Bengalore

ಕಾಂಗ್ರೆಸ್ ಪರವಾದ ಅಲೆಯಿದೆ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ – ಸಿದ್ದರಾಮಯ್ಯ

ಬೆಂಗಳೂರು,ಡಿ,30 : ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಗಾಳಿ ಬೀಸುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರ ಹಿಡಿಯುವುದು ನೂರಕ್ಕೆ ನೂರು ಖಚಿತ ಎಂದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯ ಜನರ ತೀರ್ಪು ಇಂದು ಹೊರಬಿದ್ದಿದೆ. ಚುನಾವಣೆಯಾದ 1187 ಸ್ಥಾನಗಳ ಪೈಕಿ 500 ಕ್ಕೂ ಅಧಿಕ ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆದ್ದಿದೆ. ಫಲಿತಾಂಶದಿಂದ ಜನಾಭಿಪ್ರಾಯ ನಮ್ಮ ಪರವಾಗಿದೆ ಎಂಬುದು …

ಕಾಂಗ್ರೆಸ್ ಪರವಾದ ಅಲೆಯಿದೆ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ – ಸಿದ್ದರಾಮಯ್ಯ Read More »

ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ

ಬೆಂಗಳೂರು,ಡಿ, : ನಾನು ಅಧ್ಯಕ್ಷನಾದ ಮೇಲೆ ಮಾತ್ರ ಕಾಂಗ್ರೆಸ್ ಚುನಾವಣೆಗಳನ್ನು ಗೆಲ್ಲುತ್ತಿಲ್ಲ. ಕಾಂಗ್ರೆಸ್ ಪಕ್ಷ ಗೆಲ್ಲುವುದರ ಹಿಂದೆ ರಾಜ್ಯದ ಜನರ ಅಭಿಪ್ರಾಯ ಅಡಗಿದೆ. ಅದರಲ್ಲೂ ನಗರವಾಸಿಗಳು, ಪಟ್ಟಣವಾಸಿಗಳ ಅಭಿಪ್ರಾಯ ಕಾಂಗ್ರೆಸ್ ಪರ ವಾಲುತ್ತಿದೆ ಎಂಬುದು ಸ್ಪಷ್ಟವಾಗಿದೆ. ಮತದಾರರಿಗೆ ಈ ಸಂದರ್ಭದಲ್ಲಿ ಧನ್ಯವಾದ ಸಲ್ಲಿಸುತ್ತೇನೆ. ಸಾಮಾನ್ಯವಾಗಿ ಶಾಸಕರಿರುವ ಕಡೆ ಆಡಳಿತ ಪಕ್ಷಕ್ಕೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೆಚ್ಚಿನ ಶಕ್ತಿ ಇರುತ್ತದೆ. ಬಿಜೆಪಿ ಆಡಳಿತ ಪಕ್ಷವಾಗಿದ್ದರೂ, ಬಿಜೆಪಿ ಶಾಸಕರಿದ್ದರೂ ಜನರು ಮಾತ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ನಿಂತಿದ್ದಾರೆ. …

ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ Read More »

ಬಿಜೆಪಿ ರಾಜ್ಯ ಕಾರ್ಯಾಲಯಕ್ಕೆ ಖುಷ್ಬೂ ಭೇಟಿ

ಬೆಂಗಳೂರು,ಡಿ, 30 : ಬಿಜೆಪಿ ರಾಷ್ಟ ಘಟಕದ ವಿಶೇಷ ಆಹ್ವಾನಿತರಾದ ಶ್ರೀಮತಿ ಖುಷ್ಬೂ ಅವರು ಇಂದು ಪಕ್ಷದ ಮಲ್ಲೇಶ್ವರದ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಭೇಟಿ ನೀಡಿ ಪಕ್ಷದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ಪಡೆದುಕೊಂಡರು. ಪಕ್ಷವು ಸಂಘಟನಾತ್ಮಕವಾಗಿ ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾಣಾ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್ ಅವರು ಮಾಹಿತಿ ನೀಡಿದರು. ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀಮತಿ ಗೀತಾ …

ಬಿಜೆಪಿ ರಾಜ್ಯ ಕಾರ್ಯಾಲಯಕ್ಕೆ ಖುಷ್ಬೂ ಭೇಟಿ Read More »

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಸಭೆ ನಡೆಸಿದ ಮುಖ್ಯಮಂತ್ರಿ

ಬೆಂಗಳೂರು,ಡಿ,30 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳ ಸಭೆ ನಡೆಸಿದರು. ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್. ಈಶ್ವರಪ್ಪ ಹಾಗೂ ಸಚಿವ ಸಂಪುಟದ ಇತರ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಕಂಡೋರ ಮೇಲೆ ʼಕೈʼ ಇಡುವ ಭಸ್ಮಾಸುರ

ಬೆಂಗಳೂರು,ಡಿ,29 : ನೀರಾವರಿ ವಿಷಯದಲ್ಲಿ ರಾಜ್ಯಕ್ಕೆ ಶ್ರೀ ಹೆಚ್.ಡಿ.ದೇವೇಗೌಡರು ಕೊಟ್ಟ ಕಾಣಿಕೆ ಅಗಣಿತ. ತಮ್ಮ ಜೀವಿತಾವಧಿಯನ್ನೇ ಈ ನೆಲಕ್ಕೆ ನೀರರಿಸಲು ಮುಡಿಪಿಟ್ಟ ಭಗೀರಥರು ಅವರು. ಮೇಕೆದಾಟು ಯೋಜನೆಯ ಮೂಲ ರೂವಾರಿಯೇ ಅವರು. ಅವರನ್ನೇ ಮರೆತ ಕಾಂಗ್ರೆಸ್ ನಾಯಕರು ‘ಸತ್ಯಕ್ಕೆ ಸಮಾಧಿ’ ಕಟ್ಟುತ್ತಿದ್ದಾರೆ. ಅವರಿಗೆ ಸತ್ಯ ಹೇಳಲು ನಾಲಿಗೆ ಹೊರಳುತ್ತದೆ. ಆದರೆ; ಸತ್ಯಕ್ಕೆ ನಾಲಿಗೆ ಪ್ರಮೇಯವೇ ಇಲ್ಲ. ಸತ್ಯ ಸತ್ಯವೇ. ದೇವೇಗೌಡರು ಅಂತಹ ‘ಸತ್ಯದ ಸಾಕ್ಷಿ’. ನೀರಾವರಿಗಾಗಿ ಅವರು ಅವಿರತವಾಗಿ ಶ್ರಮಿಸಿ ನಡೆದಾಡಿದ ನೆಲದ ಮಣ್ಣಿನಮಕ್ಕಳ ನಂಬಿಕೆಯನ್ನೇ ʼಬುಲ್ಡೋಜ್ʼ …

ಕಂಡೋರ ಮೇಲೆ ʼಕೈʼ ಇಡುವ ಭಸ್ಮಾಸುರ Read More »

ಮಹಿಳೆ ಹುಟ್ಟಿನಿಂದಲೇ ಸಾಧಕಿ -ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್

ಬೆಂಗಳೂರು,ಡಿ,28 : ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ KWAA-ಕರ್ನಾಟಕ ಮಹಿಳಾ ಅಚೀವರ್ಸ್ ಅವಾರ್ಡ್ಸ್ 2021 ನೇ ಸಾಲಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 20ಮಹಿಳಾ ಸಾಧಕಿಯರಿಗೆ    ತಾಜ್ – ಯಶವಂತಪುರದ ವಿವಂತಾದಲ್ಲಿ  ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಸಮಾರಂಭದಲ್ಲಿ ದೀಪಾ ಬೆಳಗಿಸಿ ಲೋಕಸಭಾ ಸದಸ್ಯರಾದ  ಶ್ರೀಮತಿ ಸುಮಲತಾ ಅಂಬರೀಶ್, ಗೌರವ ಅತಿಥಿಗಳು -ಡಾ ವಿಶಾಲ್ ರವಿ, ಐಎಎಸ್, ರಾಜಕುಮಾರಿ ಕಾಮಾಕ್ಷಿ ದೇವಿ ವಾಡಿಯಸ್, ಡಾ ಸಿ ವಿನೋದ್ ಹಯಗ್ರೀವ್ ರವರು ಸ್ಪೂರ್ತಿ ವಿಶ್ವಾಸ್ ಸಿ …

ಮಹಿಳೆ ಹುಟ್ಟಿನಿಂದಲೇ ಸಾಧಕಿ -ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್ Read More »

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಉದ್ಘಾಟನೆ

ಬೆಂಗಳೂರು,ಡಿ,28 : ಬಿಜೆಪಿ ರಾಜ್ಯ ಕಾರ್ಯಕಾರಿಣಿ ನಡೆಯಲಿರುವ ಹುಬ್ಬಳ್ಳಿಯ ಡೆನ್ನಿಸನ್ ಹೋಟೆಲ್‍ನಲ್ಲಿ ಇಂದು ಪ್ರದರ್ಶಿನಿಯನ್ನು ಉದ್ಘಾಟಿಸಲಾಯಿತು.ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕದ ಉಸ್ತುವಾರಿಗಳಾದ ಅರುಣ್ ಸಿಂಗ್, ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್, ಕೇಂದ್ರದ ಸಚಿವರಾದ ಪ್ರಲ್ಹಾದ್ ಜೋಷಿ, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಟೆಂಗಿನಕಾಯಿ ಅವರು ಭಾಗವಹಿಸಿದ್ದರು.

ಡ್ರಗ್ಸ್ ವಿರುದ್ಧದ ಸಮರದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಲು ಯುವಕರಿಗೆ ಕರೆ : ಸಿಎಂ

ಬೆಂಗಳೂರು, ಡಿಸೆಂಬರ್ 26 : ಡ್ರಗ್ಸ್ ವಿರುದ್ಧದ ಸಮರದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಲು ಯುವಕರಿಗೆ ಕರೆ ನೀಡಿದರು. ಯುವಜನತೆಯ ಸಹಕಾರದೊಂದಿಗೆ ಕರ್ನಾಟಕದಿಂದ ಡ್ರಗ್ಸ್ ನ್ನು ಸಂಪೂರ್ಣವಾಗಿ ತೊಡೆದುಹಾಕುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಗೃಹ ಇಲಾಖೆ ಮತ್ತು ವಿಜಯ ಕರ್ನಾಟಕ ದಿನಪತ್ರಿಕೆಯ ಜಂಟಿ ಸಹಯೋಗದಲ್ಲಿ ‘ ಮಾದಕ ವಸ್ತುಗಳ ವಿರುದ್ಧ ಕರ್ನಾಟಕ ಅಭಿಯಾನ’ಅಂಗವಾಗಿ ವಿಂಟೇಜ್ ಕಾರು, ಬೈಕ್ ರ್‍ಯಾಲಿ ಹಾಗೂ ವಿದ್ಯಾರ್ಥಿಗಳ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಯುವಜನತೆಯ ಇನ್ನೊಂದು ಹೆಸರು ಶಕ್ತಿ. ಈ …

ಡ್ರಗ್ಸ್ ವಿರುದ್ಧದ ಸಮರದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಲು ಯುವಕರಿಗೆ ಕರೆ : ಸಿಎಂ Read More »

ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ತಂತ್ರಜ್ಞಾನವು ಅತ್ಯಗತ್ಯ

ಬೆಂಗಳೂರು ಡಿಸೆಂಬರ್ 26: ಪ್ರಸ್ತುತ ದಿನಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ತಂತ್ರಜ್ಞಾನವು ಅತ್ಯಗತ್ಯ. ತರಗತಿಗಳಲ್ಲಿ ಡಿಜಿಟಲ್ ಕಲಿಕಾ ಪರಿಕರಗಳ ಪರಿಣಾಮಕಾರಿ ಬಳಕೆಯಿಂದ ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆ ಮತ್ತು ತರಗತಿಯಲ್ಲಿ ಭಾಗವಹಿಸುವಿಕೆಯನ್ನು ಹೆಚ್ಚಿಸುತ್ತದೆ ಎಂದು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿಪ್ರಾಯಪಟ್ಟರು. ಇಂದು ಬೆಂಗಳೂರಿನ ಚನ್ನೇನಹಳ್ಳಿಯಲ್ಲಿ ಜನಸೇವಾ ವಿಶ್ವಸ್ತ ಮಂಡಳಿ ವತಿಯಿಂದ ಆಯೋಜಿಸಿದ್ದ ಪೂರ್ಣದೆಡೆಗಿನ ಪಯಣ ಹೊಸ ಚರಣದಾರಂಭ “ಪೂರ್ಣ ಮಂಡಲೋತ್ಸವ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳು ಮತ್ತು ಯುವಜನರ ಭವಿಷ್ಯಕ್ಕೆ ಸರಿಯಾದ ಮಾರ್ಗವನ್ನು ರೂಪಿಸಲು …

ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ತಂತ್ರಜ್ಞಾನವು ಅತ್ಯಗತ್ಯ Read More »

ಬದುಕಿಗೆ ಬಣ್ಣ ತಂದವರು ಚಿತ್ರ ಕಲಾವಿದರು

ದೇವನಹಳ್ಳಿ : ಸಾವಿರಾರು ಪದಗಳನ್ನು ಒಂದು ಚೌಕಟ್ಟಿನಲ್ಲಿ ತರುವ ಸಾಮರ್ಥ್ಯ ಚಿತ್ರಕಲೆಗೆ ಇದೆ. ಚಿತ್ರಕಲೆಯ ಮಹತ್ವ ಬಹಳ ಹಿರಿದಾದ್ದು ಎಂದು ಚಿತ್ರಕಲಾ ಶಿಕ್ಷಕಮುದ್ದಪ್ಪ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಗಾಂಧಿಚೌಕದ ಮಹಂತಿನ ಮಠದ ಆವರಣದಲ್ಲಿ ಕರ್ನಾಟಕ ರಾಜ್ಯ ದೇವನಹಳ್ಳಿ ತಾಲ್ಲೂಕು ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ನಿಮ್ಮ ಕಲ್ಪನೆಯಲ್ಲಿ ದಸರಾ ಚಿತ್ರಕಲಾ ಸ್ಪರ್ಧೆಯ ತೀರ್ಪುಗಾರರಾಗಿ ಮಾತನಾಡಿ, ಮಕ್ಕಳು ತಮ್ಮ ಓದಿನ ಜೊತೆ ಲಲಿತ ಕಲೆಗಳಲ್ಲಿ ಯಾವುದಾದರೂ ಒಂದನ್ನು ಆಯ್ಕೆ ಮಾಡಿಕೊಳ್ಳಿ. ಚಿತ್ರಕಲೆಯಿಂದ ಏಕಾಗ್ರತೆ ಹೆಚ್ಚುತ್ತದೆ. ಇದರಿಂದ …

ಬದುಕಿಗೆ ಬಣ್ಣ ತಂದವರು ಚಿತ್ರ ಕಲಾವಿದರು Read More »

Translate »
Scroll to Top