Devanahalli

ಪತ್ರಕರ್ತರ ಹಿತ ಕಾಯುವಲ್ಲಿ ಸದಾ ಮುಂಚೂಣಿಯಲ್ಲಿರುತ್ತೇನೆ

ದೇವನಹಳ್ಳಿ: ಯಾವುದೇ ಚುನಾವಣೆ ನಡೆಯಬೇಕಾದರೆ ಚುನಾವಣಾಧಿಕಾರಿಗಳು ಒಬ್ಬರಿಂದ ಯಶಸ್ವಿಯಾಗಲು ಸಾಧ್ಯವಿಲ್ಲಾ ಅಭ್ಯರ್ಥಿಗಳ ಮತ್ತು ಮತದಾರರ ಸಹಕಾರವೂ ಅಗತ್ಯ ಇತ್ತೀಚೆಗೆ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯಕಾರಿ ಸಮಿತಿಗೆ ನಡೆದ ಚುನಾವಣೆಯು ಸುಸೂತ್ರವಾಗಿ ನಡೆದು ಇಂದು ವಿಜೇತ ಪಟ್ಟಿಯನ್ನು ಅಧಿಕೃತವಾಗಿ ಘೋಷಿಸಲಾಗುತ್ತಿದೆ ಎಂದು ಚುನಾವಣಾಧಿಕಾರಿ ಮುನಿಯಪ್ಪ ತಿಳಿಸಿದರು. ಅವರು ದೇವನಹಳ್ಳಿ ಪಟ್ಟಣದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಕಳೆದ ಫೆಬ್ರವರಿ 27 ರಂದು ನಡೆದ ಜಿಲ್ಲಾ ಪತ್ರಕರ್ತರ ಸಂಘಕ್ಕೆ ಚುನಾವಣೆಯ ಫಲಿತಾಂಶ ಕಾರಣಾಂತರಗಳಿಂದ ಅಧಿಕೃತ …

ಪತ್ರಕರ್ತರ ಹಿತ ಕಾಯುವಲ್ಲಿ ಸದಾ ಮುಂಚೂಣಿಯಲ್ಲಿರುತ್ತೇನೆ Read More »

ಭ್ರಷ್ಟರ ವಿರುದ್ಧ ಸರ್ಕಾರಿ ಜಮೀನು ಭೂಗಳ್ಳರ ವಿರುದ್ದ ಸಂಘಟನೆ ಹೋರಟ

ದೇವನಹಳ್ಳಿ: ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಹುಜನ್ ಸೇವಾಭಿವೃದ್ಧಿ ಸಂಸ್ಥೆ, ಪ್ರಜಾ ವಿಮೋಚನಾ ಬಹುಜನ ಸಮಿತಿ ವತಿಯಿಂದ ಪದಾಧಿಕಾರಿಗಳ ಸಮಾಲೋಚನಾ ಸಭೆಯು ರಾಜ್ಯ ಉಪಾಧ್ಯಕ್ಷ ಸಿಂಗ್ರಹಳ್ಳಿ ನರಸಿಂಹಯ್ಯನರವ ಅಧ್ಯಕ್ಷತೆಯಲ್ಲಿ ನಡೆಯಿತು. ಹಲವು ವರ್ಷಗಳಿಂದ ಪ್ರಜಾ ವಿಮೋಚನಾ ಬಹುಜನ‌ ಸಮಿತಿ ಬಡವರ ದೀನದಲಿತರ ಪರವಾಗಿ ಹಾಗೂ ಭ್ರಷ್ಟ ಅಧಿಕಾರಿಗಳ ವಿರುದ್ಧ ಧ್ವನಿ ಎತ್ತಿ ಅವರಿಗೆ ನ್ಯಾಯ ದೊರಕಿಸುವ ಕೆಲಸದಲ್ಲಿ ಮುಂಚೂಣಿಯಲ್ಲಿದ್ದು ಕಳೆದ ಒಂದು ವರ್ಷದಿಂದ ತಟಸ್ಥವಾಗಿದ್ದ ಸಮಿತಿ ಇಂದಿನಿಂದ ಭ್ರಷ್ಟ ಅಧಿಕಾರಿಗಳ ವಿರುದ್ಧ, ಭ್ರಷ್ಟ ಭೂಗಳ್ಳರ ವಿರುದ್ಧ ಹೋರಾಟ …

ಭ್ರಷ್ಟರ ವಿರುದ್ಧ ಸರ್ಕಾರಿ ಜಮೀನು ಭೂಗಳ್ಳರ ವಿರುದ್ದ ಸಂಘಟನೆ ಹೋರಟ Read More »

2023 ರಲ್ಲಿ ಜೆಡಿಎಸ್ ಠೇವಣಿ ಕಳೆದುಕೊಳ್ಳುತ್ತದೆ

ದೇವನಹಳ್ಳಿ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮುಂಬರುವ 2023 ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಠೇವಣಿ ಕಳೆದುಕೊಂಡು ಕೊನೆ ಸ್ಥಾನಕ್ಕೆ ಹೋಗುತ್ತದೆ ಅದಕ್ಕೆ ತಕ್ಕಂತ ಕೆಲಸಗಳು ಇಂದಿನ ಶಾಸಕರು ಮಾಡುತ್ತಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಬಿ.ಕೆ.ಶಿವಪ್ಪ ಭವಿಷ್ಯ ನುಡಿದರು. ದೇವನಹಳ್ಳಿ ಪಟ್ಟಣದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಮಧ್ಯಮ ವರ್ಗದ ಜನ , ಸಾಮಾನ್ಯ ವರ್ಗದ ಜನ ಮಾಮೂಲಿನಂತೆ ಜೀವನ ನಡೆಸಲು ಸಾಧ್ಯವಾಗದೇ ಬೆಲೆ ಏರಿಕೆ ಭೂತವನ್ನು ದಿನನಿತ್ಯ …

2023 ರಲ್ಲಿ ಜೆಡಿಎಸ್ ಠೇವಣಿ ಕಳೆದುಕೊಳ್ಳುತ್ತದೆ Read More »

ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಸದುಪಯೋಗ ಪಡೆಯಬೇಕು

ದೇವನಹಳ್ಳಿ: ರಾಜ್ಯದ ಜನತೆಯ ಆರೋಗ್ಯದ ಹಿತದೃಷ್ಟಿಯಿಂದ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್‌ ವಿತರಣೆಗೆ ಕ್ರಮವಹಿಸಲಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜನತೆ ಈ ಯೋಜನೆಯ ಸದುಪಯೋಗ ಪಡೆಯಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸುಧಾಕರ್ ಅವರು ತಿಳಿಸಿದರು. ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಸದುಪಯೋಗ ಪಡೆಯಬೇಕು Read More »

ಸಮಾಜದ ಹಿತಕ್ಕಾಗಿ ಕೊಡುವ ಕೊಡುಗೈದಾನಿಗಳು

ದೇವನಹಳ್ಳಿ:ನಮ್ಮ ಭಾರತೀಯ ಪರಂಪರೆಯಲ್ಲಿ ನಮ್ಮ ದೇಹಿಕ ಆರೋಗ್ಯಕ್ಕೆ ನಮ್ಮ ಆಚಾರ ವಿಚಾರ, ನಡವಳಿಕೆ ಕಾರಣವಾದರೆ, ಮಾನಸಿಕ ಆರೋಗ್ಯಕ್ಕೆ ದೇವಾಲಯಗಳು ಕಾರಣ. ದೇವಾಲಯಕ್ಕೆ ಹೋದಾಗ ಮನಸ್ಸು ಶುದ್ಧವಾಗುತ್ತದೆ ಎಂದು ತುಮಕೂರು ಸಿದ್ದಗಂಗಾ ಕ್ಷೇತ್ರದ ಸಿದ್ದಲಿಂಗಸ್ವಾಮಿಗಳು ತಿಳಿಸಿದರು ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಗಾಂಧಿ ಚೌಕದಲ್ಲಿ ಶ್ರೀ ನಗರೇಶ್ವರಸ್ವಾಮಿ ಸೇವಾ ಟ್ರಸ್ಟ್ಅಯೋಧ್ಯಾ ನಗರ ಶಿವಾಚಾರ ವೈಶ್ಯ ನಗರ್ತ ಸಂಘದ ವತಿಯಿಂದ ನಗರೇಶ್ವರಸ್ವಾಮಿ ದೇವಾಲಯ ಪ್ರಾಂಗಣದಲ್ಲಿ ಸುಸಜ್ಜಿತವಾದ ದಾನಿಗಳಿಂದ ನಿರ್ಮಿಸಿದ ಶ್ರೀ ನಗರೇಶ್ವರಸ್ವಾಮಿ ಪ್ರಾರ್ಥನಾ ಮಂದಿರದ ಭವನವನ್ನು ಶ್ರೀ ಸಿದ್ದಗಂಗಾ ಕ್ಷೇತ್ರದ …

ಸಮಾಜದ ಹಿತಕ್ಕಾಗಿ ಕೊಡುವ ಕೊಡುಗೈದಾನಿಗಳು Read More »

ಬಿಜೆಪಿ ಬಲವರ್ಧನೆಗೆ ಹೆಚ್ಚು ಒತ್ತು ನೀಡಿ

ದೇವನಹಳ್ಳಿ: ವಿಜಯಪುರ ಪಟ್ಟಣದಲ್ಲಿ ಜೆಡಿಎಸ್ , ಕಾಂಗ್ರೆಸ್ ತೊರೆದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ , ಸಚಿವ ಡಾ.ಕೆ.ಸುಧಾಕರ್ ಹಾಗೂ ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜು ಮತ್ತು ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ನೇತೃತ್ವದಲ್ಲಿ ಅನೇಕ ಮಂದಿ ಬಿಜೆಪಿಗೆ ಸೇರ್ಪಡೆಗೊಂಡರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಶ್ರೀ ವೆಂಕಟೇಶ್ವರ್ ವುಡ್ ಪೈನಿಂಗ್ ಹಾಲ್‌ನಲ್ಲಿ ಮಾಲೀಕ ಕೃಷ್ಣಮೂರ್ತಿ ಸೇರಿದಂತೆ ಅನೇಕ ಬೆಂಬಲಿಗರು ಬಿಜೆಪಿಗೆ ಸೇರ್ಪಡೆಗೊಂಡರು . ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಮಾತನಾಡಿ , ಪ್ರಧಾನಿ ನರೇಂದ್ರ ಮೋದಿ …

ಬಿಜೆಪಿ ಬಲವರ್ಧನೆಗೆ ಹೆಚ್ಚು ಒತ್ತು ನೀಡಿ Read More »

ಪಶು ಚಿಕಿತ್ಸಾಲಯ ನೂತನ ಕಟ್ಟಡ ಉದ್ಘಾಟನೆ

ದೇವನಹಳ್ಳಿ: ದೇವನಹಳ್ಳಿ ತಾಲ್ಲೂಕು ಯಲಿಯೂರು ಗ್ರಾಮದಲ್ಲಿ ನೂತನ ಪಶು ಚಿಕಿತ್ಸಾಲಯ ಕಟ್ಟಡವನ್ನು ವೈದ್ಯಕೀಯ ಸಚಿವ ಡಾ.ಕೆ. ಸುಧಾಕರ್ ಉದ್ಘಾಟಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೆವಾ ಇಲಾಖೆ ಇವರ ಸಹಯೋಗದಲ್ಲಿ ಆರ್.ಐ.ಡಿ.ಎಫ್ ಯೋಜನೆಯಡಿ ತಾಲ್ಲೂಕಿನ ಯಲಿಯೂರು, ಆವತಿ, ತಿಂಡ್ಲು, ಕನ್ನಮಂಗಲ ಮತ್ತು ನಲ್ಲೂರು ಗ್ರಾಮಗಳಲ್ಲಿ ನಿರ್ಮಾಣಗೊಂಡ ನೂತನ ಪಶು ಚಿಕಿತ್ಸಾಲಯ ಕಟ್ಟಡಗಳ ಉದ್ಘಾಟನೆ ಮಾಡಿ ಮಾತನಾಡಿ, ಒಂದು ಕಡೆ ರೇಷ್ಮೆ ಬೆಳೆದು ಮತ್ತೊಂದು ಕಡೆ ಹೈನುಗಾರಿಕೆ ಮಾಡಿಕೊಂಡು ಕುಟುಂಬ ನಿರ್ವಹಣೆಯ ಜೊತೆ ಪಶುಪಾಲನೆಯನ್ನು …

ಪಶು ಚಿಕಿತ್ಸಾಲಯ ನೂತನ ಕಟ್ಟಡ ಉದ್ಘಾಟನೆ Read More »

ಶತಮಾನ ಕಂಡ ಅಪರೂಪದ ಶರಣ , ತ್ರಿವಿಧ ದಾಸೋಹಿ

ದೇವನಹಳ್ಳಿ: ಶತಾಯುಷಿ ಪರಮಪೂಜ್ಯ ಡಾ.ಶಿವಕುಮಾರ ಸ್ವಾಮೀಜಿಯವರು ಜಗತ್ತು ಕಂಡ ಒಂದು ಅಚ್ಚರಿ. ನಡೆದಾಡುವ ದೇವರೆಂದೇ ಖ್ಯಾತಿಯಾಗಿರುವ ಶ್ರೀಗಳು ತಾರುಣ್ಯದಲ್ಲಿಯೇ ತಮ್ಮ ವೈಯುಕ್ತಿಕ ಜೀವನವನ್ನು ತ್ಯಾಗ ಮಾಡಿ ಸುಮಾರು 80 ವರ್ಷಗಳಿಗೂ ಹೆಚ್ಚು ಕಾಲ ನಿರಂತರವಾಗಿ ಅವಕಾಶ ವಂಚಿತ ಮಕ್ಕಳಿಗೆ ಜಾತಿ, ಮತ, ಅಂತಸ್ತುಗಳನ್ನೆಣಿಸದೇ ಅನ್ನ ದಾಸೋಹದ ಜೊತೆಗೆ ಅಕ್ಷರವನ್ನು ಕಲಿಸಿದವರು. ಇವರು ನಮ್ಮ ಸಮಾಜಕ್ಕೆ ಮಾದರಿ ಪುರುಷ ಎಂದು ಪುರಸಭಾ ಸದಸ್ಯ ಎಂ.ಸತೀಶ್ ಕುಮಾರ್ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಹೃದಯ ಭಾಗವಾದ ಗಾಂಧಿಚೌಕದಲ್ಲಿ ಅಯೋಧ್ಯಾ …

ಶತಮಾನ ಕಂಡ ಅಪರೂಪದ ಶರಣ , ತ್ರಿವಿಧ ದಾಸೋಹಿ Read More »

ಒತ್ತಡ ಆತಂಕವಿಲ್ಲದೆ ಪರೀಕ್ಷೆ ಬರೆಯಿರಿ: ಎಂ. ತೇಜಸ್

ದೇವನಹಳ್ಳಿ,ಮಾ,30 : ಪರೀಕ್ಷೆ ಬರೆಯುತ್ತಿರುವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನಮ್ಮ ಎವಿವಿ ಟ್ರಸ್ಟ್ ವತಿಯಿಂದ ಕುಡಿಯುವ ನೀರಿನ ಬಾಟಲ್ ಹಾಗೂ ಬಿಸ್ಕತ್ತು ಪ್ಯಾಕೇಜ್ ನೀಡಿ, ಪರೀಕ್ಷೆಯನ್ನು ಯಾವುದೇ ಒತ್ತಡ ಆತಂಕವಿಲ್ಲದೆ ಬರೆಯಿರಿ ಎಂದು ಶುಭಹಾರೈಸುತ್ತೇವೆ ಎಂದು ಎವಿವಿ ಟ್ರಸ್ಟ್ಕಾ ರ್ಯದರ್ಶಿ ಎಂ.ತೇಜಸ್ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆಯ ಕೇಂದ್ರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ …

ಒತ್ತಡ ಆತಂಕವಿಲ್ಲದೆ ಪರೀಕ್ಷೆ ಬರೆಯಿರಿ: ಎಂ. ತೇಜಸ್ Read More »

ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ದೇವನಹಳ್ಳಿ,ಮಾ,26 : ಕೋವಿಡ್ ಮಹಾಮಾರಿ, ಲಾಕ್ ಡೌನ್ ಸಂಕಷ್ಟ ಮುಗಿದು ಈ ವರ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಮುಕ್ತ ವಾತಾವರಣ ಸೃಷ್ಟಿಯಾಗಿದ್ದು, ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆ ಬರೆಯಲು ಸಿದ್ಧರಾಗಿ ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎನ್.ಎಲ್. ಶಶಿಕುಮಾರ್ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕಾಲೇಜಿನ ವತಿಯಿಂದ ಶಾರದಾ ಪೂಜೆ, ದ್ವಿತೀಯ ಪಿ.ಯು. ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ವಿತರಿಸಿ …

ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ Read More »

Translate »
Scroll to Top