ಆಲಮಟ್ಟಿ ಕೆರೆಗಳಿಗೆ ನೀರು ತುಂಬಿಸಲು ಸಚಿವ ಎಂ.ಬಿ.ಪಾಟೀಲ ಸೂಚನೆ

ಮಹಾರಾಷ್ಟ್ರ ಮತ್ತು ನೆರೆಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಆಲಮಟ್ಟಿ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದ್ದು, ಜಲಾಶಯದಲ್ಲಿರುವ ನೀರನ್ನು ಕಾಲುವೆಗಳ ಮೂಲಕ ಕೆರೆಗೆ ನೀರು ತುಂಬಿಸುವ ಯೋಜನೆಯಡಿ ನೀರು ಹರಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.