ರಾಜ್ಯಪಾಲರಿಂದ ಕೊಪ್ಪಳ ವಿಶ್ವವಿದ್ಯಾಲಯದ ಲಾಂಛನ ಅನಾವರಣ
ಬೆಂಗಳೂರು : ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ರಾಜಭವನದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಲಾಂಛನವನ್ನು ಅನಾವರಣಗೊಳಿಸಿದರು.
ಬೆಂಗಳೂರು : ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ರಾಜಭವನದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಲಾಂಛನವನ್ನು ಅನಾವರಣಗೊಳಿಸಿದರು.
ಬೆಳಗಾವಿ: ಕರ್ನಾಟಕವು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ ಇಪಿ) ಜಾರಿಗೆ ತರುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದ, ಪ್ರಸ್ತುತ ಎಸ್ ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದ ಡಾ. ಬಿ. ಯಶೋವರ್ಮ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ‘ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರ ಸಂಬಂಧಿ ಯಶೋವರ್ಮ ಅವರ ನಿಧನದ ಸುದ್ದಿ ಆಘಾತ ತಂದಿದೆ. ಎಸ್ ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ ಸಾವಿರಾರು ಪ್ರತಿಭಾವಂತರು, ಗಣ್ಯರನ್ನು ಈ ನಾಡು, …
ಎಸ್ ಡಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ Read More »
ಬೆಂಗಳೂರು : ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಟ್ಟ ಕುರಿತು ಊಹಾಪೋಹಗಳೆದ್ದಿದ್ದು, ಈ ಬಗ್ಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ್ದು, ಯಾವುದೇ ಕಾರಣಕ್ಕೂ ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈ ಬಿಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರನ್ನು …
ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ. ಸಚಿವ ಕೋಟ ಸ್ಪಷ್ಟನೆ Read More »
ಕಾರಟಗಿ : ಎತ್ತಿನ ಬಂಡಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಶಿಕ್ಷಕರು ಕಲಿಕಾ ಚೇತರಿಕೆ ಕಾರ್ಯಕ್ರಮದ ಬಗ್ಗೆ ರಸ್ತೆಯುದ್ದಕ್ಕೂ ವಿವರಿಸುತ್ತ ವಿಶಿಷ್ಟ ರೀತಿಯಲ್ಲಿ ಜನಮನ ಸೆಳೆದರು ನಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಕೋವಿಡ್ ಸಂಕಷ್ಟದಲ್ಲಿ ಮಕ್ಕಳು ಶಿಕ್ಷಣದಿಂದ ದೂರ ಉಳಿಯುವ ಪರಿಸ್ಥಿತಿ ಬಂದಿತ್ತು ಆದರೆ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ನಿಟ್ಟಿನಲ್ಲಿ ನಮ್ಮ ಶಿಕ್ಷಣ ಇಲಾಖೆ ಆನ್ಲೈನ್ ಕ್ಲಾಸ್ ಮಾಡುವ ಮೂಲಕ ಮಕ್ಕಳ ಬೌದ್ಧಿಕಮಟ್ಟವನ್ನು ಹೆಚ್ಚಿಸಲು ಸಹಕಾರಿಯಾಯಿತು. ಅಲ್ಲದೆ ಈ ವರ್ಷದಿಂದ ಕಲಿಕಾ ಕ್ಷೇತ್ರಕ್ಕೆ ಎನ್ನುವ ವಿಶೇಷ ಕಾರ್ಯಕ್ರಮದ …
ಸ.ಹಿ.ಪ್ರಾ.ಶಾಲೆಮಾರುತಿನಗರ ಮರ್ಲಾನಹಳ್ಳಿ ಯಲ್ಲಿ ಕಲಿಕಾ ಚೇತರಿಕೆ ಜಾಗೃತಿ ಜಾಥ Read More »
ಬೆಂಗಳೂರು: ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ನಡೆದ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಶೇ. 85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಅವರು ತಿಳಿಸಿದರು. ಮಲ್ಲೇಶ್ವರದಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಗುರುವಾರ (ಮೇ 19) ಸುದ್ದಿಗೋಷ್ಠಿಯಲ್ಲಿ ಪರೀಕ್ಷೆ ಫಲಿತಾಂಶದ ಕುರಿತು ಸಚಿವರು ಮಾಹಿತಿ ನೀಡಿದರು. ಪರೀಕ್ಷೆಗೆ ಹಾಜರಾದ 8,53,436 ವಿದ್ಯಾರ್ಥಿಗಳ ಪೈಕಿ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕಿಯರ ಉತ್ತೀರ್ಣ ಪ್ರಮಾಣ ಶೇ.90.29ರಷ್ಟು ಹಾಗೂ ಬಾಲಕರ ಉತ್ತೀರ್ಣ ಪ್ರಮಾಣ ಶೇ.81.30ರಷ್ಟಿದೆ. …
ಬೆಂಗಳೂರು : ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಕೇಳಿ ಬರುತ್ತಿರುವ ಆಕ್ಷೇಪಗಳ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯದ ಮುದ್ರಣವನ್ನು ತಕ್ಷಣ ತಡೆಹಿಡಿದು ರಾಜ್ಯದ ಶಿಕ್ಷಣ ತಜ್ಞರು, ಸಾಹಿತಿಗಳು ಮತ್ತು ಚಿಂತಕರ ಜೊತೆ ಸಮಾಲೋಚನೆ ನಡೆಸಿ ಮುಂದಿನ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳನ್ನು ಆಗ್ರಹಪಡಿಸುತ್ತೇನೆ. ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳೇ ನಿಜವೆಂದಾದರೆ ಇದು ಅಕ್ಷಮ್ಯ ಅಪರಾಧ. ಈ ಹಿನ್ನೆಲೆಯಲ್ಲಿ ಅನಗತ್ಯ ಊಹಾಪೋಹ ಮತ್ತು ಸಂಘರ್ಷಕ್ಕೆ ಅವಕಾಶ ನೀಡದೆ ಮುಖ್ಯಮಂತ್ರಿಗಳೇ ಖುದ್ದಾಗಿ ಸ್ಪಷ್ಟೀಕರಣನೀಡಬೇಕು. ರಾಜ್ಯದಲ್ಲಿ ರಾಷ್ಟ್ರ-ಅಂತರರಾಷ್ಟ್ರೀಯ ಮಟ್ಟದಲ್ಲಿ ಗೌರವಕ್ಕೆ ಪಾತ್ರರಾಗಿರುವ ಸಾಹಿತಿಗಳು, …
ಪರಿಷ್ಕರಣೆಯ ವಿವಾದದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಲೆ ತಗ್ಗಿಸುವಂತಾಗಿದೆ Read More »
ಮಂಡ್ಯ : ದೇಶದ ಜನರಿಗಾಗಿ ನಿಮ್ಮ ಸೇವೆ ಮುಡಿಪಾಗಿರಲಿ ಎಂದು ಇಂದು ವೈದ್ಯ ವೃತ್ತಿಗೆ ಪಾದಾರ್ಪಣೆ ಮಾಡುತ್ತಿರುವ ಯುವ ವೈದ್ಯರಿಗೆ ಮುಖ್ಯಮಂತ್ರಿಗಳು ಕಿವಿಮಾತು ಹೇಳಿದರು. ಆದಿಚುಂಚನಗಿರಿ ಇನ್ನ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿರುವ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಪದವಿ ಪ್ರದಾನ ಸಮಾರಂಭ ಹಾಗೂ ಹೃದಯ ವಿಜ್ಞಾನ ವಿಭಾಗದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕಲಿಕೆ ಒಂದು ನಿರಂತರ ಪ್ರಕ್ರಿಯೆ. ನಿಜಜೀವನದಲ್ಲಿ ಮೊದಲು ಪರೀಕ್ಷೆ …
ದೇಶದ ಜನರಿಗಾಗಿ ನಿಮ್ಮ ಸೇವೆ ಮುಡಿಪಾಗಿರಲಿ : ವೈದ್ಯರಿಗೆ ಮುಖ್ಯಮಂತ್ರಿಗಳ ಕಿವಿಮಾತು Read More »
ಬೆಂಗಳೂರು: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನಿರ್ದೇಶನದ ಮೇರೆಗೆ ರಾಜ್ಯದಲ್ಲಿ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಸ್ಮರಣೆ ಹಾಗೂ ಜಾಗೃತಿ ಸಮಾವೇಶ ಮಾಡಲು ತೀರ್ಮಾನಿಸಿದ್ದೆವೆ. ಈ ಹಿನ್ನೆಲೆಯಲ್ಲಿ ಇದೇ 18ರಂದು ಬೆಳಗ್ಗೆ 10.30ಕ್ಕೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ಮಾಡಲಿದ್ದೇವೆ. ಈ ಸಭೆಯಲ್ಲಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಡಾ.ಜಿ. ಪರಮೇಶ್ವರ್, ಕೆ.ಹೆಚ್ ಮುನಿಯಪ್ಪ, ಕಾರ್ಯಾಧ್ಯಕ್ಷರಾದ ಧೃವನಾರಾಯಣ, ಸಂಸದರಾದ ಎಲ್ ಹನುಮಂತಯ್ಯ, ಪ್ರಿಯಾಂಕ್ …
ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಸ್ಮರಣೆ ಹಾಗೂ ಜಾಗೃತಿ ಸಮಾವೇಶ Read More »
ಬೆಂಗಳೂರು: ಸೌಹಾರ್ದತೆ ಭಾರತೀಯ ಪುರಾತನ ಸಂಸ್ಕೃತಿಯಾಗಿದ್ದು, ಶಿಕ್ಷಣದ ಮೂಲಕ ಜನರನ್ನು ಒಗ್ಗೂಡಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ. ಸೆಂಟ್ ಜೋಸೆಫ್ ಇನ್ಸ್ಟಿಟ್ಯೂಟ್ ಆಫ್ ಮೇನೆಜ್ಮೆಂಟ್ ನ 25 ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಿ, ಪಿಜಿಡಿಎಂ ಕಾರ್ಯಕ್ರಮವನ್ನು ಪೂರ್ಣಗೊಳಿಸಿದ ಎಲ್ಲಾ ಪದವಿಧರರಿಗೆ ಅಭಿನಂದನೆ ಸಲ್ಲಿಸಿದರು ಮತ್ತು ಇವರ ಮುಂದಿನ ಪ್ರಯತ್ನಗಳು ಯಶಸ್ವಿಯಾಗಲಿ ಎಂದು ಹಾರೈಸಿದರು. ಬಳಿಕ ಮಾತನಾಡಿದ ರಾಜ್ಯಪಾಲರು, ವಿದ್ಯಾರ್ಥಿ ಜೀವನದಲ್ಲಿ ಪಡೆದ ಶಿಕ್ಷಣ ಎಲ್ಲಾ ವಲಯಗಳಿಗೂ ಅನುಕೂಲವಾಗಬೇಕು. ಆಧುನಿಕ ಜೀವನದಲ್ಲಿ ಶಿಕ್ಷಣ …
ಶಿಕ್ಷಣದ ಮೂಲಕ ಸೌಹಾರ್ದತೆ ಮೂಡಿಸಲು ವಿದ್ಯಾರ್ಥಿಗಳು ಮುಂದಾಗಬೇಕು ರಾಜ್ಯಪಾಲ Read More »