ballary

ಲೋಕಸಭಾ ಚುನಾವಣೆ: ವಿಜಯಪುರ, ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ಚುನಾವಣಾ ಪ್ರಚಾರ!

ಬಳ್ಳಾರಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ವಿಜಯಪುರ ಮತ್ತು ಬಳ್ಳಾರಿಯಲ್ಲಿ ಸರ್ವ ಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷ ತಿಳಿಸಿದೆ.

ಲಂಚ: ಬುಡಾ ಆಯುಕ್ತ ಸೇರಿ 6 ಮಂದಿ ಲೋಕಾಯುಕ್ತ ಬಲೆಗೆ

ಬಳ್ಳಾರಿ: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಂದ ₹5ಲಕ್ಷ ಲಂಚ ಸ್ವೀಕರಿಸುತ್ತಿದ್ದ ‘ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ’(ಬುಡಾ)ದ ಆಯುಕ್ತ ರಮೇಶ್ ವಟಗಲ್ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ದೇವದಾಸ್ ಅವರಿಗೆ ಎಐಡಿಎಸ್ಓ ವತಿಯಿಂದ ವಿದ್ಯಾರ್ಥಿಗಳ ಬೇಡಿಕೆಯ ಪ್ರಣಾಳಿಕೆ ಸಲ್ಲಿಕೆ

ಬಳ್ಳಾರಿ: ದುಡಿಯುವ ಜನರ ಹೋರಾಟದ ಧ್ವನಿಯಾಗಿರುವ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ದೇವದಾಸ್ ಅವರಿಗೆ ಎಐಡಿಎಸ್ಓ ವತಿಯಿಂದ ವಿದ್ಯಾರ್ಥಿಗಳ ಬೇಡಿಕೆಯ ಪ್ರಣಾಳಿಕೆಯನ್ನು ಸಲ್ಲಿಸಲಾಯಿತು.

ಬಳ್ಳಾರಿಯಲ್ಲಿ ದಾಖಲೆ ಇಲ್ಲದ 23 ಲಕ್ಷ ಹಣ, ಚಿನ್ನ, ಬೆಳ್ಳಿ ವಶ

ಬಳ್ಳಾರಿ: ಬಳ್ಳಾರಿ ನಗರದ ಆಭರಣದಂಗಡಿ ಮಾಲೀಕ ಕಮಲೇಶ್ ಜೈನ್ ಎಂಬುವವರ ಮನೆ ಮೇಲೆ ಮಂಗಳವಾರ ರಾತ್ರಿ ದಿಢೀರ್ ದಾಳಿ ನಡೆಸಿರುವ ಪೊಲೀಸರು ಸುಮಾರು 23 ಲಕ್ಷ ಹಣ ಹಾಗೂ ಚಿನ್ನ, ಬೆಳ್ಳಿಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನುಡಿದಂತೇ ನಡೆದಿದ್ದೇವೆ, ಕಾಂಗ್ರೆಸ್ಗೆ ಆಶೀರ್ವಾದ ನೀಡಿ: ಸಚಿವ ಬಿ.ನಾಗೇಂದ್ರ

ಬಳ್ಳಾರಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಮಂಗಳವಾರ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯ ಬೇವಿನಹಳ್ಳಿ, ಕಕ್ಕಬೇವಿನಹಳ್ಳಿ, ಅಮರಾಪುರ, ಟಿ.ಬೂದಿಹಾಳು,ಗೋಡೆಹಾಳು ಮತ್ತು ಅಸುಂಡಿ ಗ್ರಾಮಗಳಲ್ಲಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಈ.ತುಕಾರಾಂ ಪರವಾಗಿ ಮತ ಪ್ರಚಾರ ನಡೆಸಿದರು.

ವಿಶ್ರೀಕೃವಿವಿ ಪ್ರಭಾರ ಕುಲಪತಿಯಾಗಿ ಪ್ರೊ. ತಿಪ್ಪೇರುದ್ರಪ್ಪ ಜೆ. ನೇಮಕ

ಬಳ್ಳಾರಿ: ಘನತೆವೆತ್ತ ರಾಜ್ಯಪಾಲರ ಸಚಿವಾಲಯದ ಅಧಿಸೂಚನೆ ಮೇರೆಗೆ, ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯನ್ನಾಗಿ ಅನ್ವಯಿಕ ವಿಜ್ಞಾನ ನಿಕಾಯದ ಡೀನರಾದ ಪ್ರೊ. ತಿಪ್ಪೇರುದ್ರಪ್ಪ ಜೆ. ಅವರನ್ನು ನೇಮಕ ಮಾಡಲಾಗಿದೆ. ಪ್ರಭಾರ ಕುಲಪತಿಯಾಗಿದ್ದ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಅವರು ಅಧಿಕಾರವನ್ನು ಹಸ್ತಾಂತರ ಮಾಡಿದರು. ಪ್ರಭಾರ ಕುಲಪತಿಯಾಗಿದ್ದ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಯವರ ಅವಧಿ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಭಾರ ಕುಲಪತಿಯಾಗಿ ಪ್ರೊ. ತಿಪ್ಪೇರುದ್ರಪ್ಪ ಜೆ. ಅವರು ಇಂದು ಅಧಿಕಾರ ಸ್ವೀಕರಿಸಿದರು.

ಬಳ್ಳಾರಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಮ್ಯಾರಥಾನ್ ಓಟಕ್ಕೆ  ಜಿಲ್ಲಾಧಿಕಾರಿಗಳಿಂದ ಚಾಲನೆ

ಬಳ್ಳಾರಿ: ಲೋಕಸಭಾ ಚುನಾವಣೆ ನಿಮಿತ್ಯ ಮತದಾರರಲ್ಲಿ ಮತದಾನದ ಮಹತ್ವ ಸಾರಲು ಹಾಗೂ ಮತದಾನಕ್ಕೆ ಪ್ರೇರೇಪಿಸುವ ಸಲುವಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಬಳ್ಳಾರಿ ನಗರದಲ್ಲಿ ಭಾನುವಾರ ಏರ್ಪಡಿಸಿದ ಮ್ಯಾರಥಾನ್ ಓಟಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ: ಕ್ರಿಯಾ ಯೋಜನೆ ಸಮರೋಪಾದಿಯಲ್ಲಿ ಅನುಷ್ಠಾನ ಮಾಡಲು ಸಿಎಂ ಖಡಕ್ ಸೂಚನೆ

ಬೆಂಗಳೂರು : ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

ಗ್ಯಾರೆಂಟಿ ಭಾಗ್ಯಗಳಿಗೆ ದಲಿತರ ಕಲ್ಯಾಣದ ಹಣ ಮೀಸಲು ಅನುದಾನ ಬಳಕೆ ಆರೋಪ

ಬೆಳಗಾವಿ : ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ದಲಿತರ ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎನ್ನುವ ವಿಚಾರಕ್ಕೆ ಮೇಲ್ಮನೆಯಲ್ಲಿ ವಿಪಕ್ಷದ ಸದಸ್ಯರು ಸರ್ಕಾರಕ್ಕೆ ಇಕ್ಕಟ್ಟಿಗೆ ಸಿಲುಕಿಸಿ, ಧರಣಿ ನಡೆಸಿದರು.

ಬಜಾಜ್ ಕಂಪೆನಿಯಿಂದ ಸರಕು ಸಾಗಾಣೆ ತ್ರಿಚಕ್ರ ವಾಹನ ಬಿಡುಗಡೆ

ಬೆಂಗಳೂರು: ತ್ರಿಚಕ್ರ ವಾಹನ ವಿಭಾಗದಲ್ಲಿ ಮುಂಚೂಣಿಯಲ್ಲಿರುವ ಬಜಾಜ್ ಆಟೋ, ಕಂಪೆನಿಯಿಂದ ಸರಕು ಸಾಗಾಣೆ ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳನ್ನು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿತು.

Translate »
Scroll to Top