ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ಗೆ ಇದೀಗ ಮತ್ತೊಂದು ಪ್ರಕರಣದಲ್ಲಿ ಸಮನ್ಸ್ ಜಾರಿ ಆಗಿದೆ. ದರ್ಶನ್ ಮಾತ್ರವೇ ಅಲ್ಲದೆ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರಿಗೂ ಸಹ ಸಮನ್ಸ್ ಜಾರಿ ಆಗಿದೆ. ದರ್ಶನ್ ತಮ್ಮ ಮೈಸೂರು ಫಾರಂ ಹೌಸ್ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದರು ಈ ಬಗ್ಗೆ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಆಗಿದೆ.
‘ಬಾರ್ ಹೆಡೆಡ್ ಗೂಸ್’ ಎಂಬ ಬಾತುಕೋಳಿಗಳನ್ನು ಸಾಕಿದ್ದ ದರ್ಶನ್, ಕೆಂಪಯ್ಯನ ಹುಂಡಿಯ ನಟ ದರ್ಶನ್ ತೋಟದ ಮೇಲೆ ದಾಳಿ ಮಾಡಿದ್ದ ಅರಣ್ಯಾಧಿಕಾರಿಗಳು, ಈ ವೇಳೆ ವಿದೇಶಿ ಪ್ರಭೇದದ ಬಾತು ಕೋಳಿ ವಶಕ್ಕೆ ಪಡೆದಿದ್ದರು. ಪ್ರಕರಣದ ವಿಚಾರಣೆಯು ಮೈಸೂರು ಜಿಲ್ಲೆ ಟಿ.ನರಸೀಪುರ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಇದೀಗ ನ್ಯಾಯಾಲಯವು ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರಿಗೆ ಸಮನ್ಸ್ ಜಾರಿ ಮಾಡಿದ್ದು ಜುಲೈ 4 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.
ಬಾರ್ ಹೆಡೆಡ್ ಗೂಸ್ ಹೆಚ್ಚಾಗಿ ಮಧ್ಯ ಏಷ್ಯಾ ಪ್ರದೇಶದ್ದಾಗಿದ್ದು, ಇವು ವಲಸೆ ಹಕ್ಕಿಗಳಾಗಿವೆ, ಈ ಹಕ್ಕಿಗಳನ್ನು ಸಾಕುವುದು ವನ್ಯಜೀವಿ ಸಂರಕ್ಷಣೆಯ ಕಾಯ್ದೆಯಡಿ ಅಪರಾಧ ಎನಿಸಿಕೊಂಡಿದೆ. ಈ ಹಿಂದೆ ಪ್ರಕರಣ ದಾಖಲಾಗಿದ್ದಾಗ, ಬಾತುಕೊಳಿಗಳನ್ನು ಸ್ನೇಹಿತರು ನೀಡಿದ್ದರು ಎಂದು ಸ್ಪಷ್ಟನೆಯನ್ನು ನೀಡಿದ್ದರು ದರ್ಶನ್, ಬಾತುಕೋಳಿಗಳನ್ನು ವಶಕ್ಕೆ ಪಡೆದಿದ್ದ ಅಧಿಕಾರಿಗಳು ನಟ ದರ್ಶನ್ ವಿರುದ್ಧ ನಿಷೇಧಿತ ವನ್ಯ ಪಕ್ಷಿಗಳ ಸಾಕಣೆಗಾಗಿ ಪ್ರಕರಣ ದಾಖಲಿಸಿದ್ದರು.