Ballari

‘ಭಾರತೀಯ ನ್ಯಾಯ ಸಂಹಿತೆ 2023’ರ ಒಂದು ದಿನದ ಕಾರ್ಯಗಾರ

ಬಳ್ಳಾರಿ : ಕೇಂದ್ರ ಸಂವಹನ ಇಲಾಖೆ, ವುಂಕಿ ಸಣ್ಣ ರುದ್ರಪ್ಪ ಕಾನೂನು ಮಹಾವಿದ್ಯಾಲಯ ಮತ್ತು ಕನ್ನಡ ಸಾಹಿತ್ಯ ಪರಿಷತ್ ಇವರ ಸಂಯುಕ್ತಾಶ್ರಯದಲ್ಲಿ ನಗರದ ವಿಎಸ್ ಲಾ ಕಾಲೇಜು ಸಭಾಂಗಣದಲ್ಲಿ ಬುಧವಾರದಂದು ‘ಭಾರತೀಯ ನ್ಯಾಯ ಸಂಹಿತೆ 2023’ ರ ಕುರಿತು ಒಂದು ದಿನದ ಕಾರ್ಯಗಾರ ನಡೆಯಿತು.

ಸಂಡೂರು ಕಾಡಿನ ಎತ್ತರದ ಗುಹೆಗಳಲ್ಲಿ ಶಿಲಾಯುಗದ ಮಾನವನ ನೆಲೆಯ ಶೋಧ

ಬಳ್ಳಾರಿ : ಜಿಲ್ಲೆಯ ಸಂಡೂರಿನ ದಟ್ಟ ಕಾಡಿನಲ್ಲಿ ಸಮುದ್ರಮಟ್ಟಕ್ಕಿಂತ ಅತಿ ಎತ್ತರದ ಗುಹೆಗಳಲ್ಲಿ ಶಿಲಾಯುಗದ ಮಾನವನ ನೆಲೆಯ ಕುರಿತು ತಜ್ಞರ ಶೋಧನೆಯಿಂದ ಕಂಡುಬಂದಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಬೆಳೆ ವಿಮೆ ನೋಂದಣಿ : ರೈತರಿಗೆ ಇದು ಸಕಾಲ

ಬಳ್ಳಾರಿ : ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿದ್ದು, ರೈತರು ಮುಂಜಾಗ್ರತಾ ಕ್ರಮವಾಗಿ ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳುವುದು ಸೂಕ್ತವಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.

ಆರೋಗ್ಯ ಸೇವೆಯನ್ನು ಇಂದಿಗೂ ಸೇವೆಯಾಗಿಯೇ ಉಳಿಸಿಕೊಳ್ಳಬೇಕಿದೆ

ಬಳ್ಳಾರಿ : “ಸುಮಾರು 50 ವರ್ಷಗಳಿಂದ ಬಳ್ಳಾರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಸಂಸ್ಥೆಯು ನಿಜವಾಗಿಯೂ ಅಭಿನಂದನೆಗೆ ಅರ್ಹವಾಗಿದೆ ಎಂದು ಬಳ್ಳಾರಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್ ಹೇಳಿದರು.

ಸದನದಲ್ಲಿ ಸಿದ್ದರಾಮಯ್ಯ ವಿರುದ್ಧ ನಡೆಸುತ್ತಿದ್ದ ಧರಣಿ ವಾಪಸ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆಗೆ ಒತ್ತಾಯಿಸಿ ಕಳೆದ ಗುರುವಾರದಿಂದ ವಿಧಾನಸಭೆಯಲ್ಲಿ ನಡೆಸುತ್ತಿದ್ದ ಧರಣಿಯನ್ನು ಪ್ರತಿಪಕ್ಷಗಳು ವಾಪಸ್ಸು ಪಡೆದವು.

ವಿಶ್ವಕರ್ಮ ಮಹೋತ್ಸವ ಉದ್ಘಾಟನೆಗೆ ರಾಜ್ಯಪಾಲರಿಗೆ ಆಹ್ವಾನ

ಬೆಂಗಳೂರು : ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದಿಂದ ಸೆಪ್ಟಂಬರ್ 27 ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿರುವ ಶ್ರೀ ವಿರಾಟ್ ವಿಶ್ವಕರ್ಮ ಮಹೋತ್ಸವವನ್ನು ಉದ್ಘಾಟಿಸಿ, ಶಿಲ್ಪಿಗಳಿಗೆ ಪ್ರಶಸ್ತಿ ಪ್ರಧಾನ ಮಾಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಲಾಗಿದೆ.

ಕಲಬುರಗಿಯಲ್ಲಿ ನಿರ್ಮಾಣವಾಗಿರುವ  ಪರೀಕ್ಷಾ ಪೂರ್ವ ತರಬೇತಿ ಕೇಂದ್ರ ಶೀಘ್ರ ಕಾರ್ಯಾರಂಭಿಸಿ

ಬೆಂಗಳೂರು : ಸಮಾಜಕಲ್ಯಾಣ ಇಲಾಖೆ ಕಲಬುರಗಿಯಲ್ಲಿ ನಿರ್ಮಾಣ ಮಾಡಿರುವ ನೈಸ್ (ನಾಗಾವಿ ಇನ್ಸಿಟ್ಯೂಟ್ ಆಫ್ ಕಾಂಪಿಟೇಟಿವ್ ಎಕ್ಸಾಮಿನೇಷನ್ಸ್) ಪರೀಕ್ಷಾಪೂರ್ವ ತರಬೇತಿ ಕೇಂದ್ರವನ್ನು ಕೋಡಲೇ ಕಾರ್ಯಾರಂಭಿಸಲು ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಹಾಗು ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಸೂಚಿಸಿದರು.

ಚುನಾವಣೆ ವೇಳೆ ಮಾತ್ರ ಬಣ್ಣ ಬಣ್ಣದ ಕಥೆ ಕಟ್ಟುತ್ತದೆ ಕಾಂಗ್ರೆಸ್- ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ ಮಾತ್ರ ಬಡವರ ಪರ, ಪರಿಶಿಷ್ಟರ ಪರ ಎನ್ನುತ್ತ ಬಣ್ಣ ಬಣ್ಣದ ಕತೆ ಕಟ್ಟುತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದ್ದಾರೆ.

ಸಹಕಾರ ಮಾರಾಟ ಮಹಾಮಂಡಳದ ಎಂ.ಡಿ ಹುದ್ದೆಗೆ ನಿವೃತ್ತ ಅಧಿಕಾರಿ ಕೆ.ಎಂ. ಆಶಾ ನೇಮಕ 

ಬೆಂಗಳೂರು: ಸಹಕಾರ ಮಾರಾಟ ಮಹಾ ಮಂಡಳ ನಿಯಮಿತ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನಿವೃತ್ತ ಅಧಿಕಾರಿ ಕೆ.ಎಂ. ಆಶಾ ಅವರನ್ನು ನೇಮಿಸಿರುವುದು ಸಹಕಾರ ಇಲಾಖೆಯಲ್ಲಿ ಅಸಮಾಧಾನ ಭುಗಿಲೇಳುವಂತಾಗಿದೆ.

Translate »
Scroll to Top