ಎಲ್ಲಾ ಕ್ಷೇತ್ರಗಳ ಮುಖಂಡರ ಜತೆ ಹೆಚ್.ಡಿ.ಕುಮಾರಸ್ವಾಮಿ ಸಮಾಲೋಚನೆ
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿ ಪೂರ್ವ ಸಿದ್ಧತೆ ಹಾಗೂ ಸ್ಥಳೀಯ ಮಟ್ಟದಲ್ಲಿ ಮಿತ್ರಪಕ್ಷ ಬಿಜೆಪಿ ಜತೆ ನಾಯಕರು, ಕಾರ್ಯಕರ್ತರ ಜತೆ ಹೊಂದಾಣಿಕೆ ಸೇರಿದಂತೆ ವಿವಿಧ ಅಂಶಗಳ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮಹತ್ವದ ಸಭೆ ನಡೆಸಿದರು.