Bengalore

ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ರಾಜ್ಯ ಸರ್ಕಾರದ ಹೊಸ ಕಾರ್ಯಸೂಚಿ

ಬೆಂಗಳೂರು,ಜ,5 : ರಾಜ್ಯದಲ್ಲಿ ಕೋವಿಡ್-19 ರೂಪಾಂತರಿ ವೈರಸ್ ಒಮಿಕ್ರಾನ್ ವೈರಾಣು ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ರಾಜ್ಯ ಸರ್ಕಾರ ಹೊಸ ಕಾರ್ಯಸೂಚಿಯನ್ನು ಹೊರಡಿಸಿದೆ. ಸಚಿವಾಲಯದ ಮುಖ್ಯಮಂತ್ರಿ ಕಚೇರಿ, ಸಚಿವರು ಮತ್ತು ಸಚಿವಾಲಯದ ಇಲಾಖೆಗಳಿಂದ ಮುಂಚಿತವಾಗಿ ನಿಗದಿಪಡಿಸಲಾಗಿರುವ, ಭೇಟಿಗೆ ಆಗಮಿಸುವ ಇಲಾಖೆ ಮುಖ್ಯಸ್ಥರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಕಡ್ಡಾಯವಾಗಿ 2 ನೇ ಡೋಸ್ ಪಡೆದಿರುವ ಪ್ರಮಾಣ ಪತ್ರವನ್ನು ಹೊಂದಿರಬೇಕು. ಈ ಪ್ರಮಾಣ ಪತ್ರವನ್ನು ಹೊಂದಿದವರು ಮಾತ್ರ ಕಚೇರಿಗೆ ಆಗಮಿಸಬೇಕು. ಒಂದು ವೇಳೆ …

ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ರಾಜ್ಯ ಸರ್ಕಾರದ ಹೊಸ ಕಾರ್ಯಸೂಚಿ Read More »

ಒಮಿಕ್ರಾನ್ ದೀರ್ಘಾವಧಿ ಕ್ರಮಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ

ಬೆಂಗಳೂರು, ಜನವರಿ 03: ಗುರುವಾರದಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಒಟ್ಟಾರೆ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚೆ ಮಾಡಿ ದೀರ್ಘಾವಧಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಾಧ್ಯಮ ದವರೊಂದಿಗೆ ಮಾತನಾಡುತ್ತಿದ್ದರು. ಕೋವಿಡ್ ಮತ್ತು ಒಮಿಕ್ರಾನ್ ವೈರಸ್ ವೇಗವಾಗಿ ದೇಶ ಹಾಗೂ ರಾಜ್ಯಗಳಲ್ಲಿ ಹರಡುತ್ತಿದೆ. ಈ ಬಗ್ಗೆ ತಜ್ಞರೊಂದಿಗೆ ನಾಳೆ ಸಂಜೆ ಸಭೆ ನಡೆಸಿ ಚರ್ಚಿಸಲಾಗುವುದು. ಹಿಂದೆ ಎರಡು ಅಲೆಗಳನ್ನು ನಿಭಾಯಿಸಿರುವ ಅನುಭವದ ಹಿನ್ನೆಲೆಯಲ್ಲಿ ಆದಷ್ಟೂ …

ಒಮಿಕ್ರಾನ್ ದೀರ್ಘಾವಧಿ ಕ್ರಮಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ Read More »

ಕೋವಿಡ್ ತೊಲಗಿಸಲು ಪಣ ತೋಡೋಣ: ಮುಖ್ಯ ಮಂತ್ರಿ

ಬೆಂಗಳೂರು, ಜನವರಿ 03: 2022ನ್ನು ಆರೋಗ್ಯಭರಿತ ಹಾಗೂ ಕೋವಿಡ್ ಮುಕ್ತ ವರ್ಷವನ್ನಾಗಿ ಮಾಡಲು ಸಂಕಲ್ಪ ತೋಡೋಣ. ಕೋವಿಡ್ ವಿರುದ್ದ ಒಟ್ಟಾಗಿ ಸಮರವನ್ನು ಸಾರಿ ತೊಲಗಿಸಲು ಪಣ ತೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು. ಅವರು ಇಂದು ಭೈರವೇಶ್ವರನಗರದ ಬಿಬಿಎಂಪಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಸ್ನಾತಕೋತ್ತರ ಕಾಲೇಜಿನಲ್ಲಿ 15-18 ವರ್ಷದೊಳಗಿನ ಶಾಲಾ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಕರ್ನಾಟಕದಲ್ಲಿ ಅತ್ಯಂತ ಯಶಸ್ವಿಯಾಗಿ ಕೋವಿಡ್ ನ್ನು ನಿಯಂತ್ರಣ …

ಕೋವಿಡ್ ತೊಲಗಿಸಲು ಪಣ ತೋಡೋಣ: ಮುಖ್ಯ ಮಂತ್ರಿ Read More »

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಡಿ.ಕೆ. ಶಿವಕುಮಾರ್

ಮೈಸೂರು,ಜ,3 : ಯಾವುದೇ ಶುಭ ಕಾರ್ಯಕ್ರಮ ಮಾಡುವ ಮುನ್ನ ದೇವಿಯ ಪ್ರಾರ್ಥನೆ ಮಾಡುವುದು ಸಂಪ್ರದಾಯ. ಎಲ್ಲ ಅಡಚಣೆಗಳನ್ನು ಸಂಹಾರ ಮಾಡುವ ಶಕ್ತಿ ಈ ದೇವಿಗೆ ಇದೆ. ತಾಯಿ ಚಾಮುಂಡೇಶ್ವರಿಯನ್ನು ನಂಬಿರುವವರು ನಾವು. ನಾನು ರಾಜ್ಯದ ಹಿತ, ಕುಡಿಯುವ ನೀರು, ಕಾವೇರಿ ಜಲಾನಯನ ಪ್ರದೇಶದ ರೈತರಿಗಾಗಿ ನಾವು ಮೇಕೆದಾಟು ಹೋರಾಟ ಮಾಡುತ್ತಿದ್ದೇವೆ. ಚಾಮರಾಜನಗರ ನಗರ ಕೂಡ ಮೈಸೂರು ಜಿಲ್ಲೆ ಭಾಗ. ಮತ್ತೊಂದು ರಾಮನಗರ ಬೆಂಗಳೂರಿನ ಒಂದು ಭಾಗ. ಮೇಕೆದಾಟು ಒಂದು ದಡ ಮೈಸೂರು ಜಿಲ್ಲೆಯಾದರೆ, ಮತ್ತೊಂದು ದಡ ಬೆಂಗಳೂರಿಗೆ …

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಡಿ.ಕೆ. ಶಿವಕುಮಾರ್ Read More »

ದೇವಾಲಯಗಳನ್ನು ಸ್ವತಂತ್ರಗೊಳಿಸುವ ನಿರ್ಧಾರ ಕುರಿತು ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು,ಜ,2 : ಸರ್ಕಾರವು ರಾಜ್ಯದ ದೇವಸ್ಥಾನಗಳನ್ನು ಸ್ವತಂತ್ರಗೊಳಿಸುವುದಾಗಿ, ಸ್ವಾಯತ್ತಗೊಳಿಸುವುದಾಗಿ ಹೇಳುತ್ತಿದೆ. ದೇವಸ್ಥಾನಗಳು ಈಗಲೂ ಸ್ವತಂತ್ರವಾಗಿಯೆ ಇವೆ. ಸರ್ಕಾರ ಅನೇಕ ದೇವಸ್ಥಾನಗಳಿಗೆ ನೆರವು ನೀಡುವುದರ ಮೂಲಕ ಅವುಗಳನ್ನು ಪೊರೆಯುತ್ತಿದೆ. ಮುಜರಾಯಿ ಇಲಾಖೆಯ ವಾರ್ಷಿಕ ಬಜೆಟ್ಟು ಸುಮಾರು ೩೫೦ ಕೋಟಿಗಳಷ್ಟಿದೆ. ಸರ್ಕಾರವೇ ದೇವಸ್ಥಾನಗಳನ್ನು ನಡೆಸುವುದೆಂದರೆ ಸಮಾಜದ ಕಟ್ಟ ಕಡೆಯ ಮನುಷ್ಯರಿಗೂ ಅವುಗಳ ಮೇಲೆ ಹಕ್ಕುಗಳು ಇವೆಯೆಂದು ಅರ್ಥ. ಸರ್ಕಾರ ದೇವಸ್ಥಾನಗಳ ಮೇಲಿನ ಹಿಡಿತವನ್ನು ತಪ್ಪಿಸುವುದೆಂದರೆ ಜನ ಸಮುದಾಯಗಳಿಗೆ ಇರುವ ಅಧಿಕಾರವನ್ನು ತಪ್ಪಿಸುವುದೆಂದು ಅರ್ಥ. ಈಗ ಸರ್ಕಾರ ಮಾಡ ಹೊರಟಿರುವುದೇನೆಂದರೆ ನಾಡಿನ …

ದೇವಾಲಯಗಳನ್ನು ಸ್ವತಂತ್ರಗೊಳಿಸುವ ನಿರ್ಧಾರ ಕುರಿತು ಸಿದ್ದರಾಮಯ್ಯ ಹೇಳಿಕೆ Read More »

ಕಾಂಗ್ರೆಸ್‍ನವರದು ಮತದ ಮೇಲಿನ ಅಂಧತೆ- ಸಿ.ಟಿ.ರವಿ

ಬೆಂಗಳೂರು,ಜ,2 : ತಾಲಿಬಾನ್‍ನದು ಮತಾಂಧತೆ; ಕಾಂಗ್ರೆಸ್‍ನವರದು ಮತದ ಮೇಲಿನ ಅಂಧತೆ. ತಾಲಿಬಾನ್‍ಗೂ ಸ್ಪರ್ಧೆ ಕೊಡುವ ರೀತಿಯಲ್ಲಿ ಕಾಂಗ್ರೆಸ್ ಪಕ್ಷದವರ ವರ್ತನೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ. ರವಿ ಅವರು ತಿಳಿಸಿದರು. ನಗರದ “ಸೆವೆನ್ ಮಿನಿಸ್ಟರ್ ಕ್ವಾರ್ಟರ್ಸ್”ನಲ್ಲಿ ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಬಹುಸಂಖ್ಯಾತರ ಭಾವನೆಗೆ ಕವಡೆ ಕಿಮ್ಮತ್ತನ್ನೂ ಕೊಡುತ್ತಿಲ್ಲ. ಕುಟುಂಬಕ್ಕೆ ಜೋತು ಬಿದ್ದ ಪಕ್ಷವಾದ ಕಾಂಗ್ರೆಸ್ ಕಾಲಕ್ಕೆ ತಕ್ಕಂತೆ ಬದಲಾಗುವ ಮನಸ್ಥಿತಿಯನ್ನೂ ಹೊಂದಿಲ್ಲ ಎಂದು ಟೀಕಿಸಿದರು. ಬಿಜೆಪಿ ಏನೇನು …

ಕಾಂಗ್ರೆಸ್‍ನವರದು ಮತದ ಮೇಲಿನ ಅಂಧತೆ- ಸಿ.ಟಿ.ರವಿ Read More »

47ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್‌ ಚಾಂಪಿಯನ್‌ಶಿಪ್‌ನ ಆಟಗಾರರಿಗೆ ಸನ್ಮಾನ

ಬೆಂಗಳೂರು, ಜ.2: 47ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್‌ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದ ಕರ್ನಾಟಕದ ಆಟಗಾರರಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಸನ್ಮಾನಿಸಿದರು. ಪಶ್ಚಿಮ ಬಂಗಾಳದ ಬುರ್ದ್ವಾನ್‌ನಲ್ಲಿ ನಡೆದ ಜ್ಯೂನಿಯರ್ ವಾಲಿಬಾಲ್ ಚಾಂಪಿಯನ್ ಶಿಪ್‌ ಟೂರ್ನಿಯಲ್ಲಿ ಕರ್ನಾಟಕದ ಪುರುಷರ ತಂಡ ದ್ವಿತೀಯ ಸ್ಥಾನ ಪಡೆದಿದೆ. ತಮಿಳುನಾಡಿನ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 3-1 ರಲ್ಲಿ ಪರಾಭವಗೊಳ್ಳುವ ಮೂಲಕ ಕರ್ನಾಟಕ ತಂಡ ಸಿಲ್ವರ್ ಪದಕ ಪಡೆದಿದೆ. ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದ ಮಹಿಳೆಯರ ತಂಡ 8 …

47ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್‌ ಚಾಂಪಿಯನ್‌ಶಿಪ್‌ನ ಆಟಗಾರರಿಗೆ ಸನ್ಮಾನ Read More »

ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

ಗಣರಾಜ್ಯೋತ್ಸವದ ಅಂಗವಾಗಿ 2022ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ …

ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ Read More »

2 ಪಿಎಚ್.ಸಿ, 24/7 ಕೋವಿಡ್ ಲಸಿಕಾ ಕೇಂದ್ರಕ್ಕೆ ಚಾಲನೆ

ಬೆಂಗಳೂರು,ಜ,1 : ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸುಬ್ರಹ್ಮಣ್ಯನಗರ ಮತ್ತು ವೈಯಾಲಿಕಾವಲ್ ಬಡಾವಣೆಗಳಲ್ಲಿ ಎರಡು ನೂತನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮತ್ತು ಒಂದು 24/7 ಕೋವಿಡ್ ಲಸಿಕಾ ಕೇಂದ್ರಕ್ಕೆ ಸ್ಥಳೀಯ ಶಾಸಕರೂ ಆದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಶನಿವಾರ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅವರು ಸುಬ್ರಹ್ಮಣ್ಯ ನಗರದ ಗರಡಿ ಮನೆ ಪ್ರದೇಶದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನೂ ನೆರವೇರಿಸಿಸಿ, ಈ ಕಾಮಗಾರಿಯು ತಕ್ಷಣವೇ ಆರಂಭವಾಗಲಿದೆ ಎಂದರು. ಜೊತೆಗೆ …

2 ಪಿಎಚ್.ಸಿ, 24/7 ಕೋವಿಡ್ ಲಸಿಕಾ ಕೇಂದ್ರಕ್ಕೆ ಚಾಲನೆ Read More »

ಹೂಡಿಕೆದಾರರು ಮತ್ತು ಉದ್ಯಮಿಗಳಿಗೆ ಹೊಸ ವರ್ಷದ ಬಂಪರ್ ಕೊಡುಗೆ ಕೊಟ್ಟ ಸಚಿವ ನಿರಾಣಿ

ಬೆಂಗಳೂರು, ಜ.1- ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ)ಯ ಮೂಲಕ ಕೈಗಾರಿಕಾ ಉದ್ದೇಶಗಳಿಗೆ ಹಂಚಿಕೆಯಾದ 2 ಎಕರೆಗೂ ಹೆಚ್ಚಿನ ಭೂಮಿಯನ್ನು 10 ವರ್ಷಗಳ ಅವಧಿಯ ಭೋಗ್ಯ ಮತ್ತು ಮಾರಾಟ (ಲೀಸ್ ಕಂ ಸೇಲ್ )ಕ್ಕೆ ನೀಡಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ನಿರ್ಧರಿಸಿದೆ. ಈ ಮೂಲಕ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಉದ್ಯಮಿಗಳು ಹಾಗೂ ಕೈಗಾರಿಕೋದ್ಯಮಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ಆರ್.ನಿರಾಣಿ ಅವರು ‘ಹೊಸ ವರ್ಷದ ಬಂಪರ್ ಕೊಡುಗೆ’ ನೀಡಿದ್ದಾರೆ. ಮುಂಬರುವ …

ಹೂಡಿಕೆದಾರರು ಮತ್ತು ಉದ್ಯಮಿಗಳಿಗೆ ಹೊಸ ವರ್ಷದ ಬಂಪರ್ ಕೊಡುಗೆ ಕೊಟ್ಟ ಸಚಿವ ನಿರಾಣಿ Read More »

Translate »
Scroll to Top