ಕುಸಿದು ಬಿದ್ದ ₹1,700 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಸೇತುವೆ!
ಪಾಟ್ನಾ: ಬರೋಬ್ಬರಿ 1,700 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದ ಸೇತುವೆಯೊಂದು ಕುಸಿದು ಬಿದ್ದಿರುವ ಘಟನೆ ಬಿಹಾರದಲ್ಲಿ ನಡೆದಿದೆ.
ಪಾಟ್ನಾ: ಬರೋಬ್ಬರಿ 1,700 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದ ಸೇತುವೆಯೊಂದು ಕುಸಿದು ಬಿದ್ದಿರುವ ಘಟನೆ ಬಿಹಾರದಲ್ಲಿ ನಡೆದಿದೆ.
ಕೋಲಾರ: ಮೆಡಿಕಲ್ ವಿದ್ಯಾರ್ಥಿನಿಯೋರ್ವಳು ಕಲ್ಲು ಕ್ವಾರಿಯಲ್ಲಿನ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದ ಬಳಿ ನಡೆದಿದೆ.
ಬಳ್ಳಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನಗೆ ಯುವಜನ ಸೇವೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಖಾತೆ ನೀಡಿದ್ದಾರೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಅಡಿ ಉತ್ತಮ ಕಾರ್ಯ ನಿರ್ವಹಿಸುವ ಗುರಿ ಹೊಂದಿದ್ದೇನೆ ಎಂದು ಸಚಿವ ನಾಗೇಂದ್ರ ಹೇಳಿದರು. ಅವರು ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮತ್ತು ಅರಣ್ಯ ಪರಿಸರದಲ್ಲಿ ವಾಸ ಮಾಡುವ ಪರಿಶಿಷ್ಟ ಪಂಗಡಗಳ ಜನರಿಗೆ ಉತ್ತಮ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದ ಅವರು, ಯೋಜನೆಗಳು ಪಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ …
ಬಳ್ಳಾರಿ : ಮೈಸೂರು ಸಮೀಪ ಟಿ.ನರಸೀಪುರದ ಕುರುಬೂರು ಬಳಿ (ಮೇ.29) ಭೀಕರ ರಸ್ತೆ ಅಪಘಾತದಲ್ಲಿ ಮೃತರಾಗಿದ್ದ ಬಳ್ಳಾರಿ ಜಿಲ್ಲೆ ಸಂಗನಕಲ್ಲು ಗ್ರಾಮದ ಮೃತರ ಕುಟುಂಬಸ್ಥರಿಗೆ ಭಾನುವಾರ ಸಂಜೆ ಸಚಿವ ಬಿ.ನಾಗೇಂದ್ರ ಅವರು ಪರಿಹಾರದ ಚೆಕ್ ವಿತರಣೆ ಮಾಡಿದರು. ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದಂತೆ ಸಿಎಂ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಗಳ ಚೆಕ್ ವಿತರಿಸಲಾಯಿತು.
ಬೆಂಗಳೂರು: ನಗರದ ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿ ನಂತರ ಆಕೆ ಮಾತೆ ಆಡುತ್ತಿಲ್ಲ ಎಂದು ಗೋಳಾಡಿ ಹೈಡ್ರಾಮ ಮಾಡಿದ್ದು ನಂತರ ಪೊಲೀಸರ ಬಳಿ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ.
ಬಳ್ಳಾರಿ ನಗರದಲ್ಲಿ 12 ಲಕ್ಷ ಮರ ನೆಡಲು ಸಂಕಲ್ಪ
ಬಳ್ಳಾರಿ: ಬೇಸಿಗೆಯಲ್ಲಿ ಅತಿಯಾದ ತಾಪಮಾನದಿಂದ ಬಳ್ಳಾರಿ ನಗರ ವಾಸಿಗಳು ಪ್ರತಿ ವರ್ಷ ಸಮಸ್ಯೆ ಎದುರಿಸುತ್ತಿದ್ದಾರೆ. ನಗರದ ತಾಪಮಾನವನ್ನು ನಿಯಂತ್ರಿಸಲು ಹಸಿರೀಕರಣ ಮಾಡುವ ಉದ್ಧೇಶದಿಂದ ನಗರ ವ್ಯಾಪ್ತಿಯಲ್ಲಿ 12 ಲಕ್ಷ ಮರಗಳನ್ನು ನೆಡುವ ಯೋಜನೆ ಕುರಿತು ಕಾಂಗ್ರೆಸ್ ಮುಖಂಡ ನಾರಾ ಶರತ್ ರೆಡ್ಡಿ ಅವರು ಅರಣ್ಯ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ಮಾತನಾಡಿದರು.
ಮುಂಬೈ, : ದೇಶದ ಕೃಷಿ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡುತ್ತಿರುವ ಸ್ವರಾಜ್ ಸಂಸ್ಥೆ ಇದೀಗ ಅತ್ಯಾಧುನಿಕ ತಂತ್ರಜ್ಞಾನದ, ಸುಗಮ ಮತ್ತು ಆರಾಮದಾಯಕ ಚಾಲನೆ, ವಿಶ್ವಾಸಾರ್ಹತೆಯೊಂದಿಗೆ ದೀರ್ಘಕಾಲ ಬಾಳಿಕೆ ಬರುವ, ಹಗುರ ಮತ್ತು ಹೆಚ್ಚು ಶಕ್ತಿಶಾಲಿಯಾದ “ಸ್ವರಾಜ್ ಟಾರ್ಗೆಟ್” ಟ್ರ್ಯಾಕ್ಟರ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಗ್ರಾಮೀಣ ಕೃಷಿ ಕ್ಷೇತ್ರದ ಅಗತ್ಯತೆಗಳನ್ನು ಮನಗಂಡು ಹೊಸ ತಲೆಮಾರಿನ ಟ್ರ್ಯಾಕ್ಟರ್ ಅನ್ನು ಸ್ವರಾಜ್ ಸಂಸ್ಥೆ ಕೃಷಿ ವಲಯಕ್ಕೆ ನೀಡಿದೆ.
ಬೆಂಗಳೂರು: ರಾಜ್ಯಾದ್ಯಂತ ಎಲ್ಲರಿಗೂ 200 ಯೂನಿಟ್ ವರೆಗೆ ಉಚಿತ ವಿದ್ಯುತ್,ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ,ಕುಟುಂಬದ ಯಜಮಾನಿಗೆ ಎರಡು ಸಾವಿರ ರೂಪಾಯಿ ನೀಡುವುದು,ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ತಲಾ ಹತ್ತು ಕೆಜಿ ಅಕ್ಕಿ ಸೇರಿದಂತೆ ಚುನಾವಣೆಗೂ ಮುನ್ನ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು,ಆ ಮೂಲಕ ಇಡೀ ದೇಶವೇ ನಿಬ್ಬೆರಗಾಗುವಂತೆ ಮಾಡಿದೆ.
ಬೆಂಗಳೂರು: ಸರಕಾರಕ್ಕೆ ಕೇಸರಿ ಎಂದರೆ ದ್ವೇಷ, ಶತ್ರುಭಾವ! ಇಂದು ನಡೆದಾಡುವ ದೇವರು, ಕಾಯಕಯೋಗಿ, ತ್ರಿವಿಧದಾಸೋಹಿ ಪರಮ ಪೂಜ್ಯನೀಯ ಡಾ।। ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ವಿಧಾನಸೌಧದ ಕೊಠಡಿಯಿಂದ ತೆರವುಗೊಳಿಸಿ ಪಡಸಾಲೆಯಲ್ಲಿ ಉರುಳಾಡುವಂತೆ ಮಾಡಿ ಅಪಮಾನಿಸಿರುವುದು ಅಕ್ಷಮ್ಯ ಅಪರಾಧ! ಎಂದು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಿಎಂ ಸಿದ್ದರಾಮಯ್ಯನವರ ನಡವಳಿಕೆಗೆ ಟೀಕೆ ಬಿಜೆಪಿ ಟೀಕೆ ಮಾಡಿದೆ.
ಬೆಂಗಳೂರು : ಐದು ಗ್ಯಾರಂಟಿ ಯೋಜನೆಗಳನ್ನು ಗ್ಯಾರಂಟಿಯಾಗಿ ಕೊಟ್ಟೆ ಕೊಡುತ್ತೇವೆ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಸ್ಪಷ್ಟಪಡಿಸಿದ್ದಾರೆ.