ದಾಖಲೆಯಿಲ್ಲದ 8.23 ಲಕ್ಷ ಹಣ ಪೊಲೀಸರ ವಶ
ಕಂಪ್ಲಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆಯು ಕಟ್ಟುನಿಟ್ಟಾಗಿ ಜಾರಿಯಲ್ಲಿದ್ದು, 91-ಕಂಪ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಂಪ್ಲಿ-ಕೋಟೆ ಚೆಕ್ ಪೋಸ್ಟ್ನಲ್ಲಿ ಶುಕ್ರವಾರ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅನಧಿಕೃತವಾಗಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 8ಲಕ್ಷ23 ಸಾವಿರ ರೂಪಾಯಿ ಹಣವನ್ನು ಕಂಪ್ಲಿ ಪೊಲೀಸರು ವಶಕ್ಕೆ ಪಡೆಸಿದ್ದಾರೆ.