Congressgarantee

ಘೋಷಿಸಿದ ಎಲ್ಲಾ ಯೋಜನೆಗಳು ಜಾರಿ

ಬೆಂಗಳೂರು: ರಾಜ್ಯಾದ್ಯಂತ ಎಲ್ಲರಿಗೂ 200 ಯೂನಿಟ್ ವರೆಗೆ ಉಚಿತ ವಿದ್ಯುತ್,ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ,ಕುಟುಂಬದ ಯಜಮಾನಿಗೆ ಎರಡು ಸಾವಿರ ರೂಪಾಯಿ ನೀಡುವುದು,ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ತಲಾ ಹತ್ತು ಕೆಜಿ ಅಕ್ಕಿ ಸೇರಿದಂತೆ ಚುನಾವಣೆಗೂ ಮುನ್ನ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು,ಆ ಮೂಲಕ ಇಡೀ ದೇಶವೇ ನಿಬ್ಬೆರಗಾಗುವಂತೆ ಮಾಡಿದೆ.

ಐದೂ ಗ್ಯಾರೆಂಟಿ ಯೋಜನೆಗಳನ್ನು ಕೊಟ್ಟೇ ಕೊಡ್ತೇವೆ: ನಾಗೇಂದ್ರ

ಬೆಂಗಳೂರು : ಐದು ಗ್ಯಾರಂಟಿ ಯೋಜನೆಗಳನ್ನು ಗ್ಯಾರಂಟಿಯಾಗಿ ಕೊಟ್ಟೆ ಕೊಡುತ್ತೇವೆ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ‌ ಕಲ್ಯಾಣ ಸಚಿವ ಬಿ.ನಾಗೇಂದ್ರ ಸ್ಪಷ್ಟಪಡಿಸಿದ್ದಾರೆ.

ಕುಮಾರಸ್ವಾಮಿಗೆ ಟಾಂಗ್‍ ನೀಡಿದ ಕಾಂಗ್ರೆಸ್

ಕುಮಾರಸ್ವಾಮಿಗೆ ಟಾಂಗ್‍ ನೀಡಿದ ಕಾಂಗ್ರೆಸ್ ಬೆಂಗಳೂರು: ಕಾಂಗ್ರೆಸ್ ನ ಉಚಿತ ಗ್ಯಾರಂಟಿ ಯೋಜನೆಗಳ ವಿಚಾರವಾಗಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿಗೆ ರಾಜ್ಯ ಕಾಂಗ್ರೆಸ್ ತಿರುಗೇಟು ನೀಡಿದೆ. ಈ ಸಂಬಂಧ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ನಾವು ಅರ್ಹ ಫಲಾನುಭವಿಗಳಿಗೆ ನಮ್ಮ ಗ್ಯಾರಂಟಿಗಳನ್ನು ಜಾರಿಗೊಳಿಸುವುದು ನಿಶ್ಚಿತ. ಕುಮಾರಸ್ವಾಮಿಯವರೇ, ಆ ಚಿಂತೆ ಬಿಡಿ. ಜೆಡಿಎಸ್ ಪಕ್ಷದ ವಿಸರ್ಜನಾ ಕಾರ್ಯಕ್ರಮದ ಮುಹೂರ್ತ ಯಾವಾಗ ಹೇಳಿ ಎಂದು ಹಂಗಿಸಿದೆ. ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ …

ಕುಮಾರಸ್ವಾಮಿಗೆ ಟಾಂಗ್‍ ನೀಡಿದ ಕಾಂಗ್ರೆಸ್ Read More »

Translate »
Scroll to Top