kalyanakarnataka

ಸರ್ದಾರ್ ವಲ್ಲಭಭಾಯಿ ಪಟೇಲ್ ಮೂರ್ತಿಗೆ ಮುಖ್ಯಮಂತ್ರಿಗಳಿಂದ‌ ಮಾಲಾರ್ಪಣೆ

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ-2023 ಅಂಗವಾಗಿ ಶನಿವಾರ ಕಲಬುರಗಿ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮಕ್ಕೂ ಮುನ್ನ ಹೈದ್ರಾಬಾದ್ ಕರ್ನಾಟಕ ವಿಮೋಚನೆಯ ರೂವಾರಿಯಾಗಿರುವ ಉಲ್ಕಿನ ಮನುಷ್ಯ ಸರ್ದಾರ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಗಣಿಗಾರಿಕೆ ನಿಯಮ ಸರಳೀಕರಣಗೊಳಿಸಲು ಪ್ರಿಯಾಂಕ್‌ ಖರ್ಗೆ ಅವರಿಗೆ ಮನವಿ

ಗಣಿಗಾರಿಕೆಗೆ ಸಂಬಂಧಿಸಿದಂತೆ ಕಾನೂನಿನಲ್ಲಿ ಇರುವ ತೊಡಕುಗಳನ್ನು ನಿವಾರಿಸಿ, ನಿಯಮಗಳನ್ನು ಸರಳಿಕರಣ ಮಾಡುವ ಬಗ್ಗೆ ಸಂಬಂಧಿಸಿದ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರುವದಾಗಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು

ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ – ಈಶ್ವರ ಖಂಡ್ರೆ

ಜಿಲ್ಲೆಯ ಆಡಳಿತ ಸುಗಮವಾಗಿ ನಡೆಯಬೇಕು. ಜನರಿಗೆ ಸರ್ಕಾರಿ ಸೌಲಭ್ಯ, ಸೇವೆ ಯಾವುದೇ ಅಡ್ಡಿ ಇಲ್ಲದೆ ದೊರಕಬೇಕು. ತಾವು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸಂಸದ ಭಗವಂತ ಖೂಬಾ ಅವರ ಹೆಸರು ಹೇಳದೆ ತಿರುಗೇಟು ನೀಡಿದ್ದಾರೆ.

ಗ್ರಾಮ ಪಂಚಾಯತಿ ಗ್ರಂಥಪಾಲಕರಿಗೆ ಕನಿಷ್ಠ ವೇತನ ನಿಗದಿ ಪಡಿಸಿ ರಾಜ್ಯ ಸರ್ಕಾರ ಆದೇಶ

ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಮಾಸಿಕ ಕನಿಷ್ಠ ಮೂಲವೇತನ ನಿಗದಿಪಡಿಸಿ, ಅವರ ಮಾಸಿಕ ವೇತನವನ್ನು ಹೆಚ್ಚಿಸಿ ಇಂದು ರಾಜ್ಯ ಸರ್ಕಾರ ಆದೇಶಿಸಿದೆ.

ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪರಿಶೀಲನಾ ಸಭೆ

ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನ ಸಚಿವರಾದ ಶ್ರೀ ಬಿ.ಎಸ್. ಸುರೇಶ(ಬೈರತಿ) ಹಾಗೂ ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಶ್ರೀ ಎನ್. ಎಸ್.ಬೋಸ್ ರಾಜ್ ಅವರ ಸಹಯೋಗದಲ್ಲಿ ದಿನಾಂಕ 6-8-2023 ರಂದು ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಗರದಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಕುರಿತು ಪರಿಶೀಲನಾ ಸಭೆ ನಡೆಸಿದರು.

ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಎಂದಿಗೂ ಮರೆಯುವುದಿಲ್ಲ

ಕಲ್ಬುರ್ಗಿ: ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಎಂದಿಗೂ ಮರೆಯುವುದಿಲ್ಲ. ಈ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

40% ಕಮಿಷನ್ ಸರ್ಕಾರ ಎಂಬುದು ಜಗಜ್ಜಾಹಿರಾತಾಗಿದೆ

ಬೆಂಗಳೂರು : ನಿನ್ನೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಮತ್ತು ಅರುಣ್ ಸಿಂಗ್ ಅವರು ಬೆಂಗಳೂರಿಗೆ ಬಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರವನ್ನು ಹೊಗಳಿದ್ದಾರೆ. ಅರುಣ್ ಸಿಂಗ್ ಅವರು ಬೊಮ್ಮಾಯಿ ಅವರನ್ನು ಜನಸಾಮಾನ್ಯರ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ಇದರರ್ಥ ಈ 40% ಕಮಿಷನ್ ಸರ್ಕಾರದ ಭ್ರಷ್ಟಾಚಾರಕ್ಕೆ ಅಮಿತ್ ಶಾ ಮತ್ತು ಅರುಣ್ ಸಿಂಗ್ ಅವರು ಅಧಿಕೃತ ಒಪ್ಪಿಗೆಯ ಮುದ್ರೆ ಒತ್ತಿದ್ದಾರೆ. ಇದು 40% ಕಮಿಷನ್ ಸರ್ಕಾರ ಎಂಬುದು ಜಗಜ್ಜಾಹಿರಾತಾಗಿದೆ. ಸರ್ಕಾರಿ ಕಾಮಗಾರಿಗಳಿಗೆ 40% …

40% ಕಮಿಷನ್ ಸರ್ಕಾರ ಎಂಬುದು ಜಗಜ್ಜಾಹಿರಾತಾಗಿದೆ Read More »

ರಾಯಚೂರು ಬಂದ್ ಯಶಸ್ವಿ

ರಾಯಚೂರು, ಮಾ, 7 : 371(ಜೆ)ಕಲಂ ಪ್ರಶ್ನಿಸಿ ಅದನ್ನು ರದ್ದುಪಡಿಸುವಂತೆ ನವೋದಯ ಶಿಕ್ಷಣ ಸಂಸ್ಥೆ ಯ ಎಸ.ಆರ್. ರೆಡ್ಡಿ ಹೈಕೊರ್ಟಗೆ ಹೋಗಿದ್ದು ಅದನ್ನು ಹಿಂಪಡೆಯುವಂತೆ ಒತ್ತಾಯಿಸಿ ಕಲ್ಯಾಣ ಕರ್ನಾಟಕ 371(ಜೆ) ಅನುಷ್ಠಾನ ಹೋರಾಟ ಸಮಿತಿ ರಾಯಚೂರು ಬಂದ್ ಗೆ ಕರೆನೀಡಿದ್ದು ಬಂದ್ ಯಶಸ್ವಿ ಯಾಗಿತ್ತು. ರಾಯಚೂರು ಬಂದ್ ಗೆ ಹಲವು ಕನ್ನಡ ಪರ ಸಂಘಟನೆಗಳು, ದಲಿತಪರ ಮತ್ತು ಎಲ್ಲಾ ಪಕ್ಷದ ಮುಂಖಡರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪಕ್ಷಾತೀತವಾಗಿ ಹೋರಾಟಮಾಡುವ ಮುಲಕ ನವೋದ ಶಿಕ್ಷಣ ಸಂಸ್ಥೆ ಗೆ ಎಚ್ಚರಿಕೆ ನೀಡಿದರು. …

ರಾಯಚೂರು ಬಂದ್ ಯಶಸ್ವಿ Read More »

ಬೌದ್ಧ ಅಭಿವೃದ್ಧಿ ಪ್ರಾಧಿಕಾರ ರಚಿಸಲು ಪರಿಷತ್ ಆಗ್ರಹ

ಕೊಪ್ಪಳ,ಮಾ,3 : ಈ ಸಾಲಿನ ಬಜೆಟ್ಟಿನಲ್ಲಿ ಬೌದ್ಧ ಅಭಿವೃದ್ಧಿ ಪ್ರಾಧಿಕಾರವನ್ನು ಸ್ಥಾಪಿಸಿ ಪ್ರಾಧಿಕಾರಕ್ಕೆ ಕನಿಷ್ಠ 200 ಕೋಟಿ ಹಣವನ್ನು ಮೀಸಲಿಡಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಕೊಪ್ಪಳ ಜಿಲ್ಲಾ ದಲಿತ ವಿದ್ಯಾರ್ಥಿ ಪರಿಷತ್ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಲಾಯಿತು. ಗುರುವಾರ ಜಿಲ್ಲಾಧಿಕಾರಿಗಳ ಮೂಲಕ ದಲಿತ ವಿದ್ಯಾರ್ಥಿ ಪರಿಷತ್ ಕೊಪ್ಪಳ ಜಿಲ್ಲಾ ಘಟಕದ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಬೌದ್ಧ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಬಗ್ಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಪರಿಷತ್ತಿನ ಜಿಲ್ಲಾ ಸಂಚಾಲಕರಾದ ಗೌತಮ್ ಬಳಗಾನೂರ, …

ಬೌದ್ಧ ಅಭಿವೃದ್ಧಿ ಪ್ರಾಧಿಕಾರ ರಚಿಸಲು ಪರಿಷತ್ ಆಗ್ರಹ Read More »

ಸರ್ವರಿಗೂ ಸೂರು ಕಲ್ಪಿಸುವ ಗುರಿಯೊಂದಿಗೆ ರಾಜ್ಯದಲ್ಲಿ ವಸತಿ ಕ್ರಾಂತಿ

ಬಳ್ಳಾರಿ,ಮಾ.02 : ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಕಂಪ್ಲಿ ಪಟ್ಟಣದಲ್ಲಿ 32.87 ಕೋಟಿ ರೂ.ವೆಚ್ಚದಲ್ಲಿ 500 ಮನೆಗಳ ನಿರ್ಮಾಣಕ್ಕೆ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಬುಧವಾರ ಭೂಮಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು ಅವರು  ಗುಣಮಟ್ಟದಲ್ಲಿ ಯಾವುದೇ ರೀತಿಯಲ್ಲಿ ರಾಜಿಯಾಗದೆ ನಿಗದಿತ ಸಮಯದಲ್ಲಿ ಈ ಕೆಲಸ ಮುಗಿಸಿ ಜನರಿಗೆ ಮನೆ ಸಿಗುವಂತೆ ಮಾಡಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಬಡವರಿಗೆ ಸೂರು ಒದಗಿಸುವುದು ನಮ್ಮ ಸರ್ಕಾರದ ಪ್ರಮುಖ …

ಸರ್ವರಿಗೂ ಸೂರು ಕಲ್ಪಿಸುವ ಗುರಿಯೊಂದಿಗೆ ರಾಜ್ಯದಲ್ಲಿ ವಸತಿ ಕ್ರಾಂತಿ Read More »

Translate »
Scroll to Top