ಕುಮಾರಸ್ವಾಮಿಗೆ ಟಾಂಗ್ ನೀಡಿದ ಕಾಂಗ್ರೆಸ್
ಕುಮಾರಸ್ವಾಮಿಗೆ ಟಾಂಗ್ ನೀಡಿದ ಕಾಂಗ್ರೆಸ್ ಬೆಂಗಳೂರು: ಕಾಂಗ್ರೆಸ್ ನ ಉಚಿತ ಗ್ಯಾರಂಟಿ ಯೋಜನೆಗಳ ವಿಚಾರವಾಗಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿಗೆ ರಾಜ್ಯ ಕಾಂಗ್ರೆಸ್ ತಿರುಗೇಟು ನೀಡಿದೆ. ಈ ಸಂಬಂಧ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ನಾವು ಅರ್ಹ ಫಲಾನುಭವಿಗಳಿಗೆ ನಮ್ಮ ಗ್ಯಾರಂಟಿಗಳನ್ನು ಜಾರಿಗೊಳಿಸುವುದು ನಿಶ್ಚಿತ. ಕುಮಾರಸ್ವಾಮಿಯವರೇ, ಆ ಚಿಂತೆ ಬಿಡಿ. ಜೆಡಿಎಸ್ ಪಕ್ಷದ ವಿಸರ್ಜನಾ ಕಾರ್ಯಕ್ರಮದ ಮುಹೂರ್ತ ಯಾವಾಗ ಹೇಳಿ ಎಂದು ಹಂಗಿಸಿದೆ. ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ …