Bengalore

ಅಂತಾರಾಷ್ಟ್ರೀಯ ಕೃಷಿ ವಸ್ತುಪ್ರದರ್ಶನ ಮೇಳ

ಅಂತಾರಾಷ್ಟ್ರೀಯ ಕೃಷಿ ವಸ್ತುಪ್ರದರ್ಶನ ಮೇಳದಲ್ಲಿ ಸಚಿವ ಎಸ್.ಟಿ.ಸೋಮಶೇಖರ್; ರಾಜ್ಯದಲ್ಲಿ ಬಂಡವಾಳ ಹೂಡಲು ಕೃಷಿ ಉತ್ಪನ್ನ, ಯಂತ್ರೋಪಕರಣ ಕಂಪನಿಗಳಿಗೆ ಆಹ್ವಾನ 2030ರ ವೇಳೆಗೆ ಕೃಷಿ ಕ್ಷೇತ್ರದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ. ವಿಶ್ವದ ನಾನಾ ರಾಷ್ಟ್ರಗಳು ಕೃಷಿಯಲ್ಲಿ ನವನವೀನ ತಂತ್ರಜ್ಞಾನ, ವೃತ್ತಿಪರತೆ ಮೈಗೂಡಿಸಿಕೊಂಡು ಕೃಷಿ ಕ್ಷೇತ್ರದಲ್ಲಿ ಮಾರ್ಪಾಡು ಹೊಂದಲಿವೆ ಎಂಬುದಕ್ಕೆ ಸ್ಪೇನ್ ನಲ್ಲಿ ನಡೆದ “ಫಿಮಾ ಅಗ್ರಿಕೋಲ” ಅಂತಾರಾಷ್ಟ್ರೀಯ ಕೃಷಿ ವಸ್ತುಪ್ರದರ್ಶನ ಮೇಳ ಸಾಕ್ಷಿಯಾಯಿತು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಸ್ಪೇನ್ ನ ಝರಗೋಜ಼ ನಗರದಲ್ಲಿ ಏಪ್ರಿಲ್ 26 …

ಅಂತಾರಾಷ್ಟ್ರೀಯ ಕೃಷಿ ವಸ್ತುಪ್ರದರ್ಶನ ಮೇಳ Read More »

ಮಾನಸಿಕ ರೋಗಿಗಳ ಚಿಕಿತ್ಸೆಗಾಗಿ “ಇ-ಮನಸ್” ಮಾದರಿ ಸೇವೆ

ಬೆಂಗಳೂರು : ದೈಹಿಕ ಆರೋಗ್ಯಕ್ಕೆ ಎಷ್ಟು ಮಹತ್ವ ಸಿಗುತ್ತಿದೆಯೋ ಅಷ್ಟೇ ಮಹತ್ವ ಮಾನಸಿಕ ಆರೋಗ್ಯಕ್ಕೂ ಸಿಗಬೇಕು ಆಧುನಿಕ ಜೀವನ ಶೈಲಿಯಿಂದ ಜನರು ಮಾನಸಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಇದಕ್ಕೆ ಪರಿಹಾರ ಕಲ್ಪಿಸಲು ಕರ್ನಾಟಕ ಸರ್ಕಾರ ಹಾಗೂ ಆರೋಗ್ಯ ಇಲಾಖೆ ವಿಶೇಷ ಕಾರ್ಯಕ್ರಮಗಳನ್ನು ಮಾಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು. ಗುಜರಾತ್​​ನ ಕೆವಾಡಿಯಾದಲ್ಲಿ 14ನೇ ಆವೃತ್ತಿಯ ಸೆಂಟ್ರಲ್ ಹೆಲ್ತ್ ಕೌನ್ಸಿಲ್ ಆಫ್ ಹೆಲ್ತ್ ಅಂಡ್ ಫ್ಯಾ ಮಿಲಿ ವೆಲ್ ಫೇರ್ ನಡೆಸುತ್ತಿರುವ …

ಮಾನಸಿಕ ರೋಗಿಗಳ ಚಿಕಿತ್ಸೆಗಾಗಿ “ಇ-ಮನಸ್” ಮಾದರಿ ಸೇವೆ Read More »

ಬಸವರಾಜ ಹೊರಟ್ಟಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು

ಬೆಂಗಳೂರು : ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಆರ್ ಅಶೋಕ್, ಅರಗ ಜ್ಞಾನೆಂದ್ರ , ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತು ಇತರರು ಉಪಸ್ಥಿತರಿದ್ದರು. ಕೇಂದ್ರ ಗೃಹಸಚಿವ ಅಮಿತ್ ಶಾ ಅವರೊಂದಿಗೆ …

ಬಸವರಾಜ ಹೊರಟ್ಟಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು Read More »

ಕಲ್ಯಾಣ ಮಿತ್ರ ಏಕೀಕೃತ ಎಸ್ ಸಿ ಎಸ್ ಟಿ 24×7 ಸಹಾಯವಾಣಿ ಲೋಕಾರ್ಪಣೆ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣ ಮಿತ್ರ ಏಕೀಕೃತ ಎಸ್ ಸಿ ಎಸ್ ಟಿ 24×7 ಸಹಾಯವಾಣಿ (9482300400) ಯನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಎನ್ ರವಿಕುಮಾರ್, ಎ.ನಾರಾಯಣಸ್ವಾಮಿ, ಅ.ದೇವೇಗೌಡ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್ ನಾಗೇಶ, …

ಕಲ್ಯಾಣ ಮಿತ್ರ ಏಕೀಕೃತ ಎಸ್ ಸಿ ಎಸ್ ಟಿ 24×7 ಸಹಾಯವಾಣಿ ಲೋಕಾರ್ಪಣೆ Read More »

ಕ್ಷೇತ್ರದಲ್ಲಿ ನಡೆಯುತ್ತಿರುವ ವಿಳಂಬ ಕಾಮಗಾರಿ ಖಂಡಿಸಿ ಶಾಂತಿಯುತ ಪ್ರತಿಭಟನೆ

ಬೆಂಗಳೂರು: ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಕಳಪೆ ಕಾಮಗಾರಿ, ಟೆಂಡರ್ ಅವ್ಯವಹಾರ ಮತ್ತು ಕಾಮಗಾರಿಗಳ ನಿಧಾನಗತಿಯಿಂದ ಕ್ಷೇತ್ರದ ನಾಗರಿಕರಿಗೆ ಆಗುತ್ತಿರುವ ಆನಾನುಕೂಲ ಖಂಡಿಸಿ ಮಲ್ಲೇಶ್ವರಂ ನಿವಾಸಿಗಳು ಸದಾಶಿವನಗರ ಶಿವಾಜಿ ಪ್ರತಿಮೆ ಎದುರು,ಸ್ಯಾಂಕಿ ಕೆರೆ ಬಳಿ ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದರು.ಅನೂಪ್ ಅಯ್ಯಂಗಾರ್ ರವರು ನಿವಾಸಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ನಿವಾಸಿ ಅನೂಪ್ ಅಯ್ಯಂಗಾರ್ ರವರು ಮಾತನಾಡಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 15ವರ್ಷಗಳಿಂದ ಮೂಲಭೂತ ಸೌಲಭ್ಯಗಳಾದ ರಸ್ತೆ,ಒಳಚರಂಡಿ ಮತ್ತು ಪಾದಚಾರಿ ಮಾರ್ಗಗಳು ಸಮರ್ಪಕವಾಗಿಲ್ಲದೇ ಸಾರ್ವಜನಿಕರು ಪ್ರಾಣಪಾಯದಿಂದ ಜೀವನ ಸಾಗಿಸುತ್ತಿದ್ದಾರೆ. ಸ್ಯಾಂಕಿ ಟ್ಯಾಂಕ್ …

ಕ್ಷೇತ್ರದಲ್ಲಿ ನಡೆಯುತ್ತಿರುವ ವಿಳಂಬ ಕಾಮಗಾರಿ ಖಂಡಿಸಿ ಶಾಂತಿಯುತ ಪ್ರತಿಭಟನೆ Read More »

ಕೊಳದ ಮಠದ ಶ್ರೀ ಶಾಂತವೀರಸ್ವಾಮೀಜಿ ಲಿಂಗೈಕ್ಯ

ಬೆಂಗಳೂರು: ಇಂದು ಮುಂಜಾನೆ ಬೆಂಗಳೂರಿನ ಕೊಳದ ಮಠದ ಶ್ರೀ ಶಾಂತವೀರಸ್ವಾಮೀಜಿ ಹೃದಯಾಘಾತದಿಂದ ಲಿಂಗೈಕ್ಯರಾದ ವಿಷಯ ತಿಳಿದು ತೀವ್ರ ದುಃಖವಾಗಿದೆ. ಅವರ ನಿಧನಕ್ಕೆ ಸಂತಾಪ ಸೂಚಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.ಸ್ವಾಮೀಜಿಯವರು ಸಮಾಜ ಸುಧಾರಣೆ ಮತ್ತು ಧಾರ್ಮಿಕ ಜಾಗೃತಿಯಲ್ಲಿ ತೊಡಗಿದ್ದರು. ಮೃತರ ಆತ್ಮಕ್ಕೆ ಭಗವಂತನು ಶಾಂತಿ ನೀಡಲಿ. ದುಃಖತಪ್ತ ಮಠದ ಶಿಷ್ಯವರ್ಗಕ್ಕೆ ಈ ನೋವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ವೈದ್ಯರು ದೇವರ ಸ್ವರೂಪ, ವೈದ್ಯಕೀಯ ಸೇವೆ ದೈವಿಕ ಸೇವೆ

ಬೆಂಗಳೂರು : ವೈದ್ಯಕೀಯ ಸೇವೆಯು ಮಾನವೀಯ ಮತ್ತು ದೈವಿಕ ಸೇವೆಯಾಗಿದೆ, ವೈದ್ಯರನ್ನು ದೇವರ ಸ್ವರೂಪವೆಂದು ಪರಿಗಣಿಸಲಾಗಿದ್ದು, ಈ ಕ್ಷೇತ್ರಕ್ಕೆ ಪಾದಾರ್ಪಣ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಯು ಮಾನವೀಯ ಸೇವೆಗೆ ಮುಡುಪಾಗಿಸಿಕೊಳ್ಳಬೇಕು ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು. ಬೆಂಗಳೂರಿನ ನಿಮ್ಹಾನ್ಸ್ ಕನ್ವೆಷನ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜೀವ್ ಗಾಂಧಿ ಅರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕದ 24ನೇ ಘಟಿಕೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿಶ್ವವಿದ್ಯಾಲಯದಲ್ಲಿ ತಮ್ಮ ವ್ಯಾಸಂಗವನ್ನು ಯಶಸ್ವಿಯಾಗಿ ಮುಗಿಸಿ ಇಂದು …

ವೈದ್ಯರು ದೇವರ ಸ್ವರೂಪ, ವೈದ್ಯಕೀಯ ಸೇವೆ ದೈವಿಕ ಸೇವೆ Read More »

ಪಿಎಸ್‌ಐ ಪರೀಕ್ಷೆಯನ್ನು ರದ್ದುಗೊಳಿಸುವ ನಿರ್ಧಾರದ ಕುರಿತು ವಿರೋಧ ಪಕ್ಷದ ನಾಯಕ ಗರಂ

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸುವ ಮೂಲಕ ನಡೆದಿರುವ ಅಕ್ರಮವನ್ನು ಒಪ್ಪಿಕೊಂಡ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಯಾವ ನೈತಿಕತೆ ಆಧಾರದಲ್ಲಿ ಗೃಹ ಸಚಿವ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯ? ಹಗರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಆರೋಪಿ ಅಧಿಕಾರಿಗಳಿಗೆ ರಕ್ಷಣೆ ನೀಡುತ್ತಿರುವ, ಸಾಲು ಸಾಲು ವೈಫಲ್ಯಗಳ ಸರದಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಮುಖ್ಯಮಂತ್ರಿಗಳು ತಕ್ಷಣ ಸಂಪುಟದಿಂದ ಕಿತ್ತುಹಾಕಬೇಕು.ಭ್ರಷ್ಟರು, ಕೊಲೆಗಡುಕರು, ರೇಪಿಸ್ಟ್‌ಗಳನ್ನು‌ ಸಮರ್ಥಿಸುವುದೇ ತನ್ನ ಕರ್ತವ್ಯ ಎಂದು ಗೃಹ ಸಚಿವರು ತಿಳಿದುಕೊಂಡಂತಿದೆ. ಇಂತಹ ವಿಫಲ, ನಿಷ್ಕ್ರಿಯ …

ಪಿಎಸ್‌ಐ ಪರೀಕ್ಷೆಯನ್ನು ರದ್ದುಗೊಳಿಸುವ ನಿರ್ಧಾರದ ಕುರಿತು ವಿರೋಧ ಪಕ್ಷದ ನಾಯಕ ಗರಂ Read More »

ಎಸ್.ಎಸ್ ಪ್ರಕಾಶಂ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಸಂತಾಪ

ಬೆಂಗಳೂರು:ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಎಸ್.ಎಸ್. ಪ್ರಕಾಶಂ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ‘ಪ್ರಕಾಶಂ ಅವರು ಪಕ್ಷದ ನಿಷ್ಠವಂತ ನಾಯಕ ಹಾಗೂ ಕಾರ್ಯಕರ್ತರಾಗಿದ್ದು, ಅವರ ನಿಧನದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ. ಕಾರ್ಮಿಕರ ಪರ ಕಾಳಜಿ ಹೊಂದಿದ್ದ ಪ್ರಕಾಶಂ ಅವರು ಉತ್ತಮ ಸಂಘಟಕರರೂ ಹೌದು. ಅವರ ನಿಧನದಿಂದ ಪಕ್ಷಕ್ಕೆ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯ ನೋವನ್ನು ಕುಟುಂಬ ಸದಸ್ಯರು ಹಾಗೂ ಪಕ್ಷದ …

ಎಸ್.ಎಸ್ ಪ್ರಕಾಶಂ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಸಂತಾಪ Read More »

ಜ್ಞಾನವನ್ನು ದೇಶಕ್ಕಾಗಿ ಸಮರ್ಪಿಸಿಕೊಳ್ಳಿ ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ

ಬೆಂಗಳೂರು : ಯುವಜನತೆ ದೇಶದ ಆಧಾರಸ್ತಂಭವಾಗಿದ್ದು, ದೇಶದ ಹಿತಕ್ಕಾಗಿ ಮತ್ತು ಜನರ ಹಿತಕ್ಕಾಗಿ ಪದವಿ ಬಳಿಕ ಆಚಾರ,ವಿಚಾರ ಮತ್ತು ಸಂಸ್ಕೃತಿಯಲ್ಲಿ ಮಾನವೀಯತೆಯನ್ನು ಮೈಗೂಡಿಸಿಕೊಳ್ಳವ ಮೂಲಕ ಜ್ಞಾನವನ್ನು ದೇಶಕ್ಕಾಗಿ ಸಮರ್ಪಿಸಿಕೊಳ್ಳಿ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಬೆಂಗಳೂರು ವಿಶ್ವವಿದ್ಯಾಲಯದ 56ನೇ ಘಟಿಕೋತ್ಸವಕ್ಕೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಚಾಲನೆ ನೀಡಿ ಮಾತನಾಡಿದರು. ಹೊಸ ಆಲೋಚನೆಗಳು, ಸಹಯೋಗ ಮತ್ತು ವೈವಿಧ್ಯತೆಯನ್ನು ಅಳವಡಿಸಿಕೊಳ್ಳುವ, ಸಮಯದ ನಿರ್ಣಾಯಕ ಸವಾಲುಗಳನ್ನು …

ಜ್ಞಾನವನ್ನು ದೇಶಕ್ಕಾಗಿ ಸಮರ್ಪಿಸಿಕೊಳ್ಳಿ ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ Read More »

Translate »
Scroll to Top