kannada

ನೇರ- ನಿಷ್ಠುರ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ

ಮೈಸೂರಿನ ಕೆಲವು ಪತ್ರಿಕೆಗಳಲ್ಲಿ ಸ್ವಲ್ಪ ಸಮಯ ಕೆಲಸ ಮಾಡಿದ ಬಳಿಕ ಖಾಸಗಿ ಪತ್ರಿಕೆಯಲ್ಲಿ ಕೆಲಸ ಸಿಕ್ಕಿತು. ಆದರೆ, ಹುಬ್ಬಳ್ಳಿಗೆ ಕಳುಹಿಸಲಾಯಿತು. ಅಲ್ಲಿ ಯಾರ ಪರಿಚಯವೂ ಇರಲಿಲ್ಲ. ಉತ್ತರ ಕರ್ನಾಟಕದ ಭಾಷಾ ಸೊಗಡಿನ ಅರಿವಿರಲಿಲ್ಲ. ಜೋಳದ ರೊಟ್ಟಿ ತಿಂದು ಅಭ್ಯಾಸ ಇರಲಿಲ್ಲ. ಹೊಸ ಊರು.. ಹೊಸ ಜನ… ಅಂಜುತ್ತಾ, ಅಳುಕುತ್ತಲೇ ಹೋದೆ. ದಿನ ಕಳೆದಂತೆ ಅಹಿರಾಜ್ ಸಂಪರ್ಕಕ್ಕೆ ಬಂದ. ಆತ ʻ ಖಾಸಗಿ ಪತ್ರಿಕೆಯ ಅರೆಕಾಲಿಕ ವರದಿಗಾರನಾಗಿದ್ದ. ಖಾಸಗಿ ಪತ್ರಿಕೆ ವಿಶೇಷ ಪ್ರತಿನಿಧಿಯಾಗಿದ್ದ ಮತ್ತಿಹಳ್ಳಿ ಮದನ ಮೋಹನ್ ಅವರನ್ನು ಪತ್ರಿಕಾ ಗೋಷ್ಠಿಗಳಲ್ಲಿ ನೋಡಿದ್ದೆ. ಮದನ್ ಮೋಹನ್, ಖಾಸಗಿ ವರದಿಗಾರರಾಗಿದ್ದ ಎಚ್.ಜಿ. ಬೆಳಗಾಂವಕರ, ಅಹಿರಾಜ್ ಅವರದ್ದು ಒಂದು ಗುಂಪು. ಪತ್ರಕರ್ತ ಮಿತ್ರ ಗೋವಿಂದ ಬೆಳಗಾಂವಕರ ಅವರು ತಯಾರಾಗಿದ್ದೇ ಈ ಗರಡಿಯಲ್ಲಿ. ಕಷ್ಟಪಟ್ಟು ಕೆಲಸ ಮಾಡುತ್ತಿದ್ದ ನನಗೂ ಮದನ್ ಮೋಹನ್ ಗುಂಪಿಗೆ ಎಂಟ್ರಿ ಸಿಕ್ಕಿತು.

ಭಾಷಾ ಅಲ್ಫಾಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಷರತ್ತು ಸಡಿಲಿಸಲು ಪ್ರಸ್ತಾವನೆ

ಬೆಂಗಳೂರು: ಧಾರ್ಮಿಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಗಳಿಗೆ ವಿಧಿಸಿರುವ ಮಾನದಂಡವನ್ನೇ ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಗಳಿಗೆ ಅನ್ವಯ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ನೇತೃತ್ವದ ನಿಯೋಗ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಮನವಿ ಸಲ್ಲಿಸಿದೆ.

ನೈಸರ್ಗಿಕ ಸಂಪತ್ತಿನ ಹಿತಮಿತ ಬಳಕೆ ಇಂದಿನ ಆಗತ್ಯ: ಈಶ್ವರ ಖಂಡ್ರೆ

ಮೈಸೂರು: ಪ್ರಕೃತಿ ಪರಿಸರ ಉಳಿದರೆ ಮಾತ್ರ ಮಾನವ ಕುಲ ಉಳಿಯಲು ಸಾಧ್ಯ. ಈ ನಿಟ್ಟನಲ್ಲಿ ನೈಸರ್ಗಿಕ ಸಂಪನ್ಮೂಲದ ಹಿತಮಿತ ಬಳಕೆ ಇಂದಿನ ಅಗತ್ಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಪಾದಿಸಿದ್ದಾರೆ.

ಪೋಕ್ಸೋ ಪ್ರಕರಣದಲ್ಲಿ ಬಿಎಸ್​ ಯಡಿಯೂರಪ್ಪಗೆ ಬಿಗ್​ ರಿಲೀಫ್​: ಬಂಧಿಸದಂತೆ ಹೈಕೋರ್ಟ್ ‍ಆದೇಶ

ಬೆಂಗಳೂರು: ತಮ್ಮ ವಿರುದ್ಧದ ಪೊಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಜೂ. ೧೭ರಂದು ಹಾಜರಾಗುವುದಾಗಿ ಬಿ.ಎಸ್ ಯಡಿಯೂರಪ್ಪ ಉತ್ತರಿಸಿದ್ದಾರೆ. ಅವರಿಗೆ ವಯಸ್ಸಾಗಿದ್ದು ಸಹಜವಾಗಿಯೇ ಅನಾರೋಗ್ಯ ಸಮಸ್ಯೆಗಳಿರುತ್ತವೆ. ಹೀಗಾಗಿ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.

ಗೃಹ ಸಚಿವ ಪರಮೇಶ್ವರ್ ರಿಂದ ಹಸಿರು ಗ್ರಾಮ ಕಾರ್ಯಕ್ರಮಕ್ಕೆ ಚಾಲನೆ

ಬೆಂಗಳೂರು: ತಾಲೂಕಿನ ಹುಲಿಕುಂಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೌರಗನಹಳ್ಳಿ ಗ್ರಾಮದ ರಂಗನಾಥ ಸ್ವಾಮಿ ಬೆಟ್ಟದಲ್ಲಿ, 600 ಕ್ಕೂ ಹೆಚ್ಚು ಸಸಿಗಳ ನೆಡುವ ಕಾರ್ಯಕ್ರಮಕ್ಕೆ ಗಿಡ ನೆಡುವ ಮುಖೇನ ಕಾರ್ಯಕ್ರಮಕ್ಕೆ ಗೃಹ ಸಚಿವ ಪರಮೇಶ್ವರ್ ರಿಂದ ಉದ್ಘಾಟಿಸಿದರು.

ಎಲೆರಾಂಪುರ ಶ್ರೀ ಮಠಕ್ಕೆ ಭೇಟಿ, ಶ್ರೀಗಳ ಆಶೀರ್ವಾದ ಪಡೆದ ಕೇಂದ್ರ ಸಚಿವ ವಿ ಸೋಮಣ್ಣ

ಬೆಂಗಳೂರು: ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ತುಮಕೂರು ಜಿಲ್ಲೆಗೆ ಆಗಮಿಸಿದ ಜಲ ಶಕ್ತಿ ಮತ್ತು ರೈಲ್ವೆ ಸಚಿವ ವಿ ಸೋಮಣ್ಣ.

KKRDB ಸಭೆ -ಕ್ರಿಯಾ ಯೋಜನೆ ಕೂಡಲೇ ಸಿದ್ಧ ಪಡಿಸಲು ಸಿಎಂ ಸೂಚನೆ

ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ ಆಯವ್ಯಯದಲ್ಲಿ ವರ್ಷಕ್ಕೆ 5,000 ಕೋಟಿ ರೂ. ಒದಗಿಸುವ ಭರವಸೆ ನೀಡಲಾಗಿದೆ. ಈ ಮೊತ್ತವನ್ನು ವೆಚ್ಚ ಮಾಡಲು ಅನುವಾಗುವಂತೆ ಜುಲೈ 15 ರೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು.

ಶಾಲಾ ಮಕ್ಕಳಿಂದ 2 ಲಕ್ಷ ಗಿಡ ನೆಡುವ ಹಸಿರು ರಕ್ಷಕ ಅಭಿಯಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಳೆದ ವರ್ಷ 52 ಸಾವಿರ ಗಿಡಗಳನ್ನು ಶಾಲಾ ಮಕ್ಕಳೇ ನೆಟ್ಟು ಬೆಳೆಸಿದ್ದಾರೆ. ಈ ವರ್ಷ ಅನೇಕ ಶಾಲೆಗಳ ಜೊತೆ ಒಪ್ಪಂದ ಮಾಡಿಕೊಂಡು 2 ಲಕ್ಷಕ್ಕೂ ಹೆಚ್ಚು ಗಿಡಗಳನ್ನು ನೆಡುವ ಹಸಿರು ರಕ್ಷಕ ಕಾರ್ಯಕ್ರಮ ರೂಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಬಳ್ಳಾರಿ ಮಾಡ್ಯೂಲ್ ಕೇಸ್: ದೇಶದ ಪ್ರತಿ ಜಿಲ್ಲೆಗೂ ಉಗ್ರರ ನೇಮಿಸಲು ಸಂಚು; ಸ್ಫೋಟಕ ಮಾಹಿತಿ ಬಹಿರಂಗ!

ಬೆಂಗಳೂರು: ದೇಶದಲ್ಲಿ ಇಸಿಸ್ ಕಾರ್ಯಚಟುವಟಿಕೆಗಳಿಗೆ ಸಿದ್ಧತೆ ನಡೆಸುತ್ತಿದ್ದ ಬಳ್ಳಾರಿ ಮಾಡ್ಯೂಲ್ ಪ್ರಕರಣದ ೭ ಮಂದಿ ಶಂಕಿತರ ವಿರುದ್ಧ ಎನ್ಐಎ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.

ಬಿಎಸ್​ ಯಡಿಯೂರಪ್ಪ ಪೋಕ್ಸೋ ಕೇಸ್​: ಆಡಳಿತದ ದುರುಪಯೋಗ, ರಾಜಕೀಯ ವೈಶಮ್ಯ ಎಂದ ಜೋಶಿ

ಬೆಂಗಳೂರು: ಪೊಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಿದ್ದನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಂಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ ರ್ಕಾ ರ ಆಡಳಿತವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಇದು ರಾಜಕೀಯ ವೈಶಮ್ಯ ಎಂದು ಕಿಡಿಕಾರಿದ್ದಾರೆ.

Translate »
Scroll to Top