ತಾವು 200 ಸ್ಥಾನ ಗೆಲ್ಲುವುದೂ ಕಷ್ಟ ಎನ್ನುವುದು ತಾನೇ ನಡೆಸಿದ ಆಂತರಿಕ ಸಮೀಕ್ಷೆಯಿಂದ BJP ಗೆ ಸ್ಪಷ್ಟವಾಗಿದೆ: ಸಿ.ಎಂ.ಸಿದ್ದರಾಮಯ್ಯ
ಮೈಸೂರು : ತಾವೇ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿ ಕೇವಲ 200 ಲೋಕಸಭಾ ಸೀಟುಗಳನ್ನು ಗೆಲ್ಲುವುದೂ ಕಷ್ಟ ಎನ್ನುವುದು ಗೊತ್ತಾಗಿದೆ. ಹೀಗಾಗಿ ತಂತ್ರಗಾರಿಕೆ ಕಾರಣದಿಂದ 400 ಸೀಟು ಗೆಲ್ಲುವುದಾಗಿ ಹೇಳುತ್ತಿದೆ. ದೇಶದ ಜನರನ್ನು ನಿರಂತರವಾಗಿ ಮೂರ್ಖರನ್ನಾಗಿಸುತ್ತೇವೆ ಎಂದು ಹೊರಟವರೇ ಜನರ ಎದುರು ಮೂರ್ಖರಾಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.