ಆ.1ರಂದು ವೇತನದ ವ್ಯತ್ಯಾಸದ ಹಣ ಪಾವತಿ
ಬಳ್ಳಾರಿ: ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರ ವೇತನದಲ್ಲಿ ನಡೆದ ಅವ್ಯವಹಾರದ ಬಗ್ಗೆ ಧ್ವನಿ ಎತ್ತಿದ ಹೊರಗುತ್ತಿಗೆ ನೌಕರರ ಸಮಸ್ಯೆಗೆ ಪರಿಹಾರ ಸಿಕ್ಕಿದ್ದು, ಮೂರ್ನಾಲ್ಕು ದಿನಗಳಲ್ಲಿ ಅವರವರ ಬ್ಯಾಂಕ್ ಖಾತೆಗೆ ಹಣ ಸಂದಾಯವಾಗಲಿದೆ.