ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಸಮಗ್ರ ಅಭಿವೃದ್ಧಿಯೇ ನಮ್ಮ ಸರ್ಕಾರದ ಮುಖ್ಯ ಗುರಿ
ಬೆಂಗಳೂರು: 2023-24 ನೇ ಸಾಲಿನ ರಾಜ್ಯ ಸರ್ಕಾರದ ಆಯವ್ಯಯದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 5000 ಕೋಟಿ ರೂಪಾಯಿಗಳ ಅನುದಾನ ಮೀಸಲಿಟ್ಟಿದ್ದು,ಮಂಡಳಿ ವ್ಯಾಪ್ತಿಗೆ ಬರುವ ಎಲ್ಲಾ ಜಿಲ್ಲೆಗಳಿಗೆ ಸಮಾನ ರೀತಿಯಲ್ಲಿ ಕ್ರಿಯಾಯೋಜನೆ ರೂಪಿಸಿ ಕಾಮಗಾರಿಗಳನ್ನು ಅನುಷ್ಠಾನಕ್ಕೆ ತಂದು ಕಳೆದ ಸರ್ಕಾರದ ಅವಧಿಯಲ್ಲಿ ಕುಂಟಿತವಾದ ಕಾಮಗಾರಿಗಳನ್ನು ಹಾಗೂ ಅರೋಗ್ಯ ಇಲಾಖೆ, ಶಿಕ್ಷಣ, ಇಲಾಖೆ, ಎಸ್. ಸಿ & ಎಸ್. ಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತೇವೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದರು