kannadanadunews

‘ಅಹಂಕಾರದ ಪರಮಾವಧಿ’: ಸರ್ಕಾರಕ್ಕೆ ಬಿಜೆಪಿ ಟೀಕೆ

ಬೆಂಗಳೂರು: ಸರಕಾರಕ್ಕೆ ಕೇಸರಿ ಎಂದರೆ ದ್ವೇಷ, ಶತ್ರುಭಾವ! ಇಂದು ನಡೆದಾಡುವ ದೇವರು, ಕಾಯಕಯೋಗಿ, ತ್ರಿವಿಧದಾಸೋಹಿ ಪರಮ ಪೂಜ್ಯನೀಯ ಡಾ।। ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ವಿಧಾನಸೌಧದ ಕೊಠಡಿಯಿಂದ ತೆರವುಗೊಳಿಸಿ ಪಡಸಾಲೆಯಲ್ಲಿ ಉರುಳಾಡುವಂತೆ ಮಾಡಿ ಅಪಮಾನಿಸಿರುವುದು ಅಕ್ಷಮ್ಯ ಅಪರಾಧ! ಎಂದು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಿಎಂ ಸಿದ್ದರಾಮಯ್ಯನವರ ನಡವಳಿಕೆಗೆ ಟೀಕೆ ಬಿಜೆಪಿ ಟೀಕೆ ಮಾಡಿದೆ.

ಗ್ಯಾರೆಂಟಿಗಳ ಜಾರಿ ಹಿನ್ನೆಲೆ ಇಂದು ಸಚಿವ ಸಂಪುಟ ಸಭೆ

ಬೆಂಗಳೂರು: ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಂಬಂಧ ಶುಭ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನೇತೃತ್ವದಲ್ಲಿ ಮಹತ್ವದ ಸಂಪುಟ ಸಭೆ ನಡೆಯಲಿದೆ.

ಸಿಎಂ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಬೆಂಗಳೂರು: ಕಾಂಗ್ರೆಸ್ನ ಚುನಾವಣಾ ಚಾಣಾಕ್ಷ, ಬಳ್ಳಾರಿ ಮೂಲದ ಸುನೀಲ್ ಕನುಗೋಳು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಖ್ಯ ಸಲಹೆಗಾರರಾಗಿ ನೇಮಕ ಮಾಡಲಾಗಿದೆ.

ಜಾತಿನಿಂದನೆ ಪ್ರಕರಣ: ಬಿಜೆಪಿ ಶಾಸಕ ಬಿಪಿ ಹರೀಶ್​ಗೆ ನಿರೀಕ್ಷಣಾ ಜಾಮೀನು ಮಂಜೂರು

ದಾವಣಗೆರೆ: ಜಾತಿ ನಿಂದನೆ ಪ್ರಕರಣ ಎದುರಿಸುತ್ತಿದ್ದ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಅವರಿಗೆ ದಾವಣಗೆರೆಯ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.

ವಸತಿ ಹಾಗೂ ವಕ್ಫ್ ಖಾತೆ ಸಿಕ್ಕಿರುವುದು ಖುಷಿ ತಂದಿದೆ: ಜಮೀರ್ ಅಹಮ್ಮದ್

ತುಮಕೂರು: ಮುಖ್ಯಮಂತ್ರಿ ನನಗೆ ನೀಡಿರುವ ಖಾತೆಯಲ್ಲಿ ಬಡವರ ಸೇವೆ ಮಾಡಲು ಅವಕಾಶ ಇದೆ. ಹಾಗಾಗಿ ಈ ಖಾತೆ ಸಿಕ್ಕಿರುವುದು ನನಗೆ ಖುಷಿ ತಂದಿದೆ ಎಂದು ನೂತನ ವಸತಿ ಹಾಗೂ ವಕ್ಫ್ ಖಾತೆ ಸಚಿವ ಜಮೀರ್ ಅಹಮದ್ ಖಾನ್ ಇಂದಿಲ್ಲಿ ತಿಳಿಸಿದರು.

ರಾಜ್ಯದ ಎಲ್ಲಾ ಮಹಿಳೆಯರಿಗೂ ಬಸ್ ಪ್ರಯಾಣ ಉಚಿತ

ಬೆಂಗಳೂರು: ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ಸುಗಳಲ್ಲಿ ಸರ್ಕಾರ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಿದ್ದು, ಯಾವುದೇ ಷರತ್ತು ವಿಧಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಸಾಧ್ಯವಾದಷ್ಟು ಬೇಗ 5 ಗ್ಯಾರೆಂಟಿಗಳು ಜಾರಿ: ಈಶ್ವರ ಖಂಡ್ರೆ

ತುಮಕೂರು: ಕಾಂಗ್ರೆಸ್ ಪಕ್ಷ ನೀಡಿರುವ ೫ ಗ್ಯಾರಂಟಿಗಳ ಜಾರಿಯಲ್ಲಿ ಯಾವುದೇ ಗೊಂದಲವಿಲ್ಲ. ತಕ್ಷಣವೇ ಜಾರಿ ಮಾಡುವಂತೆ ಈಗಾಗಲೇ ಸೂಚನೆ ಕೊಡಲಾಗಿದೆ. ಆದಷ್ಟು ಬೇಗ ಭರವಸೆಗಳನ್ನು ಈಡೇರಿರಲಿವೆ ಎಂದು ನೂತನ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಇಂದಿಲ್ಲಿ ತಿಳಿಸಿದರು.

ತಾಂತ್ರಿಕ ದೋಷ: ತರಬೇತಿ ವಿಮಾನ ತುರ್ತು ಭೂಸ್ಪರ್ಶ

ಬೆಳಗಾವಿ: ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ತರಬೇತಿ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಜಿಲ್ಲೆಯ ಹೊರವಲಯದ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

Translate »
Scroll to Top