hasana

ನಾನು ರಾಜ್ಯಕ್ಕೆ ಬರುವುದು ರಾಜ್ಯ ಸರಕಾರಕ್ಕೆ ಸಹಿಸಲಾಗುತ್ತಿಲ್ಲ; ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಸಕಲೇಶಪುರ: ನಾನು ರಾಜ್ಯದ ಸಂಸದನಾಗಿ, ಕೇಂದ್ರ ಸಚಿವನಾಗಿ ರಾಜ್ಯಕ್ಕೆ ಬರುವುದನ್ನು ಸಹಿಸಲು ಕಾಂಗ್ರೆಸ್ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಅದಕ್ಕಾಗಿಯೇ ರಾಜ್ಯ ಸರಕಾರ ನನಗೆ ಹೆಜ್ಜೆಹೆಜ್ಜೆಗೂ ಅಡ್ಡಿಪಡಿಸುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

‘ನಮ್ಮ ಕುಟುಂಬವನ್ನು ರಾಜಕೀಯವಾಗಿ ದುರ್ಬಲಗೊಳಿಸಲು ಷಡ್ಯಂತ್ರ’: ಸೂರಜ್ ರೇವಣ್ಣ

ಹಾಸನ: ತಮ್ಮ ಸಹೋದರ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ತಮ್ಮ ಕುಟುಂಬವನ್ನು ರಾಜಕೀಯವಾಗಿ ದರ್ಬೀಲಗೊಳಿಸುವ ಷಡ್ಯಂತ್ರವಾಗಿದೆ ಎಂದು ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಗುರುವಾರ ಹೇಳಿದ್ದಾರೆ.

ಡಿಕೆಶಿ ತಮ್ಮ ಲೆಟರ್‌ಹೆಡ್‌ಗಳನ್ನು ಸ್ವಂತಕ್ಕೆ ಬಳಸಿದ್ದಾರೆ ಎಂದು ಆರೋಪ

ಹಾಸನ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದದ ಸಿಬಿಐ ತನಿಖೆ ವಾಪಸ್ ಪಡೆಯುವ ನಿರ್ಧಾರವನ್ನು ಸಂಪುಟದಲ್ಲಿ ತೆಗೆದುಕೊಳ್ಳುವ ಮೂಲಕ ಸಿದ್ದರಾಮಯ್ಯ ನೇತೃತ್ವದ ಸರಕಾರ ಡಿ.ಕೆ.ಶಿವಕುಮಾರ್ ಪಾದದಡಿಯಲ್ಲಿ ಬಿದ್ದಿದೆ ಎನ್ನುವುದು ಸಾಬೀರಾದಂತೆ ಆಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಭಸ್ಮಾಸುರರಂತಾಗದೆ ರೈತರ ಹಿತವನ್ನು ಕಾಯುವಂತವರಾಗಿ: ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಕಿವಿಮಾತು

ಹಾಸನ: ಜಿಲ್ಲೆಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ಮುಗಿದಿದೆ. ಆದರೆ, ರೈತರ ಒಟ್ಟು ಜಮೀನಿನ ವಿಸ್ತೀರ್ಣದ ಮಾಹಿತಿ ನಿಖರವಾಗಿ ನಮೂದಿಸಲಾಗಿಲ್ಲ. ಎರಡು ತಿಂಗಳ ಹಿಂದೆಯೇ ಈ ಬಗ್ಗೆ ಖಡಕ್ ಸೂಚನೆ ನೀಡಿದ್ದರೂ ಸರ್ಕಾರದ ಸೂಚನೆ ಪಾಲಿಸಲು ನಿಮಗೇನು ಕಷ್ಟ? ಎಂದು ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಕಿಡಿಕಾರಿದರು.

ವಿಪಕ್ಷ ಸ್ಥಾನದ ಕೆಲಸ ನಿಮ್ಮಿಂದ ಕಲಿಯಬೇಕಿಲ್ಲ ಎಂದು ಸಿಎಂಗೆ ಹೆಚ್ಡಿಕೆ ತಿರುಗೇಟು

ಹಾಸನ: ಕದ್ದ ಮಾಲು ಹ್ಯುಬ್ಲೋಟ್ ವಾಚ್ ಕಟ್ಟಿಕೊಂಡು ಶೋಕಿ ಮಾಡಿದ ನೀವು ನನ್ನ ಬಗ್ಗೆ ಮಾತನಾಡುತ್ತೀರಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಸಂಘಟನೆ ಬಲಿಷ್ಠವಾಗಿದ್ದರೆ ಮಾತ್ರ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾಸನ : ಸಂಘಟನೆ ಬಲಿಷ್ಠವಾಗಿದ್ದರೆ ಮಾತ್ರ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಹಾಸನದಲ್ಲಿ ಆನೆ ಶಿಬಿರ ಸ್ಥಾಪನೆ – ಅರಣ್ಯ ಸಚಿವರು

ಹಾಸನ: ಅರಣ್ಯದಂಚಿನಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ, ಅರಣ್ಯ ಭೂಮಿಯನ್ನು ಯಾವುದೇ ರೆಸಾರ್ಟ್ ಅಥವಾ ಹೋಂಸ್ಟೇ ಒತ್ತುವರಿ ಮಾಡಿದ್ದರೆ ಸೂಕ್ತ ಕಾನೂನುಕ್ರಮ ಜರುಗಿಸಿ, ಒತ್ತುವರಿ ತೆರವು ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಆನೆ ಕಾರ್ಯಪಡೆ ಗುಂಪು ಹೆಚ್ಚಳ, ರೇಡಿಯೋ ಕಾಲರ್ ಅಳವಡಿಕೆಗೆ ಆದೇಶ

ಆಗಸ್ಟ್ 13ರಿಂದ ಇಲ್ಲಿಯವರೆಗೆ ಕಾಡಾನೆಗಳ ದಾಳಿಯಿಂದ ಐವರು ಮೃತಪಟ್ಟಿರುವ ಬಗ್ಗೆ ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಕಾಡಂಚಿನಲ್ಲಿರುವ ಜನರಿಗೆ ಈ ಸಂಬಂಧ ಹೆಚ್ಚಿನ ಜಾಗೃತಿ ಮೂಡಿಸಲು ಮತ್ತು ಮುನ್ನೆಚ್ಚರಿಕಾ ಕ್ರಮ ವಹಿಸಲು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ

ಹಾಸನ; ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು ಹಾಸನದಲ್ಲಿಂದು ನಡೆದ ಜಿಲ್ಲಾ ಕಾಫಿ ಬೆಳೆಗಾರರ ಅನಧಿಕೃತ ಸಾಗುವಳಿಯನ್ನು ಸಾಗುವಳಿಯನ್ನು ಅಧಿಕೃತ ಗೊಳಿಸುವ ಕುರಿತ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ಆಡಳಿತ ನಡೆಸಿದ ಕಾಂಗ್ರೆಸ್, ಜನತಾದಳ ಸರ್ಕಾರಗಳು ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಯಾವುದೇ ಪ್ರಾಮಾಣಿಕ ಪ್ರಯತ್ನ ಮಾಡಲಿಲ್ಲ. ನಮ್ಮ ಸರ್ಕಾರದ‌ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಕಂದಾಯ …

ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ Read More »

5 ವರ್ಷಗಳಲ್ಲಿ 55 ಲಕ್ಷ ಉದ್ಯೋಗ ಸೃಷ್ಟಿ ಅಶ್ವತ್ಥನಾರಾಯಣ

ಹಾಸನ: ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ಅಸಂಘಟಿತ ವಲಯದಲ್ಲಿ 30 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಜತೆಗೆ ಸಾಫ್ಟ್ ವೇರ್ ವಲಯವೊಂದರಲ್ಲೇ ವರ್ಷಕ್ಕೆ 5 ಲಕ್ಷದಂತೆ ಒಟ್ಟು 25 ಲಕ್ಷ ಉದ್ಯೋಗ ಅವಕಾಶ ಲಭ್ಯವಾಗಲಿದೆ. ಈ ಮೂಲಕ ಒಟ್ಟಾರೆ 55 ಲಕ್ಷ ಉದ್ಯೋಗಗಳು ಯುವಜನರಿಗೆ ಸಿಗಲಿವೆ ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಇಲ್ಲಿನ ಮಲೆನಾಡು ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯು ಏರ್ಪಡಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಂಗಳವಾರ ಮಾತನಾಡಿದರು. …

5 ವರ್ಷಗಳಲ್ಲಿ 55 ಲಕ್ಷ ಉದ್ಯೋಗ ಸೃಷ್ಟಿ ಅಶ್ವತ್ಥನಾರಾಯಣ Read More »

Translate »
Scroll to Top