health

ಹಿರಿಯ ನಾಯಕ ಜಾಲಪ್ಪ ಅವರ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಗೆ ಭೇಟಿ ನೀಡಿ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಾಯಕ ಜಾಲಪ್ಪ ಅವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಇದೇ ವೇಳೆ ಆರೋಗ್ಯ ಕುರಿತು ಸಿದ್ದರಾಮಯ್ಯ ಅವರು ಸಿದ್ದರಾಮಯ್ಯ ಅವರಿಂದ ಮಾಹಿತಿ ಪಡೆದರು. ಶಾಸಕ ನಾರಾಯಣಸ್ವಾಮಿ, ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ಮುಖಂಡರಾದ ಖಯ್ಯೂಂ, ಅನಿಲ್ ಕುಮಾರ್ ಮತ್ತಿತರರು ಹಾಜರಿದ್ದರು.

ನಟ ಶಿವರಾಂರವರ ಅರೋಗ್ಯ ಪರಿಸ್ಥಿತಿ ಗಂಭೀರ

ಚಂದನವನದ ಹಿರಿಯ ನಟ ಶಿವರಾಂರವರ ಅರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಅವರ ಹಿರಿಯ ಪುತ್ರ ರವಿಶಂಕರ್ ಮಾಹಿತಿ ನೀಡಿದ್ದಾರೆ. “ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಕಾರ್ ಆಕ್ಸಿಡೆಂಟ್ ಆಗಿತ್ತು. ನಂತರ ಮೂರು ದಿನಗಳಿಂದ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಮನೆಯಲ್ಲಿ ಅಯ್ಯಪ್ಪನ ಪೂಜೆ ಮಾಡಲು ರೂಂಗೆ ಹೋಗಿದ್ದರು. ಆ ವೇಳೆ ರೂಂನಲ್ಲಿ ಬಿದ್ದ ಹಿನ್ನೆಲೆ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಮೊನ್ನೆ ರಾತ್ರಿಯೇ ಅಸ್ಪತ್ರೆಗೆ ಕರೆದುಕೊಂಡು ಬಂದು ಸ್ಕ್ಯಾನಿಂಗ್ ಮಾಡಿಸಿದ್ದೆವು. ಸ್ಕ್ಯಾನಿಂಗ್ ರಿಪೋರ್ಟ್ ನಲ್ಲಿ …

ನಟ ಶಿವರಾಂರವರ ಅರೋಗ್ಯ ಪರಿಸ್ಥಿತಿ ಗಂಭೀರ Read More »

ಆರೋಗ್ಯ ನಂದನ ಅಡಿಯಲ್ಲಿ ಉಚಿತ ಚಿಕಿತ್ಸೆ

ಬಳ್ಳಾರಿ : ಮಕ್ಕಳಿಗೆ ಒಳ್ಳೆಯ ಭವಿಷ್ಯ ರೂಪಿಸಲು ಮಗು ಹುಟ್ಟಿದ ಮೂರು ವರ್ಷಗಳ ಕಾಲ ಪ್ರತಿ ಆರು ತಿಂಗಳಿಗೊಮ್ಮೆ ಮಕ್ಕಳ ತಜ್ಞರಿಂದ ಪರೀಕ್ಷೆ ಮಾಡಿಸಿ ಎಂದು ಜಿಪಂ ಸಿಇಒ ನಂದಿನಿ ಕೆ.ಆರ್ ಅವರು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯದ ಸಂಯುಕ್ತಾಶ್ರಯಲ್ಲಿ ಆರೋಗ್ಯ ನಂದನ ಅಭಿಯಾನದಡಿಯಲ್ಲಿ ನಗರದ ಜಿಲ್ಲಾಸ್ಪತ್ರೆಯ ಆವರಣದ ಮಕ್ಕಳ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನಕುಮಾರಿ …

ಆರೋಗ್ಯ ನಂದನ ಅಡಿಯಲ್ಲಿ ಉಚಿತ ಚಿಕಿತ್ಸೆ Read More »

Translate »
Scroll to Top