ವಾಕ್ಸಮರ ಅಂತ್ಯಗೊಳಿಸಿ ಸಂಧಾನಕ್ಕೆ ಮುಂದಾಗಿ: ರೂಪ-ರೋಹಿಣಿಗೆ ಸುಪ್ರೀಂಕೋರ್ಟ್ಸಲಹೆ

ಬೆಂಗಳೂರು: ಒಬ್ಬರು ಮತ್ತೊಬ್ಬರ ವಿರುದ್ಧ ಆರೋಪಗಳ ಮಾಡುವುದನ್ನು ಮುಂದುವರಿಸುವುದರ ಬದಲಾಗಿ ಸಂಧಾನ ಸಾಧ್ಯತೆಯತ್ತ ಗಮನಹರಿಸುವಂತೆ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ಗೆ ಸುಪ್ರೀಂಕೋರ್ಟ್ ‍ಮಂಗಳವಾರ ಸಲಹೆ ನೀಡಿದೆ.

ಸಿಂಧೂರಿ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿರುವ ಕ್ರಿಮಿನಲ್‌ ಮಾನಹಾನಿ ಪ್ರಕರಣ ರದ್ದುಪಡಿಸಲು ರ‍್ನಾಟಕ ಹೈಕರ‍್ಟ್‌ ನಿರಾಕರಿಸಿರುವುದನ್ನು ಪ್ರಶ್ನಿಸಿ ರೂಪಾ ಸಲ್ಲಿಸಿರುವ ರ‍್ಜಿಯ ವಿಚಾರಣೆಯನ್ನು ನ್ಯಾಯಮರ‍್ತಿಗಳಾದ ಅಭಯ್‌ ಶ್ರೀನಿವಾಸ್‌ ಓಕ್‌ ಮತ್ತು ಪಂಕಜ್‌ ಮಿತ್ತಲ್‌ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ಇಬ್ಬರೂ ಅಧಿಕಾರಿಗಳು ಸರ‍್ವಜನಿಕ ಸೇವೆಯಲ್ಲಿದ್ದು, ಈ ನಡತೆ ಮುಂದುವರಿಯಬಾರದು. ಇಬ್ಬರೂ ಯುವ ಅಧಿಕಾರಿಗಳಾಗಿದ್ದು, ಈ ಹಣಾಹಣಿ ಮುಂದುವರಿದರೆ ಅವರ ವೃತ್ತಿಗೆ ಹಾನಿಯಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಉಭಯ ಪಕ್ಷಕಾರರು ಆರೋಪಗಳನ್ನು ಹಿಂಪಡೆಯಲು ಒಪ್ಪಿದರೆ ಬಾಕಿ ಇರುವ ಪ್ರಕರಣಗಳು ಸೇರಿ ಇಬ್ಬರ ನಡುವೆ ಬಾಕಿ ಇರುವ ಎಲ್ಲಾ ದಾವೆಗಳು ರದ್ದಾಗಲಿವೆ ಎಂದು ನ್ಯಾಯಾಲಯ ಹೇಳಿದೆ.

ಕಳೆದ ಡಿಸೆಂಬರ್‌ ೧೫ರಂದು ಪ್ರಕರಣಕ್ಕೆ ತಡೆ ನೀಡಿದ್ದ ರ‍್ವೋಚ್ಚ ನ್ಯಾಯಾಲಯವು ಮಾಧ್ಯಮಗಳಲ್ಲಿ ಮಾತನಾಡದಂತೆ ಉಭಯ ಅಧಿಕಾರಿಗಳಿಗೆ ನರ‍್ದೇಶಿಸಿತ್ತು. ಅಲ್ಲದೇ, ವಿವಾದ ಬಗೆಹರಿಸಿಕೊಳ್ಳಲು ಸಂಧಾನಕ್ಕೆ ಮುಂದಾಗುವಂತೆ ಸಲಹೆ ನೀಡಿತ್ತು.ಅಧಿಕಾರಿಗಳಿಬ್ಬರ ಕಚ್ಚಾಟಕ್ಕೆ ಸಂಬಂಧಿಸಿದಂತೆ ರ‍್ಕಾರವು ಇಲಾಖಾ ತನಿಖೆ ನಡೆಸುತ್ತಿದ್ದರೆ, ಈ ವಿಚಾರದಲ್ಲಿ ಮುಂದುವರಿಯದಂತೆ ರ‍್ಕಾರಕ್ಕೂ ಸೂಚಿಸಲಾಗುವುದು ಎಂದು ಹೇಳಿತು.

 

ಸಿಂಧೂರಿ ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿದ್ಧರ‍್ಥ್‌ ಲೂಥ್ರಾ ಅವರು ಸಿಂಧೂರಿ ಪ್ರಕರಣವನ್ನು ಇತ್ರ‍್ಥಪಡಿಸಿಕೊಳ್ಳಲು ಬಯಸಿಲ್ಲ. ಪರಿಹಾರ ಸಾಧ್ಯತೆಯ ಬಗ್ಗೆ ಸಿಂಧೂರಿ ಜೊತೆ ರ‍್ಚಿಸಲು ಹೆಚ್ಚಿನ ಕಾಲಾವಕಾಶ ಬೇಕು ಎಂದರು. ಇದನ್ನು ಆಲಿಸಿದ ಪೀಠವು ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ. ಡಿ ರೂಪಾ ಪರವಾಗಿ ಹಿರಿಯ ವಕೀಲ ಆದಿತ್ಯ ಸೋಂಧಿ ವಾದಿಸಿದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top