highcourt

ಪೋಕ್ಸೋ ಪ್ರಕರಣದಲ್ಲಿ ಬಿಎಸ್​ ಯಡಿಯೂರಪ್ಪಗೆ ಬಿಗ್​ ರಿಲೀಫ್​: ಬಂಧಿಸದಂತೆ ಹೈಕೋರ್ಟ್ ‍ಆದೇಶ

ಬೆಂಗಳೂರು: ತಮ್ಮ ವಿರುದ್ಧದ ಪೊಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಜೂ. ೧೭ರಂದು ಹಾಜರಾಗುವುದಾಗಿ ಬಿ.ಎಸ್ ಯಡಿಯೂರಪ್ಪ ಉತ್ತರಿಸಿದ್ದಾರೆ. ಅವರಿಗೆ ವಯಸ್ಸಾಗಿದ್ದು ಸಹಜವಾಗಿಯೇ ಅನಾರೋಗ್ಯ ಸಮಸ್ಯೆಗಳಿರುತ್ತವೆ. ಹೀಗಾಗಿ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.

ಮಧ್ಯಂತರ ನಿರೀಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೇ ಎಸ್​ಐಟಿ ಮುಂದೆ ಭವಾನಿ ರೇವಣ್ಣ ಹಾಜರ್

ಬೆಂಗಳೂರು: ಲೈಂಗಿಕ ಅನ್ಯಾಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ ವಿಶೇಷ ತನಿಖಾ ದಳ ಅಧಿಕಾರಿಗಳ ವಿಚಾರಣೆಗೆ ಹಾಜರಾಗದೆ ಕಳೆದ ೧೫-೨೦ ದಿನಗಳಿಂದ ನಾಪತ್ತೆಯಾಗಿದ್ದ ಭವಾನಿ ರೇವಣ್ಣ ಕೊನೆಗೂ ಪ್ರತ್ಯಕ್ಷವಾಗಿದ್ದಾರೆ. ಹೈಕೋರ್ಟ್ನ ಏಕ ಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಬೆನ್ನಲ್ಲೇ ಮಾಜಿ ಸಚಿವ ಹೆಚ್ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ವಿಚಾರಣೆಗೆ ಎಸ್ಐಟಿ ಅಧಿಕಾರಿಗಳ ಎದುರು ಹಾಜರಾಗಿದ್ದಾರೆ.

ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಎಚ್​ಡಿ ರೇವಣ್ಣಗೆ ಬಿಗ್ ಶಾಕ್ ಕೊಟ್ಟ ಹೈಕೋರ್ಟ್

ಹಾಸನ/ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡೆಗಡೆಯಾಗಿರುವ ಶಾಸಕ ಎಚ್ಡಿ ರೇವಣ್ಣಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೊಳೆನರಸೀಪುರ ಪೊಲೀಸ್ ಠಾಣೆ PSI ಅಜಯ್ ಅವರು ಇಂದು ಹರದನಹಳ್ಳಿ ಮನೆಯಲ್ಲಿ ರೇವಣ್ಣಗೆ ಹೈಕೋರ್ಟ್ ನ ನೊಟೀಸ್ ಮುಟ್ಟಿಸಿದ್ದು,ನೋಟಿಸ್ ತಲುಪಿದ ಐದು ದಿನದೊಳಗೆ ಹಾಜರಾಜಗಲು ಕೋರ್ಟ್ ನೋಟಿಸ್ನಲ್ಲಿ ತಿಳಿಸಿದೆ. ರೇವಣ್ಣ ಅವರ ಜಾಮೀನು ಪ್ರಶ್ನಿಸಿ ಎಸ್ಐಟಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್ ಇದೀಗ ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

ಕಾಫಿ, ಟೀಗೆ ಲಕ್ಷಾಂತರ ವೆಚ್ಚ ಮಾಡುವವರಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕ ಭರಿಸಲಾಗದೇ?: ಸರ್ಕಾರದವಿರುದ್ಧ ಹೈಕರ‍್ಟ್‌ ಆಕ್ರೋಶ

ಬೆಂಗಳೂರು: ನಿಮ್ಮ ಕಚೇರಿಯಲ್ಲಿ ಕಾಫಿ, ಟೀಗೆ ಪ್ರತಿ ತಿಂಗಳಿಗೆ ಲಕ್ಷಾಂತರ ರೂಪಾಯಿ ರ್ಚಾ ಗುತ್ತದೆ. ಆದರೆ, ಬಡ ಕರ್ಮಿಂಕರ ಪುತ್ರಿಯರ ಶಿಕ್ಷಣದ ರ್ಚು ಭರಿಸಲು ನಿಮಗೆ ಆಗದೇ? ಇಂಥ ಮಕ್ಕಳ ಸಹಾಯಕ್ಕೆ ರಾಜ್ಯ ರ್ಕಾ ರ ಮುಂದಾಗಬೇಕು. ಸೆಸ್ ಸಂಗ್ರಹಿಸಿರುವುದು ಅವರಿಗಾಗಿ ಅಲ್ಲವೇ? ಎಂದು ರ್ನಾ ಟಕ ರಾಜ್ಯ ಕಟ್ಟಡ ಮತ್ತು ಇತರೆ ನರ್ಮಾರಣ ಕರ್ಮಿುಕರ ಕಲ್ಯಾಣ ಮಂಡಳಿಯನ್ನು ಹೈಕರ್ಟ್ಿ ತೀವ್ರ ತರಾಟೆಗೆ ತೆಗೆದುಕೊಂಡಿತು.

ಒಂದು ಹುಕ್ಕಾ ಸೇವನೆ ೧೦೦ ಸಿಗರೇಟುಗಳ ಸೇವನೆಗೆ ಸಮ: ರಾಜ್ಯ ಸರ್ಕಾರದ ಹುಕ್ಕಾ ಬಾರ್ ನಿಷೇಧ ಆದೇಶ ಎತ್ತಿ ಹಿಡಿದ ‍

ಬೆಂಗಳೂರು: ಸರ್ವ ಜನಿಕ ಹಿತದೃಷ್ಟಿಯಿಂದ ಎಲ್ಲಾ ಬಗೆಯ ಹುಕ್ಕಾ ದಾಸ್ತಾನು, ಮಾರಾಟ, ಸೇವನೆ ಮತ್ತು ಜಾಹೀರಾತು ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ನಾಡಗೀತೆಗೆ ಆಕ್ಷೇಪ ಪ್ರಕರಣ;  ತೀರ್ಪು ಕಾಯ್ದಿರಿಸಿದ ‍ ಹೈಕೋರ್ಟ್

ನಾಡಗೀತೆಗೆ ಆಕ್ಷೇಪ ಪ್ರಕರಣ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ವಿಧಾನಸಭೆಯಲ್ಲಿ ವಿಸ್ತೃತ ರ್ಚೆ ಯ ಬಳಿಕ ಶಿಕ್ಷಣ ಕಾಯಿದೆ ಅಡಿ ನೋಂದಾಯಿತ ಶಾಲೆಗಳೆಲ್ಲವೂ ಖ್ಯಾತ ಗಾಯಕ, ಸಂಗೀತ ಸಂಯೋಜಕ ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ ೨ ನಿಮಿಷ ೩೦ ಸೆಕೆಂಡ್ಗಳ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಆದೇಶಿಸಲಾಗಿದೆ ಎಂದು ರಾಜ್ಯ ರ್ಕಾ ರವು ಹೈಕರ್ಟ್ಾಗೆ ತಿಳಿಸಿದೆ. ಇದನ್ನು ಆಲಿಸಿದ ನ್ಯಾಯಾಲಯವು ಆದೇಶ ಕಾಯ್ದಿರಿಸಿದೆ.

ಎಂಬಿಬಿಎಸ್ ಪದವಿ ಪಡೆಯದ ದಂತ ವೈದರನ್ನು ತಾಲ್ಲೂಕು ಆರೋಗ್ಯ ಅಧಿಕಾರಿ ಹುದ್ದೆಗೆ ನಿಯೋಜಿಸುವಂತಿಲ್ಲ

ಬೆಂಗಳೂರು: ಎಂಬಿಬಿಎಸ್ ಪದವಿ ಪಡೆಯದ ಹಿನ್ನೆಲೆಯಲ್ಲಿ ದಂತ ವೈದ್ಯರನ್ನು ರಾಜ್ಯ ರ್ಕಾ ರಿ ಸೇವೆಗಳ ಅಡಿ ಬರುವ ತಾಲ್ಲೂಕು ಆರೋಗ್ಯ ಅಧಿಕಾರಿ ಹುದ್ದೆಗೆ ನಿಯೋಜಿಸುವಂತಿಲ್ಲ ಎಂದು ಹೈಕರ್ಟ್ಿನ ಧಾರವಾಡ ಪೀಠ ಆದೇಶಿಸಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕು ಆರೋಗ್ಯ ಕಚೇರಿಯ ವೈದ್ಯಾಧಿಕಾರಿಯಾಗಿ ತಮ್ಮನ್ನು ನಿಯೋಜಿಸಿದ್ದ ಆದೇಶ ಹಿಂಪಡೆದ ರ್ಕಾ ರದ ಕ್ರಮ ಪ್ರಶ್ನಿಸಿ ಹಿರಿಯ ದಂತ ವೈದ್ಯಾಧಿಕಾರಿ ಡಾ.ವಿದ್ಯಾವತಿ ಯು. ಪಾಟೀಲ್ ಸಲ್ಲಿಸಿದ್ದ ರ್ಜಿ ಯನ್ನು ನ್ಯಾಯಮರ್ತಿದಗಳಾದ ಎಂ ಐ ಅರುಣ್ ಮತ್ತು ಉಮೇಶ್ ಎಂ. ಅಡಿಗ ಅವರ ನೇತೃತ್ವದ ವಿಭಾಗೀಯ ಪೀಠ ವಜಾ ಮಾಡಿದೆ.

ಇಂದಿನಿಂದ ಅ.21ರವರೆಗೆ ಹೈಕೋರ್ಟ್ ಗೆ ದಸರಾ ರಜೆ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಗೆ ದಸರಾ ರಜೆ ಘೋಷಣೆಯಾಗಿದೆ. ಅಕ್ಟೋಬರ್ 16ರಿಂದ 21ರವರೆಗೆ ದಸರಾ ರಜೆ ಇರಲಿದೆ. ಈ ಹಿನ್ನಲೆಯಲ್ಲಿ ತುರ್ತು ಅರ್ಜಿಗಳ ವಿಚಾರಣೆಗಾಗಿ ರಜಾಕಾಲೀನ ಪೀಠಗಳನ್ನು ಕೂಡ ರಚನೆ ಮಾಡಲಾಗಿದೆ.

ಕರ್ನಾಟಕ ಉಚ್ಛ ನ್ಯಾಯಾಲಯ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಗೌರವಾನ್ವಿತ ಶ್ರೀ ಅನಂತ ರಾಮನಾಥ ಹೆಗಡೆ, ಶ್ರೀಮತಿ ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಹಾಗೂ ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಸಿದ್ದಯ್ಯ ರಾಚಯ್ಯ ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಸ್ವೀಕರಿಸಿದರು.

ಗ್ರಾ.ಪಂ ಸದಸ್ಯರು ಮೂರು ತಿಂಗಳೊಳಗೆ ಆಸ್ತಿ ವಿವರ ಸಲ್ಲಿಸಬೇಕು – ಹೈಕೋರ್ಟ್

ಗ್ರಾಮ ಪಂಚಾಯಿತಿ ಸದಸ್ಯರ ಆಸ್ತಿ ವಿವರ ಸಲ್ಲಿಕೆ ಕುರಿತಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಮೂರು ತಿಂಗಳ ಒಳಗಾಗಿ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯವೆಂದು ತಿಳಿಸಲಾಗಿದ್ದು, ಒಂದೊಮ್ಮೆ ಇದಕ್ಕೆ ವಿಫಲವಾದರೆ ಶೋಕಾಸ್ ನೋಟಿಸ್ ನೀಡದೆಯೂ ಸದಸ್ಯತ್ವದಿಂದ ಅನರ್ಹಗೊಳಿಸಬಹುದು ಎಂದು ಅಭಿಪ್ರಾಯ ಪಟ್ಟಿದೆ.

Translate »
Scroll to Top