chief minister

ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಸಿಎಂ ಮಾತುಕತೆ

ಬೆಂಗಳೂರು, ಮಾರ್ಚ್ 03 : ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೂರವಾಣಿ ಮೂಲಕ ಮಾತನಾಡಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು. ತಮ್ಮ ಪರಿಸ್ಥಿತಿಯನ್ನು ವಿವರಿಸಿದ ವಿದ್ಯಾರ್ಥಿಗಳು, ‘ಕಾರಕೀವ್ ದಿಂದ ೩೦ ಕಿ‌ಮೀ ದೂರದ ಪ್ರದೇಶಕ್ಕೆ ನಾವು ನಡೆದುಕೊಂಡು ಬಂದಿದ್ದೇವೆ ಸದ್ಯಕ್ಕೆ ನಾವು ಸುರಕ್ಷಿತವಾಗಿ ಇದ್ದೇವೆ’ ಎಂದು ಮುಖ್ಯ ಮಂತ್ರಿಗಳಿಗೆ ತಿಳಿಸಿದರು. ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ ಮುಖ್ಯಮಂತ್ರಿಗಳು ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ಜತೆ ಕರ್ನಾಟಕ ಸರ್ಕಾರ ನಿರಂತರವಾಗಿ …

ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಸಿಎಂ ಮಾತುಕತೆ Read More »

ಬೌದ್ಧ ಅಭಿವೃದ್ಧಿ ಪ್ರಾಧಿಕಾರ ರಚಿಸಲು ಪರಿಷತ್ ಆಗ್ರಹ

ಕೊಪ್ಪಳ,ಮಾ,3 : ಈ ಸಾಲಿನ ಬಜೆಟ್ಟಿನಲ್ಲಿ ಬೌದ್ಧ ಅಭಿವೃದ್ಧಿ ಪ್ರಾಧಿಕಾರವನ್ನು ಸ್ಥಾಪಿಸಿ ಪ್ರಾಧಿಕಾರಕ್ಕೆ ಕನಿಷ್ಠ 200 ಕೋಟಿ ಹಣವನ್ನು ಮೀಸಲಿಡಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಕೊಪ್ಪಳ ಜಿಲ್ಲಾ ದಲಿತ ವಿದ್ಯಾರ್ಥಿ ಪರಿಷತ್ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಲಾಯಿತು. ಗುರುವಾರ ಜಿಲ್ಲಾಧಿಕಾರಿಗಳ ಮೂಲಕ ದಲಿತ ವಿದ್ಯಾರ್ಥಿ ಪರಿಷತ್ ಕೊಪ್ಪಳ ಜಿಲ್ಲಾ ಘಟಕದ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಬೌದ್ಧ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಬಗ್ಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಪರಿಷತ್ತಿನ ಜಿಲ್ಲಾ ಸಂಚಾಲಕರಾದ ಗೌತಮ್ ಬಳಗಾನೂರ, …

ಬೌದ್ಧ ಅಭಿವೃದ್ಧಿ ಪ್ರಾಧಿಕಾರ ರಚಿಸಲು ಪರಿಷತ್ ಆಗ್ರಹ Read More »

ರಾಜ್ಯಕ್ಕೆ ನವೀನ್ ಪಾರ್ಥಿವ ಶರೀರ ತರಲು ಆದ್ಯತೆ

ಬೆಂಗಳೂರು, ಮಾರ್ಚ್ 02: ಉಕ್ರೇನ್ ನಲ್ಲಿ ಮೃತಪಟ್ಟಿರುವ ನವೀನ್ ಪಾರ್ಥಿವ ಶರೀರವನ್ನು ತಾಯ್ನಾಡಿಗೆ ತರುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ನವೀನ್ ಕುಟುಂಬಕ್ಕೆ ಎಲ್ಲ ಸಹಾಯ, ಸಹಕಾರ ನೀಡ ಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಗ್ಯಾನಗೌಡರ್ ಅವರು ಹಾಕಿಕೊಂಡಿರುವ ಬಟ್ಟೆಗಳನ್ನು ಹೋಲುವ ಕೆಲವು ಛಾಯಾಚಿತ್ರಗಳನ್ನು ಆತನ ಸ್ನೇಹಿತರು ಕಳುಹಿಸಿಕೊಟ್ಟಿದ್ದಾರೆ. ಶೆಲ್ ದಾಳಿ ನಿಂತ ಮೇಲೆ ನವೀನ್ ಜೊತೆಗಿದ್ದವರು ತೆಗೆದ …

ರಾಜ್ಯಕ್ಕೆ ನವೀನ್ ಪಾರ್ಥಿವ ಶರೀರ ತರಲು ಆದ್ಯತೆ Read More »

ಕೇಂದ್ರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟೀಕಾ ಪ್ರಹಾರ

ಬೆಂಗಳೂರು,ಮಾ,2 : ನೀಟ್‌ ವ್ಯವಸ್ಥೆಯಿಂದ ಬಡ ಮತ್ತು ಮಧ್ಯಮ ವರ್ಗದ, ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಶಿಕ್ಷಣದ ಕನಸು ನುಚ್ಚುನೂರು ಆಗುತ್ತಿದೆ ಎಂದು ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ವೈದ್ಯಶಿಕ್ಷಣ ವೆಚ್ಚದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ನೀಡಿರುವ ಹೇಳಿಕೆ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ನೀಟ್‌ ಬಂದ ಮೇಲೆ ಟ್ಯೂಷನ್‌ ದಂಧೆ ಮೇರೆ ಮೀರಿದ್ದು, ಅದಕ್ಕೆ ಕೇಂದ್ರ ಸರಕಾರವೇ ಪ್ರೋತ್ಸಾಹ ನೀಡುತ್ತಿರುವಂತಿದೆ. ಕೇಂದ್ರ ಸಚಿವರ ಹೇಳಿಕೆ ಅನೇಕ ಗುಮಾನಿಗಳಿಗೆ ಕಾರಣವಾಗಿದೆ ಎಂದು ಎಂದು ಅವರು …

ಕೇಂದ್ರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟೀಕಾ ಪ್ರಹಾರ Read More »

ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ

ದೇವನಹಳ್ಳಿ,ಮಾರ್ಚ್ಮು,1 : ಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯ ಅಧ್ಯಕ್ಷರಾದ ನಳಿನ ಕುಮಾರ ಕಟಿಲ್ ಅವರ ಸಮ್ಮುಖದಲ್ಲಿ ದೇವನಹಳ್ಳಿ ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಬೆಂಗಳೂರಿನಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ನಾರಾಯಣಸ್ವಾಮಿ, ಸಚಿವ ಡಾ. ಕೆ.‌ಸುಧಾಕರ, ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ ಟಿ ರವಿ, ಸಂಸದ ಪಿ ಸಿ ಮೋಹನ ಮತ್ತು ಇತರರು ಉಪಸ್ಥಿತರಿದ್ದರು.

ರಾಷ್ಟ್ರೀಯ ಮಹಿಳಾ ಸೈನ್ಯಕ್ಕೆ ಮಲ್ಲಮ್ಮಾಜಿಯ ಹೆಸರಿಡಿ

ಹುಬ್ಬಳ್ಳಿ ಫೆಬ್ರವರಿ 28: 500 ವರ್ಷಗಳ ಹಿಂದೆಯೇ ಬೆಳವಡಿ ಸಾಮ್ರಾಜ್ಯದಲ್ಲಿ 2 ಸಾವಿರ ಮಹಿಳೆಯರ ಸ್ತ್ರೀ ಸೈನ್ಯ ಕಟ್ಟಿದ್ದ ಬೆಳವಡಿ ಮಲ್ಲಮ್ಮಾಜಿ ಅವರ ಹೆಸರನ್ನ ರಾಷ್ಟ್ರೀಯ ಮಹಿಳಾ ಸೈನ್ಯಕ್ಕೆ ಇಡುವ ಮೂಲಕ ಅಪ್ರತಿಮ ವೀರಾಗ್ರಣಿಯ ಹೆಸರನ್ನು ಚಿರಸ್ಥಾಯಿಗೊಳಿಸಬೇಕು. ಈ ಬಗ್ಗೆ ಕೇಂದ್ರ ಸರಕಾರಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಹರಿಹರದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಇಂದು ವೀರಮಾತೆ ಬೆಳವಡಿ ರಾಣಿ ಮಲ್ಲಮ್ಮಾಜಿ …

ರಾಷ್ಟ್ರೀಯ ಮಹಿಳಾ ಸೈನ್ಯಕ್ಕೆ ಮಲ್ಲಮ್ಮಾಜಿಯ ಹೆಸರಿಡಿ Read More »

ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

ಬೆಂಗಳೂರು,ಫೆ,27 : ಪೋಲಿಯೋ ಭಾನುವಾರದ ಅಂಗವಾಗಿ ಇಂದು ಬೆಂಗಳೂರಿನಲ್ಲಿ ಐದು ವರ್ಷದ ಒಳಗಿನ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಆರೋಗ್ಯ ಸಚಿವರಾದ ಸುಧಾಕರ್ ಪಂಚಮಸಾಲಿ ಹರಿಹರ ಗುರುಪೀಠದ ಶ್ರೀ ವಚನಾನಂದ ಸ್ವಾಮೀಜಿ ಹಾಗೂ ಇತರರು ಉಪಸ್ಥಿತರಿದ್ದರು.

ಮಾಜಿ ಮುಖ್ಯಮಂತ್ರಿ ರವರಿಗೆ ಜನ್ಮದಿನ

ಬೆಂಗಳೂರು,ಫೆ, 27 : ರೈತ ನಾಯಕರು, ಮಾಜಿ ಮುಖ್ಯಮಂತ್ರಿ, ದಿಟ್ಟ ಧೀಮಂತ ನಾಯಕರು, ನನ್ನ ಮಾರ್ಗದರ್ಶಕರಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪ ರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ಹೆಚ್ಚಿನ ಆಯಸ್ಸು ಹಾಗೂ ಉತ್ತಮ ಆರೋಗ್ಯ ನೀಡಲಿಯೆಂದು ಪ್ರಾರ್ಥಿಸುತ್ತೇನೆ‌ ಎಂದು ಟ್ವೀಟ್ ಮಾಡಿದ್ದಾರೆ.

ಕೆಳದಿ ರಾಣಿ ಚೆನ್ನಮ್ಮನವರ ಕುರಿತು ಪಠ್ಯದಲ್ಲಿ ಅಳವಡಿಸಲು ಚಿಂತನೆ

ಬೆಂಗಳೂರು, ಫೆ.27 : ಕಿತ್ತೂರು ರಾಣಿ ಚೆನ್ನಮ್ಮನಂತೆ ಕೆಳದಿ ರಾಣಿ ಚೆನ್ನಮ್ಮನವರ ಹೋರಾಟ, ಕ್ಷಮಾಗುಣಗಳು ಆದರ್ಶನೀಯವಾಗಿದ್ದು, ಈ ಕುರಿತು ಪಠ್ಯದಲ್ಲಿ ಅಳವಡಿಸುವ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಗೃಹ ಕಛೇರಿ ಕೃಷ್ಣದಲ್ಲಿ ಕೆಳದಿ ರಾಣಿ ಚೆನ್ನಮ್ಮನ ಪಟ್ಟಾಭಿಷೇಕದ 350ನೇ ವರ್ಷಾಚರಣೆ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚೆನ್ನಮ್ಮನವರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಭಾನುವಾರ ಅವರು ಮಾತನಾಡಿದರು. ಮೂರು ಬಾರಿ ಮೊಘಲರು ಆಕ್ರಮಣ ಮಾಡಿದರೂ, ನಂತರ ಪ್ರಾಣ ಭಿಕ್ಷೆ ಬೇಡಿ …

ಕೆಳದಿ ರಾಣಿ ಚೆನ್ನಮ್ಮನವರ ಕುರಿತು ಪಠ್ಯದಲ್ಲಿ ಅಳವಡಿಸಲು ಚಿಂತನೆ Read More »

ಕೆಳದಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ತೀರ್ಮಾನ

ಬೆಂಗಳೂರು, ಫೆಬ್ರವರಿ 27: ಕೆಳದಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಪಡಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೆಳದಿ ರಾಣಿ ಚೆನ್ನಮ್ಮನ ಪಟ್ಟಾಭಿಷೇಕದ 350 ನೇ ವರ್ಷಾಚರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡುತ್ತಿದ್ದರು. ಕೆಳದಿ ಚನ್ನಮ್ಮನ ಪಟ್ಟಾಭಿಷೇಕದ ದಿನದಂದು ಆಚರಣೆ ಮಾಡುವ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಮುಂದಿನ ವರ್ಷ ಕೆಳದಿ ಯಲ್ಲಿಯೇ ದೊಡ್ಡ ಪ್ರಮಾಣದಲ್ಲಿ ಆಚರಣೆ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದರು. ಕೆಳದಿ ಚನ್ನಮ್ಮ ಒಬ್ಬ …

ಕೆಳದಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ತೀರ್ಮಾನ Read More »

Translate »
Scroll to Top