ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಅವರ ಹೇಳಿಕೆ

ಬೆಂಗಳೂರು,ಜನವರಿ,೨೪ : ಮೇಕೆದಾಟು ಪಾದಯಾತ್ರೆಯನ್ನು ಹತ್ತಿಕ್ಕಲು ವೀಕೆಂಡ್ ಕರ್ಪ್ಯೂ ಜಾರಿಗೆ ತರಲಾಗಿತ್ತು. ಕಾಂಗ್ರೆಸ್ ಪಾದಯಾತ್ರೆಯಿಂದ ಕೋವಿಡ್ ಹರಡಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ಎಸ್.ಟಿ. ಸೋಮಶೇಖರ್ ಅವರಿಗೆ ಕೋವಿಡ್ ದೃಢಪಟ್ಟಿದ್ದು ನಮ್ಮ ಪಾದಯಾತ್ರೆಯಿಂದನಾ..? ಮುಂದಿನ ದಿನಗಳಲ್ಲಿ ಮಹದಾಯಿ, ಕೃಷ್ಣ, ಕಲ್ಯಾಣ ಕರ್ನಾಟಕದ 371 ಜೆ ಪರವಾಗಿ ಹೋರಾಟ ನಡೆಸುತ್ತೇವೆ. ಮಹದಾಯಿ ಪಾದಯಾತ್ರೆ ಬಗ್ಗೆ ಈಗಾಗಲೇ ಪಕ್ಷದಲ್ಲಿ ಚರ್ಚೆ ನಡೆದಿದೆ. ನಮ್ಮ ಪಕ್ಷ ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲಿ ಮಹದಾಯಿ ವಿಷಯದಲ್ಲಿ ಹುಬ್ಬಳ್ಳಿಯಲ್ಲಿ ಯಡಿಯೂರಪ್ಪ ಹೋರಾಟ ಮಾಡಿದ್ದರು.

ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಮಹದಾಯಿ ಕಾಮಗಾರಿ ಜಾರಿಗೆ ತರುತ್ತೇವೆ. ಈ ಬಗ್ಗೆ ರಕ್ತದಲ್ಲಿ ಬರೆದು ಕೊಡುತ್ತೆನೆಂದು ಯಡಿಯೂರಪ್ಪನವರು ಮಾತು ಕೊಟ್ಟಿದ್ದರು. ಈಗ ಉತ್ತರ ಕರ್ನಾಟಕ ಭಾಗದ ಜನರಿಗೆ ನೀರು ಬಂತಾ…? ಮುಂದಿನ ದಿನಗಳಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ.‌ ಮಹದಾಯಿ ಪಾದಯಾತ್ರೆಯ ರೂಪುರೇಷೆ ಸಧ್ಯದಲ್ಲೇ ಸಿದ್ಧಪಡಿಸುತ್ತೇವೆ. ರಾಜ್ಯದ ಜನ ಈಗಾಗಲೇ ತತ್ತರಿಸಿದ್ದಾರೆ. ವೀಕೆಂಡ್ ಕರ್ಪ್ಯೂ ಅವಶ್ಯಕತೆ ಇರಲಿಲ್ಲ. ಆದರೂ ಸರ್ಕಾರ ಜಾರಿಗೆ ತಂದಿತ್ತು. ನಮ್ಮ ಪಾದಯಾತ್ರೆ ಹತ್ತಿಕ್ಕುವ ಉದ್ದೇಶ ಬಿಟ್ಟರೆ ಇದರ ಹಿಂದೆ ಬೇರೇನೂ ಇರಲಿಲ್ಲ

Leave a Comment

Your email address will not be published. Required fields are marked *

Translate »
Scroll to Top