ದೇಶದಲ್ಲೇ  ಮೊದಲ ಪ್ರಯೋಗ : ಪ್ರಾಣಿ – ಪಕ್ಷಿ ಹಾಗು ಜೀವ ವೈವಿಧ್ಯ ಸಂರಕ್ಷಣೆಗೆ ಡಿಜಿಟಲ್ ತಂತ್ರಜ್ಞಾನ

ಬೆಂಗಳೂರು: ಜೀವವೈವಿಧ್ಯ ರಕ್ಷಣೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರುವ ನಿರೀಕ್ಷೆ ಇರುವ ಡಿಜಿಟಲ್ ತಂತ್ರಜ್ಞಾನದ ಮೂಲಕ ಜೀವ ವೈವಿಧ್ಯ ಸಂರಕ್ಷಣೆಗಾಗಿ ರೂಪಿಸಲಾಗಿರುವ ಜಾಗತಿಕ ಮುಕ್ತ ವೇದಿಕೆಯ ಮೊದಲ ಅಂತಾರಾಷ್ಟ್ರೀಯ ಸಮ್ಮೇಳನ ನಗರದಲ್ಲಿ ಶನಿವಾರ ನಡೆಯಲಿದೆ. ನಗರದ ರಾಡಿಸನ್ ಬ್ಲೂ ಏಟ್ರಿಯಾನಲ್ಲಿ ನಡೆಯಲಿರುವ ಈ ಸಮ್ಮೇಳನವನ್ನು ಏಟ್ರಿಯಾ ವಿಶ್ವವಿದ್ಯಾಲಯದ ಉತ್ಕೃಷ್ಟತೆಯ ಕೇಂದ್ರ ಮತ್ತು ಸ್ವಿಸ್ನೆಕ್ಸ್ SWISSNEX [Swissnex is the Swiss global network connecting Switzerland and the world in education, research & innovation] ಸಹಯೋಗದೊಂದಿಗೆ ಆಯೋಜಿಸುತ್ತಿದೆ. ಈ ಸಮ್ಮೇಳನ, ಡಿಜಿಟಲ್ ತಂತ್ರಜ್ಞಾನ ಮೂಲಕ ನಮ್ಮ ಜೀವ ವೈವಿಧ್ಯತೆ ರಕ್ಷಣೆಯ ಕ್ಷೇತ್ರದ ಸಾಧ್ಯತೆಗಳ ಬಗ್ಗೆ ಚರ್ಚಿಸಲಿದೆ.