kalyanakarnataka

ಪಿ.ಎಸ್.ಐ ನೇಮಕಾತಿಗೆ ತಡೆ

ಕಲಬುರಗಿ.ಫೆ.19 : ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಪಿ.ಎಸ್.ಐ. ನೇಮಕಾತಿಯಲ್ಲಿ ಅನ್ಯಾಯವಾಗಿದೆ ಎಂದ ಇಲ್ಲಿನ ಜನಪ್ರತಿನಿಧಗಳ ಒತ್ತಾಯದ ಮೇರೆಗೆ ಪ್ರಸ್ತುತ ನೇಮಕಾತಿಗೆ ತಡೆ ನೀಡಲಾಗಿದ್ದು, ಈ ಕುರಿತು ಅಧ್ಯಯನಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು. ಶನಿವಾರ ಕಲಬುರಗಿಯ ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ ಅತಿಥಿಗೃಹದಲ್ಲಿ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ 371ಜೆ ವಿಶೇಷ ವಿಶೇಷ ಸ್ಥಾನಮಾನದ ಕಾಯ್ದೆ ಮತ್ತು …

ಪಿ.ಎಸ್.ಐ ನೇಮಕಾತಿಗೆ ತಡೆ Read More »

ಕಲಬುರಗಿ ಜಿಲ್ಲಾ ಪ್ರವಾಸದಲ್ಲಿರುವ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ

ಕಲಬುರಗಿ,ಫೆ,19 : ಕಲ್ಯಾಣ ಕರ್ನಾಟಕ ಪ್ರದೇಶದ ಹೃದಯ ಭಾಗ, ಕಲಬುರಗಿ ಜಿಲ್ಲಾ ಪ್ರವಾಸದಲ್ಲಿರುವ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ಕಲಬುರಗಿ ನಗರ ಪೊಲೀಸ್ ಆಯುಕ್ತಾಲಾಯ ನೂತನ ಕಟ್ಟಡ ಕಾಮಗಾರಿ ಯನ್ನು ಪರಿವೀಕ್ಷಣೆ ಮಾಡಿದರು. ಕಟ್ಟಡ ಕಾಮಗಾರಿ ಕೆಲಸ ನಿಧಾನ ಗತಿಯಲ್ಲಿ ನಡೆಯುತ್ತಿದ್ದು, ಹೆಚ್ಚಿನ ವಿಳಂಬ ವಿಲ್ಲದಂತೆ ಕಟ್ಟಡವನ್ನು ಇಲಾಖೆಗೆ ಹಸ್ತಾಂತರ ಮಾಡಬೇಕು ಎಂದು ನಿರ್ದೇಶನ ನೀಡಿದರು. ಬಿಜೆಪಿಯ ಕಲಬುರಗಿ ಉತ್ತರ ಶಾಸಕ ಶ್ರಿ ದತ್ತಾತ್ರೇಯ ಪಾಟೀಲ್ ರೇವೂರ್ ಹಾಗೂ ಕಲಬುರಗಿ ಗ್ರಾಮೀಣ ಶಾಸಕ ಶ್ರಿ …

ಕಲಬುರಗಿ ಜಿಲ್ಲಾ ಪ್ರವಾಸದಲ್ಲಿರುವ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ Read More »

ಬಳ್ಳಾರಿ ಹರಿಶ್ಚಂದ್ರ ಘಾಟ್ ಗೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಭೇಟಿ:ಪರಿಶೀಲನೆ

ಬಳ್ಳಾರಿ, ಫೆ, 19 : ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ನಗರದ ತಾಳೂರು ರಸ್ತೆಯಲ್ಲಿರುವ ಹರಿಶ್ಚಂದ್ರ ಘಾಟ್ ಗೆ ಶನಿವಾರ ಬೆಳಗ್ಗೆ ಭೇಟಿ‌ ನೀಡಿದರು.ಅಲ್ಲಿ ಕೈಗೊಳ್ಳಬೇಕಾದ ಸ್ವಚ್ಛತಾ ಕಾರ್ಯಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳ್ಳಾರಿ ನಗರದಲ್ಲಿರುವ 30 ಸ್ಮಶಾನಗಳಲ್ಲಿ ಈಗಾಗಲೇ 13 ಶವಸಂಸ್ಕಾರ ಸ್ಥಳಗಲ್ಲಿ ವಿದ್ಯುತ್ ದೀಪಗಳು,ರಸ್ತೆ,ಸ್ವಚ್ಛತೆ,ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಇನ್ನೀತರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಇದೇ ರೀತಿ …

ಬಳ್ಳಾರಿ ಹರಿಶ್ಚಂದ್ರ ಘಾಟ್ ಗೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಭೇಟಿ:ಪರಿಶೀಲನೆ Read More »

ವಿವಿಧ ಬೇಡಿಕೆ ಈಡೇರಿಕೆಗೆ ಕಲ್ಯಾಣ ಕರ್ನಾಟಕ ಖಾಸಗಿ ಶಾಲೆಗಳ ಒಕ್ಕೂಟ ಒತ್ತಾಯ

ಕೊಪ್ಪಳ: ಕಲ್ಯಾಣ ಕರ್ನಾಟಕದಲ್ಲಿ 1995ರ ನಂತರ ಪ್ರಾರಂಭಗೊಂಡಿರುವ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ವೇತಾನುದಾನಕ್ಕೆ ಅಳವಡಿಸುವಂತೆ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಕಲ್ಯಾಣ ಕರ್ನಾಟಕ ಕನ್ನಡ ಮಾಧ್ಯಮ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ,ಕೊಪ್ಪಳ ಜಿಲ್ಲಾ ಘಟಕ ಪದಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು. ಮಂಗಳವಾರ ದಂದು ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ ಒಕ್ಕೂಟದ ಪದಾಧಿಕಾರಿಗಳು ಕಲ್ಯಾಣ ಕರ್ನಾಟಕದ ಕನ್ನಡ ಮಾಧ್ಯಮ ಶಿಕ್ಷಣ ಸಂಸ್ಥೆಗಳಿಗೆ ಮೂಲಭೂತ ಸೌಲಭ್ಯಗಳನ್ನು 371ಜೆ ಅಡಿಯಲ್ಲಿ ಒದಗಿಸಬೇಕು. ಈ …

ವಿವಿಧ ಬೇಡಿಕೆ ಈಡೇರಿಕೆಗೆ ಕಲ್ಯಾಣ ಕರ್ನಾಟಕ ಖಾಸಗಿ ಶಾಲೆಗಳ ಒಕ್ಕೂಟ ಒತ್ತಾಯ Read More »

ಹೊಸಪೇಟೆಯಿಂದ ವಾಣಿಜ್ಯ ಮಳಿಗೆಗಳ ಉದ್ಘಾಟನೆ

ಹೊಸಪೇಟೆ,ಫೆ.12: ವಿಜಯನಗರ ಜಿಲ್ಲೆಯ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹೊಸಪೇಟೆ ವಿಭಾಗದ ವತಿಯಿಂದ ಹೊಸಪೇಟೆ ಕೇಂದ್ರ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿರುವ 26 ವಾಣಿಜ್ಯ ಮಳಿಗೆಗಳನ್ನು ಸಾರಿಗೆ,ಪರಿಶಿಷ್ಟ ವರ್ಗಗಳ‌ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಶನಿವಾರ ಸಂಜೆ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಅವರು ಅಪಘಾತ ಮತ್ತು ಅಪರಾಧ ರಹಿತ ಸೇವೆ ಸಲ್ಲಿಸಿದ ಇಬ್ಬರು ಚಿನ್ನ ಪದಕ ವಿಜೇತ ಚಾಲಕರಿಗೆ ಪದಕ ವಿತರಿಸಿ,ಪ್ರಶಸ್ತಿ ಮತ್ತು ಸ್ಮರಣಿಕೆ ನೀಡಿ ಗೌರವಿಸಿದರು. ಸರ್ಕಾರದ ಮೀಸಲಾತಿ ನಿಯಮಾನುಸಾರ ಸದರಿ ಮಳಿಗೆಗಳನ್ನು ಹಂಚಿಕೆ …

ಹೊಸಪೇಟೆಯಿಂದ ವಾಣಿಜ್ಯ ಮಳಿಗೆಗಳ ಉದ್ಘಾಟನೆ Read More »

ಕಲಬುರಗಿಯಲ್ಲಿ ಉದ್ಯೋಗ ಮೇಳ

ಕಲಬುರಗಿ,12 : ಡಿಜಿಟಲ್ ವ್ಯವಹಾರ ಸ್ವರೂಪವು ಆರ್ಥಿಕ ಸಬಲೀಕರಣಕ್ಕೆ ದೊಡ್ಡ ಶಕ್ತಿಯಾಗಿದ್ದು, ಯಾವುದೇ ದೇಶದೊಂದಿಗೆ ವ್ಯಾಪಾರ- ವಹಿವಾಟು ತುಂಬಾ ಸುಲಭವಾಗಿದೆ. ಜತೆಗೆ ಡಿಜಿಟಲ್ ಮಾರುಕಟ್ಟೆ ತರಬೇತಿಯಿಂದ ನೂರಕ್ಕೆ ನೂರರಷ್ಟು ಉದ್ಯೋಗ ಖಾತ್ರಿಯೂ ಸಿಗುತ್ತದೆ ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಇಲ್ಲಿನ ಪಿಡಿಎ ಕಾಲೇಜಿನಲ್ಲಿ ಶನಿವಾರದಂದು ಏರ್ಪಡಿಸಿದ್ದ ಉದ್ಯೋಗ ಮೇಳ’ವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳೊಂದಿಗೆ ವರ್ಚುಯಲ್ ರೂಪದಲ್ಲಿ ಮಾತನಾಡಿದ ಅವರು, ಪದವಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಮಾರುಕಟ್ಟೆ ತರಬೇತಿ ನೀಡುವ ಉದ್ದೇಶದಿಂದನಾಂದಿ’ ಸಂಸ್ಥೆಯೊಂದಿಗೆ ಒಡಂಬಡಿಕೆ …

ಕಲಬುರಗಿಯಲ್ಲಿ ಉದ್ಯೋಗ ಮೇಳ Read More »

ಬಿಜೆಪಿ ಸರಕಾರಗಳಿಂದ ಎಸ್‍ಟಿ ಸಮುದಾಯಕ್ಕಾಗಿ ಉತ್ತಮ ಯೋಜನೆಗಳು

ಬೆಂಗಳೂರು,ಜ,6 : ಬಿಜೆಪಿ ಎಸ್‍ಟಿ ಮೋರ್ಚಾದ ವತಿಯಿಂದ ದಕ್ಷಿಣ ಭಾರತಗಳಾದ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಪರಿಶಿಷ್ಟ ಪಂಗಡದ ರಾಷ್ಟ್ರೀಯ ನೀತಿ ಮತ್ತು ಸಂಶೋಧನಾ ಕಾರ್ಯಾಗಾರವು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಿತು.ಉದ್ಘಾಟನೆ ನೆರವೇರಿಸಿದ ರಾಜ್ಯದ ಸಾರಿಗೆ ಮತ್ತು ಪರಿಶಿಷ್ಟ ಪoಗಡ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಮಾತನಾಡಿ, ಮಾನ್ಯ ಪ್ರಧಾನಿಗಳಾದ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯ ದೃಷ್ಟಿಯಿಂದ …

ಬಿಜೆಪಿ ಸರಕಾರಗಳಿಂದ ಎಸ್‍ಟಿ ಸಮುದಾಯಕ್ಕಾಗಿ ಉತ್ತಮ ಯೋಜನೆಗಳು Read More »

ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಸಿದ್ದರಾಮಯ್ಯ ಅವರ ಮಾತುಗಳು

ಬೆಳಗಾವಿ,ಡಿ,24 : ಸುವರ್ಣ ಸೌಧ ನಿರ್ಮಾಣ ಮಾಡಿದ ಉದ್ದೇಶವೇ ಉತ್ತರ ಕರ್ನಾಟಕ ಭಾಗದ ಜನರಿಗೆ ನ್ಯಾಯ ಒದಗಿಸಬೇಕು ಎಂಬ ಕಾರಣಕ್ಕೆ. ಬಿಜೆಪಿ ಸರ್ಕಾರದ ಅಲಕ್ಷ್ಯ ಧೋರಣೆಯಿಂದಾಗಿ ಇಂದು ಆ ಉದ್ದೇಶದ ಈಡೇರಿಕೆ ಆಗುತ್ತಿಲ್ಲ ಎಂಬುದು ದುರದೃಷ್ಟಕರ. ಉತ್ತರ ಕರ್ನಾಟಕ ಭಾಗದ ವಿಚಾರ ಬಂದಾಗ ಈ ಭಾಗದ ಎಲ್ಲಾ ಶಾಸಕರಿಗೂ ಮಾತನಾಡಬೇಕು ಎಂಬ ಸಹಜ ಆಸೆ ಇರುತ್ತದೆ. ಸರ್ಕಾರ ಸದನವನ್ನು ಇಂದೇ ಮುಗಿಸಬೇಕು ಎಂಬ ಹಠಕ್ಕೆ ಬಿದ್ದಿರುವುದರಿಂದ ಸಾಕಷ್ಟು ಶಾಸಕರಿಗೆ ಅವಕಾಶವೇ ಇಲ್ಲವಾಗಿದೆ. ಎಸ್.ಎಂ ಕೃಷ್ಣ ಅವರು ಮುಖ್ಯಮಂತ್ರಿ …

ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಸಿದ್ದರಾಮಯ್ಯ ಅವರ ಮಾತುಗಳು Read More »

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ 3ಸಾವಿರ ವಿಶೇಷ ಅನುದಾನ‌ ನೀಡಿಕೆಗೆ ಬದ್ಧ:ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ

ಬಳ್ಳಾರಿ : ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಈಗ ನೀಡಲಾಗುತ್ತಿರುವ 1500 ಕೋಟಿ ರೂ.ಖರ್ಚನ್ನು ನಿಗದಿಪಡಿಸಿದ ಅವಧಿಯೊಳಗೆ ಸಮರ್ಪಕ ಖರ್ಚು ಮಾಡಿದಲ್ಲಿ 3 ಸಾವಿರ ಕೋಟಿ ರೂ. ವಿಶೇಷ ಅನುದಾನವನ್ನು ಇದೇ ವರ್ಷದಿಂದ ಒದಗಿಸುವುದಕ್ಕೆ ನಮ್ಮ ಸರಕಾರ ‌ಬದ್ಧವಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನಮ್ಮ ಸರಕಾರ ನೀಡುತ್ತಿದೆ ಎಂದು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಆರ್.ವೈ.ಎಂ.ಇ.ಸಿ ಕಾಲೇಜು ಆವರಣದಲ್ಲಿರುವ ಎಸ್.ಕೆ.ಮೋದಿ ನ್ಯಾಷನಲ್ ಸ್ಕೂಲ್ ,ವಿವಿ ಸಂಘದ‌ ಕಿಂಡರ್ ಗಾರ್ಡನ್ ನೂತನ ಕಟ್ಟಡಗಳನ್ನು …

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ 3ಸಾವಿರ ವಿಶೇಷ ಅನುದಾನ‌ ನೀಡಿಕೆಗೆ ಬದ್ಧ:ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ Read More »

Translate »
Scroll to Top