ಬಳ್ಳಾರಿ ಲೋಕಸಭಾ ಕ್ಷೇತ್ರ: ಒಂದು ಹಿನ್ನೋಟ

ಬಳ್ಳಾರಿ : ಗಣಿನಾಡು ಎಂದೇ ಖ್ಯಾತಿ ಹಾಗೂ ಬಿಸಿಲ ನಾಡು ಎಂಬ ಕುಖ್ಯಾತಿ ಹೊಂದಿರುವ ಅಖಂಡ (ಈಗಿನ ವಿಜಯನಗರ ಜಿಲ್ಲೆ ಒಳಗೊಂಡಂತೆ) ಬಳ್ಳಾರಿ ಜಿಲ್ಲೆಯು ಐತಿಹಾಸಿಕವಾಗಿ ಪ್ರಾಮುಖ್ಯತೆ ಪಡೆದಿದ್ದು, ಇಂತಹ ಜಿಲ್ಲೆಯಲ್ಲಿ ೧೯೫೧-೫೨ ರಿಂದ ೨೦೧೯ ವರೆಗಿನ ಲೋಕಸಭಾ ಚುನಾವಣಾ ಇತಿಹಾಸವನ್ನು ಗಮನಿಸಿದಾಗ ಚುನಾವಣೆಯಿಂದ ಚುನಾವಣೆಗೆ ಜಿದ್ದಾ ಜಿದ್ದಿನ ಸ್ಪರ್ಧೆ ನಡೆದಿರುವುದು ವಿಶೇಷ. ಇದೀಗ ಮತ್ತೊಮ್ಮೆ ಲೋಕಸಭೆಗೆ ಚುನಾವಣೆ ಘೋಷಣೆಯಾಗಿದ್ದು, ಬೇಸಿಗೆಯ ಬಿಸಿ ಏರುತ್ತಿರುವಂತೆಯೇ, ಚುನಾವಣಾ ಕಣವೂ ಕೂಡ ರಂಗೇರುತ್ತಿದೆ.