hospet

ವಿಶ್ವ ವಿಖ್ಯಾತ ಹಂಪಿಯಲ್ಲಿ ಮಾಜಿ ಸೈನಿಕರಿಂದ ಸ್ವಚ್ಛತಾ ಸೇವೆ

ದೇಶಾದ್ಯಂತ ನಡೆದ ಸ್ವಚ್ಛತೆಯೇ ಸೇವೆ ಅಭಿಯಾನದಡಿ ಯುನೆಸ್ಕೋ ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಮಹೋನ್ನತ ಸ್ಥಾನ ಪಡೆದಿರುವ ವಿಶ್ವವಿಖ್ಯಾತ ಹಂಪಿಯಲ್ಲಿ ಮಾಜಿ ಸೈನಿಕರು ಮತ್ತು ವೀರ ನಾರಿಯರಿಂದ ಸ್ವಚ್ಛತಾ ಅಭಿಯಾನ ನಡೆಯಿತು

ಜನ ಸ್ಪಂದನ ಕಾರ್ಯಕ್ರಮಕ್ಕೆ ಸ್ಥಳದಲ್ಲೇ ವಿಧವಾ, ಅಂಗವಿಕಲ ವೇತನ ಆದೇಶ.

ಸ್ಥಳದಲ್ಲೇ ವಿಧವಾ, ಅಂಗವಿಕಲ ವೇತನ ಆದೇಶ, ಕಾರ್ಮಿಕ ಕಾರ್ಡ್ ವಿತರಣೆ, ಸಾರ್ವಜನಿಕ ಅರ್ಜಿಗಳ ಕಾಲಮಿತಿಯಲ್ಲಿ ಇತ್ಯರ್ಥ ಕ್ಕೆ ನಿರ್ದೇಶನ.

ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳಿಗೆ ನೀರು

ಬಳ್ಳಾರಿ : ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 83.18 ಟಿ.ಎಂ.ಸಿ ನೀರು ಸಂಗ್ರಹ ಇದ್ದು, ಒಳ ಹರಿವು 21,492 ಕ್ಯೂಸೆಕ್ಸ್ ಇರುತ್ತದೆ. ಜಲಾಶಯದ ನೀರಿನ ಲಭ್ಯತೆಯನ್ನು ಆಧರಿಸಿ, ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳಿಗೆ 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ವೇಳಾ ಪಟ್ಟಿಯಂತೆ ಕಾಲುವೆವಾರು ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕನೀನಿನಿ, ಮುನಿರಾಬಾದ್ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಎಲ್.ಬಸವರಾಜ್ ಅವರು ತಿಳಿಸಿದ್ದಾರೆ.

ಜಿ-20 ರಾಷ್ಟ್ರಗಳ ಗುಂಪಿಗೆ ಆಫ್ರಿಕನ್ ಯೂನಿಯನ್ ಸೇರ್ಪಡೆಗೆ ಸದಸ್ಯ ರಾಷ್ಟ್ರಗಳ ಬೆಂಬಲ

ದೆಹಲಿ ಘೋಷಣೆಯಲ್ಲಿ ಅಂತಿಮ ನಿರ್ಣಯ: ಅಮಿತಾಬ್ ಕಾಂತ್ ಹೊಸಪೇಟೆ: ಭಾರತ ಜಿ-20 ಶೃಂಗ ಸಭೆಯ ಅಧ್ಯಕ್ಷತೆ ವಹಿಸಿಕೊಂಡ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಿ-20 ಸದಸ್ಯ ರಾಷ್ಟ್ರಗಳ ಸಾಲಿಗೆ ಆಫ್ರಿಕನ್ ಯೂನಿಯನ್ ಸಹ ಸೇರ್ಪಡೆಗೊಳಿಸಲು ಮಂಡಿಸಿದ ಪ್ರಸ್ತಾವನೆಗೆ 3ನೇ ಶೆರ್ಪಾ ಸಭೆಯಲ್ಲಿ ಎಲ್ಲಾ ಸದಸ್ಯ ರಾಷ್ಟ್ರಗಳಿಂದ ಸಹಮತದೊಂದಿಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ ಎಂದು ಜಿ-20 ಭಾರತೀಯ ಶೆರ್ಪಾ ಅಮಿತಾಬ್ ಕಾಂತ್ ತಿಳಿಸಿದರು. ಹಂಪಿ ಎವಾಲ್ವೋ ಬ್ಯಾಕ್ ಖಾಸಗಿ ರೆಸಾರ್ಟ್ನಲ್ಲಿ  ಶನಿವಾರ ಮೂರನೇ ದಿನದ ಸಭೆಯ ನಂತರ ಈ …

ಜಿ-20 ರಾಷ್ಟ್ರಗಳ ಗುಂಪಿಗೆ ಆಫ್ರಿಕನ್ ಯೂನಿಯನ್ ಸೇರ್ಪಡೆಗೆ ಸದಸ್ಯ ರಾಷ್ಟ್ರಗಳ ಬೆಂಬಲ Read More »

ಪೌರ ಕಾರ್ಮಿಕರನ್ನು ಖಾಯಂಗೊಳಸಲು  ಪೌರಕಾರ್ಮಿಕರ ಮಹಾ ಸಂಘ ಆಗ್ರಹ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘ ಆಗ್ರಹಿಸಿದೆ.

ರಸ್ತೆ ಅಪಘಾತ: ಮೃತರ ಕುಟುಂಬಗಳಿಗೆ ಚೆಕ್ ವಿತರಿಸಿದ ಸಚಿವ ನಾಗೇಂದ್ರ

ಬಳ್ಳಾರಿ: ಕಳೆದ ತಿಂಗಳು 30ನೇ ತಾರೀಕು ಹೊಸಪೇಟೆಯ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತರಾದ ಬಳ್ಳಾರಿಯ ಕೌಲ್ ಬಜಾರ್ ಮತ್ತು ನಗರ ವ್ಯಾಪ್ತಿಯ ಮೃತರ ಕುಟುಂಬಗಳಿಗೆ ಗುರುವಾರ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಪರಿಹಾರದ ಚೆಕ್ ವಿತರಣೆ ಮಾಡಿದರು.

ಶ್ರಮ ಸಂಸ್ಕೃತಿಗೆ ಅಂತರಾಷ್ಟ್ರೀಯ ಮನ್ನಣೆ ಗಿನ್ನಿಸ್ ಬುಕ್ ದಾಖಲೆಗೆ ಸೇರಿದ ಲಂಬಾಣಿ ಕಸೂತಿ

ವಿವಿಧ ಬಣ್ಣದ ಹಲವು ಸಣ್ಣ ತುಣುಕುಗಳನ್ನು ದಾರದಿಂದ ಹೊಲಿದು ಜೋಡಿಸಿ, ಅದರ ಮೇಲೆ ಕಸೂತಿ ಮಾಡುವ ಲಂಬಾಣಿ ಮಹಿಳೆಯರ ಕಲೆ, ಶ್ರಮ ಸಂಸ್ಕೃತಿಯ ಪ್ರತೀಕ. ಆದಿ ಕಾಲದ ಮಾನವನ ಸುಪ್ತ ಪ್ರಜ್ಞೆಯಲ್ಲಿ ಅರಳಿದ ಕಲೆಗಳು ಇಂದು ತಂತ್ರಜ್ಞಾನದ ಅತ್ಯುನ್ನತ ಮಟ್ಟ ತಲುಪಿವೆ. ತಾಂತ್ರಿಕ ಕಾಲಘಟ್ಟದಲ್ಲೂ ಲಂಬಾಣಿ ಮಹಿಳೆಯರು ಉಳಿಸಿ ಬೆಳಿಸಿಕೊಂಡು ಬಂದ ಕಸೂತಿ ಕಲೆ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ಸೇರುವ ಕ್ಷಣಕ್ಕೆ ಹಂಪಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆ ಸಾಕ್ಷಿಯಾಗಿದೆ.

ಕರ್ನಾಟಕದ ಹಂಪಿಯಲ್ಲಿ ಇಂದು ಆಯೋಜಿಸಲಾದ ಮೂರನೇ ʻಜಿ-20 ಸಂಸ್ಕೃತಿ ಕಾರ್ಯಪಡೆʼ ಸಭೆಯ ಉದ್ಘಾಟನಾ ಸಮಾರಂಭ

ಲಂಬಾಣಿ ಕಸೂತಿ ಪಟ್ಟಿಗಳ ಅತಿದೊಡ್ಡ ಪ್ರದರ್ಶನವನ್ನು ರಚಿಸುವ ಮೂಲಕ ʻಗಿನ್ನಿಸ್ ಬುಕ್ ಆಫ್ ವಲ್ರ್ಡ್ ರೆಕಾರ್ಡ್ʼಗೆ ಪ್ರವೇಶಿಸುವ ಗುರಿಯನ್ನು ʻಸಿಡಬ್ಲ್ಯೂಜಿʼ ಹೊಂದಿದೆ, ಸಂಸ್ಕøತಿಯು ಕೇವಲ ನಮ್ಮ ಅಸ್ಮಿತೆಯ ಒಂದು ಭಾಗವಷ್ಟೇ ಆಗಿರದೆ, ಅದು ಸುಸ್ಥಿರ ಅಭಿವೃದ್ಧಿ, ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಜಾಗತಿಕ ಸಾಮರಸ್ಯಕ್ಕೆ ಪ್ರೇರಕ ಶಕ್ತಿಯೂ ಆಗಿರುವಂತಹ ಭವಿಷ್ಯದತ್ತ ನಾವು ಇಂದು ಕೆಲಸ ಮಾಡೋಣ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ವಿಜಯನಗರದಲ್ಲಿ ದೀಪಾವಳಿ ಸಂಭ್ರಮ

ವಿಜಯನಗರ  :  ಹಿರಿಯರನ್ನು ಪೂಜೆ ಮಾಡೋ ಜಾಗದಲ್ಲಿ ಪುನೀತ್ ರಾಜ್ ಕುಮಾರ್ ಫೋಟೋ ಇಟ್ಟು ಯುವತಿಯರು, ಮಹಿಳೆಯರು ಪೂಜೆ ಸಲ್ಲಿಸಿದರು. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸೀತಾರಾಮ್ ತಾಂಡದಲ್ಲಿ ಫೋಟೋ ಮುಂದೆ ದೀಪ ಬೆಳಗಿ ಪೂಜೆ  ಸಲ್ಲಿಸಿದರೆ, ಇನ್ನೂ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕು ಅಂಕ್ಲಿ ತಾಂಡದಲ್ಲಿ ಪುನೀತ್ ಕಟೌಟ್ ಗೆ ಪೂಜೆ  ಮಾಡಿದ್ದಾರೆ. ಲಂಬಾಣಿ ಸಂಪ್ರದಾಯದಲ್ಲಿ ದೀಪಾವಳಿಯ ಸಮಯದಲ್ಲಿ ಮೇರ ಮತ್ತು ಹಿರಿಯರ ಪೂಜೆ ಹಬ್ಬ ಜೋರು ಮಾಡಲಾಗುತ್ತದೆ. ಈ ಹಿನ್ನಲೆಯಲ್ಲಿ ಪೂಜೆ ಸಲ್ಲಿಸಿ …

ವಿಜಯನಗರದಲ್ಲಿ ದೀಪಾವಳಿ ಸಂಭ್ರಮ Read More »

Translate »
Scroll to Top