಗಿನ ಕ್ರೀಡಾ ಸಾಧಕರನ್ನು ನೋಡಿ ಬಹಳ ಸಂತೋಷ ತಂದಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಹೇಳಿದ್ದಾರೆ.

 

ಶಿಕ್ಷಣ ಕ್ಷೇತ್ರದಲ್ಲಿ ಮಂಗಳೂರು ಜಿಲ್ಲೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಮಂಗಳೂರು ಬುದ್ಧಿವಂತರ ನಾಡು, ವಿದ್ಯಾಕಾಶಿ. ತುಳುನಾಡು ಮಂಗಳೂರುನಲ್ಲಿ ಕ್ರೀಡಾ ಸಾಧಕರ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿ ಕೂಡ ಬಹಳಷ್ಟು ಸಾಧನೆ ಮಾಡಿದ ಸಾಧಕರು ಇದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರು ನಗರದ ಮಂಗಳ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಹಾಗೂ ದಕ್ಷಿಣ ಕನ್ನಡ ಮಾಸ್ಟರ್ಸ್ ಆಥ್ಲೆಟಿಕ್ ಅಸೋಶೇಷನ್ ವತಿಯಿಂದ ಆಯೋಜಿಸಿದ್ದ 42 ನೇ ರಾಜ್ಯ ಮಟ್ಟದ ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

 

2 ದಿನಗಳ ಕಾಲ ರಾಜ್ಯದ 31 ಜಿಲ್ಲೆಗಳಿಂದ ಸಾವಿರಾರು ಕ್ರೀಡಾಪಟುಗಳು & ಕ್ರೀಡಾಭಿಮಾನಿಗಳು ಆಗಮಿಸಿರುವ ಈ ಕ್ರೀಡಾಕೂಟದಲ್ಲಿ 30 ರಿಂದ 90 ವರ್ಷದ ವರೆಗಿನ ಮಹಿಳಾ ಮತ್ತು ಪುರುಷ ಅಥ್ಲೆಟ್ ಗಳು ಪಾಲ್ಗೊಂಡಿದ್ದರು. ಮೊದಲ ದಿನದ ಕ್ರೀಡಾಕೂಟದಲ್ಲಿ ಮಹಿಳಾ ಮತ್ತು ಪುರುಷರ ವಿಭಾಗದಲ್ಲಿ 5000 ಮೀಟರ್ ವಾಕ್, ಮಹಿಳೆಯರ 3000 ಮೀಟರ್ ವಾಕ್, ಟ್ರಿಪಲ್ ಜಂಪ್, ಹೈ ಜಂಪ್, 1500 ಮೀಟರ್ ಓಟ, ಡಿಸ್ಯಸ್ ಎಸೆತ, 100 ಮೀಟರ್, ಓಟ, ಜಾವೆಲಿನ್ ಎಸೆತ, 200 ಮೀಟರ್ ಓಟ, 5000 ಮೀಟರ್ ಪುರುಷರ ಓಟ ಹಾಗೂ ಮಹಿಳೆಯರಿಗೆ 3000 ಮೀಟರ್ ಓಟದ ಕ್ರೀಡಾಕೂಟ ನಡೆಯುತ್ತಿದೆ. ರಾಜ್ಯದಲ್ಲಿ ಇದೊಂದು ವಿಭಿನ್ನ ಕ್ರೀಡಾಕೂಟ ಆಗಿದೆ ಹಿರಿಯ ಸಾಧಕರನ್ನು ಗೌರವಿಸುವ ಕಾರ್ಯಕ್ರಮ ಇದಾಗಿದೆ ಎಂದು ಸಚಿವರು ಹೇಳಿದ್ದಾರೆ.

2 ನೇ ದಿನದ ಕ್ರೀಡಾಕೂಟದಲ್ಲಿ ಮಹಿಳೆಯರ ಮತ್ತು ಪುರುಷರ ಓಟ, ಹ್ಯಾಮರ್ ಎಸೆತ, ಲಾಂಗ್ ಜಂಪ್, 800 ಮೀಟರ್ ಓಟ, ಶಾಟ್ ಪುಟ್, ಹೈ ಜಂಪ್, 400 ಮೀಟರ್ ಓಟ, 100 ಮೀಟರ್ ಮತ್ತು 80 ಮೀಟರ್ ಹರ್ಡಲ್ಸ್ ರಿಲೇ ನಡೆಯಲಿದ್ದು, ಎಲ್ಲಾ ಕ್ರೀಡಾಪಟುಗಳು ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿ ವಿಜೇತರಾಗಬೇಕು ಎಂದು ಸಚಿವರು ತಿಳಿಸಿದ್ದಾರೆ.

 

ನಮ್ಮ ರಾಜ್ಯ ಸರ್ಕಾರದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮತ್ತು ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ನಮ್ಮ ರಾಜ್ಯದ ಕ್ರೀಡೆಗಳನ್ನು ಅಂತಾಷ್ಟ್ರೀಯ ಮಟ್ಟಕ್ಕೆ ಕೊಂಡೋಯ್ಯಲು ಉತ್ತಮ ತರಬೇತಿದಾದರನ್ನು & ತರಬೇತಿಗೆ ಬೇಕಾಗುವ ಧನಸಹಾಯ ಕೂಡ ಕ್ರೀಡಾಪಟುಗಳಿಗೆ ನೀಡುತ್ತಾ ಬರುತ್ತಿದ್ದಾರೆ.

ಒಲಂಪಿಕ್ ಮತ್ತು ಪ್ಯಾರಾ ಒಲಂಪಿಕ್ ಕ್ರೀಡೆಗಳಲ್ಲಿ ಚಿನ್ನ, ಬೆಳ್ಳಿ, ಕಂಚು ಪದಕ ವಿಜೇತರಾದಲ್ಲಿ ಈ ಹಿಂದೆ ಪೊಲೀಸ್ ಮತ್ತು ಅರಣ್ಯ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ಉದ್ಯೋಗ ಪಡೆಯಲು 2% ಮೀಸಲಾತಿ ಕಲ್ಪಿಸಲಾಗಿತ್ತು, ಆದರೆ ನಮ್ಮ ರಾಜ್ಯದ ನುಡಿದಂತೆ ನಡೆದ, ಇಡೀ ದೇಶಕ್ಕೆ ಮಾದರಿ ಸಿಎಂ ಸಿದ್ದರಾಮಯ್ಯ ಹಾಗೂ ನಾವು ಕ್ರೀಡಾಪಟುಗಳ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದು, ಎಲ್ಲಾ ಇಲಾಖೆಗಳಲ್ಲಿ 2% ಮೀಸಲಾತಿ ನೀಡಿ ಅವರ ಜೀವನೋಪಾಯಕ್ಕಾಗಿ ಉದ್ಯೋಗ ಪಡೆಯಲು ಸಹಕಾರ ನೀಡಿದ್ದೇವೆ ಎಂದರು.

 

ಈಗಾಗಲೇ ನಮ್ಮ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಇರುವ ಸ್ಥಳೀಯ ಕ್ರೀಡೆಗಳನ್ನು ಗೌರವಿಸಿ ‘ಒಂದು ಜಿಲ್ಲೆ – ಒಂದು ಕ್ರೀಡೆ’ ಎನ್ನುವ ಘೋಷ ವಾಕ್ಯದಲ್ಲಿ ಸ್ಥಳೀಯ ಕ್ರೀಡೆಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೋಯ್ಯಲು ನಮ್ಮ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಉತ್ತಮ ಕೆಲಸಕ್ಕೆ ಮುಂದಾಗಿದ್ದೇವೆ ಎಂದು ಸಚಿವರು ತಿಳಿಸಿದರು.

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top