Accident

ಅಪರಿಚಿತ ವಾಹನ ಡಿಕ್ಕಿ – ವಾನರ ಸಾವು

ಕೊಪ್ಪಳ: ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆ ಪರಿಣಾಮ ವಾನರ ಅಸುನೀಗಿರುವ ಘಟನೆ ಶಹಪುರ-ಹಿಟ್ನಾಳ್ ಟೋಲ್ ಗೇಟ್ ಮಧ್ಯೆ ಜರುಗಿದೆ.

ರಸ್ತೆ ಅಪಘಾತ : ರೈತ ಮುಖಂಡ ಕಾರ್ತಿಕ್ ನಿಧನ

ಹೊಸಪೇಟೆ : ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಬೂದಗುಂಪಾ ಕ್ರಾಸ್ ಬಳಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ರೈತ ನಾಯಕ ಜೆ. ಕಾರ್ತಿಕ್ ( 40 ) ಸಾವನ್ನಪ್ಪಿದ್ದಾರೆ.

ಹಿಟ್ ಅಂಡ್ ರನ್ ಅಪಘಾತ ಪ್ರಕರಣದಲ್ಲಿ ಹೊಸ ತಿದ್ದುಪಡಿ ಕೈಬಿಡುವಂತೆ ಆಗ್ರಹಿಸಿ ಜ.17 ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ

ಬೆಂಗಳೂರು : ಗುದ್ದೋಡು [ಹಿಟ್ ಅಂಡ್ ರನ್] ಪ್ರಕರಣದಲ್ಲಿ 10 ವರ್ಷ ಜೈಲು ಹಾಗೂ 7 ಲಕ್ಷ ರೂಪಾಯಿ ದಂಡ ವಿಧಿಸುವ ಕೇಂದ್ರ ಸರ್ಕಾರದ ರಸ್ತೆ ಸಂಚಾರಿ ಕಾನೂನು ತಿದ್ದುಪಡಿ ವಿರೋಧಿಸಿ ದಕ್ಷಿಣ ಭಾರತದ ಲಾರಿ ಮಾಲೀಕರ ಸಂಘ ಜನವರಿ 17 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಲಾರಿ ಮುಷ್ಕರದಿಂದ ರಾಜ್ಯದಲ್ಲಿ ಅಗತ್ಯವಸ್ತುಗಳ ಸಾಗಾಟದ ಮೇಲೆ ಪರಿಣಾಮವಾಗುವ ಸಾಧ್ಯತೆ ಇದೆ.

ಕೂಡ್ಲಿಗಿ ಸಮೀಪ ಕಾರು ಡಿಕ್ಕಿ : ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು

ಕೂಡ್ಲಿಗಿ : ಶಬರಿಮಲೈ ಕಡೆಗೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕೂಡ್ಲಿಗಿ ಸಮೀಪದ ಚಿಕ್ಕ ಜೋಗಿಹಳ್ಳಿ ಕ್ರಾಸ್ ಬಳಿಯ ಹೈವೇಯಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗಳಾಗಿದ್ದ ಇಬ್ಬರು ಅಯ್ಯಪ್ಪ ಮಾಲಾ ಧಾರಿಗಳು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದು ಇನ್ನುಳಿದ ಮೂವರು ದಾವಣಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಇಂದು ನಡೆದಿದೆ.

ಟಾಟಾ ಸುಮೊ‌ ಮತ್ತು ಕಂಟೈನರ್ ಲಾರಿ ನಡುವೆ ಭೀಕರ ಅಪಘಾತ

ಚಿಕ್ಕಬಳ್ಳಾಪುರ: ಇಂದು ಬೆಳಗಿನ ಜಾವ ಚಿಕ್ಕಬಳ್ಳಾಪುರ ಚಿತ್ರಾವಳಿ ಬಳಿ ರಸ್ತೆ ಬದಿ ನಿಂತಿದ್ದ ಕಂಟೈನರ್ ಲಾರಿಗೆ ಟಾಟಾ ಸುಮೋ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮವಾಗಿ ಸುಮೋದಲ್ಲಿ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಗಂಭೀರವಾಗಿ ಗಾಯಗೊಂಡಿದ್ದ ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ

ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ : ಹೊತ್ತಿ ಉರಿದ ಕಾರು

ಮೈಸೂರು: ಶ್ರೀರಂಗಪಟ್ಟಣದಲ್ಲಿ ಹಾದು ಹೋಗಿರುವ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿ ಕಾರುಗಳು ನುಜ್ಜು ಗುಜ್ಜಾಗಿ ಕಾರೊಂದು ಹೊತ್ತಿ ಉರಿದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂ. ಪರಿಹಾರ

ಹೊಸಪೇಟೆ: ವಿಜಯ ನಗರ ಜಿಲ್ಲೆ ಹೊಸಪೇಟೆ ತಾಲೂಕಿನ ವ್ಯಾಸನಕೆರೆ ರೈಲ್ವೆ ನಿಲ್ದಾಣ ಸಮೀಪ ಸೋಮವಾರ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಏಳು ಮಂದಿ ಕುಟುಂಬ ಕ್ಕೆ ತಲಾ ಎರಡು ಲಕ್ಷ ರೂ. ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಭೀಕರ ರಸ್ತೆ ಅಪಘಾತ : 7 ಜನ ದುರ್ಮರಣ

ಹೊಸಪೇಟೆ : ದೇವಸ್ಥಾನಕ್ಕೆ ಹೋಗಿ ಮನೆಗೆ ಬರುವಾಗ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿದ ಘಟನೆ ಹೊಸಪೇಟೆ ಹೊರ ವಲಯದ ವ್ಯಾಸನಕೇರಿ ಬಳಿ ನಡೆದಿದೆ.

ಬೈಕ್ ವೀಲ್ಹಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

ಚಿಕ್ಕಬಳ್ಳಾಪುರ: ಸಿನಿಮೀಯ ಶೈಲಿಯಲ್ಲಿ ಬೈಕ್ ವೀಲ್ಹಿಂಗ್ ಮಾಡುತ್ತಿದ್ದಾಗ ನಿಯಂತ್ರಣ ಕಳೆದುಕೊಂಡ ಪರಿಣಾಮ ಅಪಘಾತಕ್ಕೀಡಾಗಿ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವುಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ. ಇದೀಗ ಆತ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಅಪ್ರೋಜ್ ಪಾಷಾ (16) ಮೃತ ವಿದ್ಯಾರ್ಥಿ.

Translate »
Scroll to Top