ರಾಜ್ಯದಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ ಕಾನೂನಿನ ಕಟ್ಟುನಿಟ್ಟಿನ ಜಾರಿಗೆ ಕ್ರಮ

ಬೆಂಗಳೂರು : ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟಿನ ಆದೇಶದಂತೆ, ರಾಜ್ಯದಲ್ಲಿ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಲಾಗಿದೆ. ಮಾಧ್ಯಮಗಳ ಮೂಲಕವೂ ವ್ಯಾಪಕ ಪ್ರಚಾರ ಸಹ ಆಗಿದೆ. ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯವರೆಗೆ ಯಾವುದೇ ದ್ವನಿವರ್ಧಕ ಗಳ ಉಪಯೋಗಕ್ಕೆ ಅವಕಾಶವಿಲ್ಲ. ಬೇರೆ ಸಮಯದಲ್ಲಿ ದ್ವನಿ ವರ್ಧಕ ಗಳಿಂದ ಉತ್ಪತ್ತಿಯಾಗುವ ಶಬ್ದದ ಪ್ರಮಾಣ ಯಾವ ಸಾಂದ್ರತೆ ಯಲ್ಲಿರಬೇಕು, ಎಂಬುದರ ಬಗ್ಗೆ, ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಯಾವ ದರ್ಜೆಯ ಅಧಿಕಾರಿಗಳು, ದ್ವನಿವರ್ಧಕಗಳಿಗೆ ಅನುಮತಿ ನೀಡಬಹುದು ಹಾಗೂ ಕಾನೂನು ಬಾಹಿರವಾಗಿ ಇರುವ ದ್ವನಿವರ್ಧಕಗಳನ್ನು ತೆಗೆದು ಹಾಕಬಹುದು ಎಂಬುದರ ಬಗ್ಗೆಯೂ, ಮಾರ್ಗಸೂಚಿ ಗಳು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ. ಕೈಗಾರಿಕಾ ವಲಯ, ವಸತಿ ಪ್ರದೇಶಗಳು, ವಾಣಿಜ್ಯ ವಲಯ ಹಾಗೂ ನಿಶಬ್ದ ವಲಯ ಗಳಲ್ಲಿ ಯಾವ ಪ್ರಮಾಣದಲ್ಲಿ ಶಬ್ದ ಸಾಂದ್ರತೆ ಇರಬಹುದು ಎಂದೂ ಮಾರ್ಗಸೂಚಿ ಯಲ್ಲಿ ಹೇಳಲಾಗಿದೆ. ಖಾಸಗಿ ಪ್ರದೇಶದಲ್ಲಿ ಸಹ ಶಬ್ದ ಪ್ರಮಾಣವನ್ನು ನಿಗದಿ ಪಡಿಸಲಾಗಿದೆ.

ಅನುಮತಿ ಇಲ್ಲದೆ ದ್ವನಿವರ್ಧಕ ಗಳನ್ನು ಉಪಯೋಗಿಸುತ್ತಿರುವವರು ಇನ್ನು 15 ದಿನದ ಒಳಗೆ, ಸಂಬಂಧ ಪಟ್ಟ ಸಕ್ಷಮ ಅಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳಬೇಕು. ಇದಕ್ಕೆ ತಪ್ಪಿದ್ದಲ್ಲಿ, ಸಂಬಂಧ ಪಟ್ಟ ಅಧಿಕಾರಿಗಳು, ದ್ವನಿವರ್ಧಕ ಗಳನ್ನು ತೆಗೆಸಿ ಹಾಕುತ್ತಾರೆ. ಇದರಿಂದ ಯಾರಿಗೂ ವಿನಾಯಿತಿ ಇಲ್ಲ ಚರ್ಚುಗಳು, ಮಸೀದಿಗಳು ಹಾಗೂ ದೇವಸ್ಥಾನಗಳನ್ನು ಒಳಗೊಂಡಂತೆ ಯಾವುದೇ ತಾರತಮ್ಯ ಇಲ್ಲದಂತೆ ಕಾನೂನನ್ನು ಜಾರಿಗೊಳಿಸಲಾಗುವುದು. ಶಬ್ದ ಮಾಲಿನ್ಯ ಉಂಟುಮಾಡುವ ಹಾಗೂ ಅನುಮತಿ ಇಲ್ಲದ ದ್ವನಿವರ್ಧಕ ಗಳನ್ನು, ತೆಗೆದು ಹಾಕುವ ಪ್ರಕ್ರಿಯೆ, ಇಡೀ ರಾಜ್ಯದಲ್ಲಿ ನಡೆಯಲಿದೆ.

ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ.

Leave a Comment

Your email address will not be published. Required fields are marked *

Translate »
Scroll to Top