ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ಇಲಾಖೆಯಲ್ಲಿ 27 ಮಂದಿ ಎಂಜನಿಯರ್‌ಗಳ ಅಮಾನತ್ತು

ಬೆಂಗಳೂರು: ವರ್ಗಾಯಿಸಿದ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪವೆಸಗಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ 27 ಮಂದಿ ಸಹಾಯಕ ಕಾರ್ಯಪಾಲಕ ಎಂಜನಿಯರ್‌ಗಳು, ಸಹಾಯಕ ಎಂಜನಿಯರ್‌ಗಳು ಹಾಗೂ ಜೂನಿಯರ್‌ ಎಂಜನಿಯರ್‌ಗಳನ್ನು ಸೇವೆಯಿಂದ ಅಮಾನತ್ತು ಪಡಿಸಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಿದೆ.      

 

ನಾಗರಿಕ ಸೇವಾ ನಿಯಮಗಳು 1957ರ ನಿಯಮ 10(1) (ಡಿ) ಅಡಿ ಪ್ರದತ್ತವಾದ ಅಧಿಕಾರದನ್ವಯ ಈ ಎಲ್ಲ ಅಧಿಕಾರಿಗಳನ್ನು ಇಲಾಖಾ ತನಿಖೆ ಕಾದಿರಿಸಿ ಮುಂದಿನ ಆದೇಶದವರೆಗೆ ಅಮಾನತ್ತುಪಡಿಸಿ ಆದೇಶ ಹೊರಡಿಸಲಾಗಿದೆ.                                                               

ಅಮಾನತ್ತುಗೊಂಡಿರುವ ಅಧಿಕಾರಿಗಳನ್ನು ತಕ್ಷಣವೇ ಹುದ್ದೆಯಿಂದ ಬಿಡುಗಡೆಗೊಳಿಸಲು ಸೂಚಿಸಲಾಗಿದೆ

ಅಮಾನತ್ತುಗೊಂಡ ಅಧಿಕಾರಿಗಳಲ್ಲಿ 5 ಮಂದಿ ಸಹಾಯಕ ಕಾರ್ಯಪಾಲಕ ಎಂಜನಿಯರ್‌ಗಳು (ಎಇಇ), 7 ಮಂದಿ ಸಹಾಯಕ ಎಂಜನಿಯರ್‌ಗಳು (ಎಇ) ಹಾಗೂ 15 ಮಂದಿ ಜೂನಿಯರ್‌ ಎಂಜನಿಯರ್‌ಗಳು (ಜೆಇ) ಸೇರಿದ್ದಾರೆ.    

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top