ಶಾಸಕ ನಾರಾ ಭರತ್ ರೆಡ್ಡಿ ಜನ್ಮ ದಿನಾಚರಣೆಗೆ ಭರದ ಸಿದ್ಧತೆ
ಬಳ್ಳಾರಿ: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ಜನ್ಮ ದಿನಾಚರಣೆಯನ್ನು ಅತ್ಯಂತ ಅದ್ಧೂರಿಯಿಂದ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಶಾಸಕ ನಾರಾ ಭರತ್ ರೆಡ್ಡಿ ಅವರ ಅಭಿಮಾನಿ ಬಳಗ ಹಾಗೂ ಎನ್ಬಿಆರ್ ಟೀಮ್ನ ಸದಸ್ಯರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ನಗರದ ಮೂರು ಕಡೆಗಳಲ್ಲಿ ಭೋಜನಕೂಟವನ್ನು ಏರ್ಪಡಿಸಿದ್ದು, ಅಂದಾಜು 30 ಸಾವಿರ ಜನರಿಗೆ ಆಹಾರದ ವ್ಯವಸ್ಥೆ ಮಾಡಲು ತಯಾರಿ ನಡೆಸಲಾಗಿದೆ.