Kannadanews

ಹತ್ತು ಸಾವಿರ ವರ್ಷದ ಹಳೆಯ ತ್ರಿಶೂಲ, 3 ಸಾವಿರ ವರ್ಷದ ವಜ್ರಾಯುಧ ಮೊದಲ ಬಾರಿಗೆ ಭಾರತೀಯರ ಮುಂದೆ ಅನಾವರಣ

ಬೆಂಗಳೂರು: ಸಾವಿರ ವರ್ಷಗಳ ಹಳೆಯದಾದ ಶಿವನ ತ್ರಿಶೂಲ ಮತ್ತು 3 ಸಾವಿರ ವರ್ಷಗಳ ಪುರಾತನ ಇಂಧ್ರನ ವಜ್ರಾ [ವಜ್ರಾಯುಧ] ಪತ್ತೆಯಾಗಿದೆ. ಫಿಲಿಫೈನ್ಸ್ ದೇಶದಲ್ಲಿ 2015 ರಲ್ಲಿ ಗಣಿಗಾರಿಕೆ ಮಾಡುವಾಗ ಭೂ ಗರ್ಭದಲ್ಲಿ ಐತಿಹಾಸಿಕ, ಸಾಂಸ್ಕತಿಕ ಮತ್ತು ಕಲಾತ್ಮಕ ಮೌಲ್ಯವುಳ್ಳ ಅತ್ಯಂತ ಅಪರೂಪದ, ಅಮೂಲ್ಯ ಮತ್ತು ಭಾರತೀಯ ಪರಂಪರೆಯ ಈ ವಸ್ತುಗಳು ಗಣಿ ಉದ್ಯಮಿ, ಸಂಶೋಧಕ ಸಯ್ಯದ್ ಸಮೀರ್ ಹುಸೇನ್ ಅವರಿಗೆ ದೊರೆತಿದ್ದು, ಇವು ದೈವಿಕ ಸ್ವರೂಪದ ಮೌಲ್ಯಗಳನ್ನು ಒಳಗೊಂಡಿವೆ.

ಸುಳ್ಳು ಪ್ರಚಾರದಲ್ಲಿ ಬಿಜೆಪಿಗರು ನಿಸ್ಸೀಮರು: ಸಚಿವ ಬಿ.ನಾಗೇಂದ್ರ

ಬೆಂಗಳೂರು : ಸುಳ್ಳು ಪ್ರಚಾರ ಮಾಡುವುದರಲ್ಲಿ, ಸಣ್ಣದನ್ನು ದೊಡ್ಡದಾಗಿ ಬಿಂಬಿಸುವುದರಲ್ಲಿ ಬಿಜೆಪಿಗರು ನಿಸ್ಸೀಮರು ಎಂದು ಯುವಜನ ಸೇವೆ ಕ್ರೀಡೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿದ್ದಾರೆ.

ಗ್ಯಾರೆಂಟಿ ಜಾರಿ ಮಾಡಿ ನುಡಿದಂತೆ ನಡೆದ ಕಾಂಗ್ರೆಸ್-ಉಗ್ರಪ್ಪ

ಬಳ್ಳಾರಿ : ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವ ನೀಡಿದ ಭರವಸೆಯಂತೆ, ಅಧಿಕಾರಕ್ಕೆ ಬಂದ ಕೂಡಲೇ ಮೊಟ್ಟಮೊದಲ ಸಚಿವ ಸಂಪುಟ ಸಭೆಯಲ್ಲಿಯೇ 5 ಗ್ಯಾರೆಂಟಿಗಳ ಈಡೇರಿಕೆಗೆ ಒಪ್ಪಿಗೆ ನೀಡಿ, ಅದರಂತೆಯೇ ಅವುಗಳ ಜಾರಿಗೆ ಕಾಂಗ್ರೆಸ್ ಸರ್ಕಾರ ಕ್ರಮ ಕೈಗೊಂಡಿದ್ದು, ನುಡಿದಂತೆಯೇ ನಡೆದು ತೋರಿಸಲಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರೂ ಆಗಿರುವ ಹಿರಿಯ ಕಾಂಗ್ರೆಸ್ ಧುರೀಣ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.

ರೈಲ್ವೆ ಸಚಿವರ ರಾಜೀನಾಮೆಗೆ ಆಗ್ರಹಿಸುವುದು ಸರಿಯಲ್ಲ: ಹೆಚ್‌ಡಿಡಿ

ಬೆಂಗಳೂರು: ಒಡಿಶಾ ತ್ರಿವಳಿ ರೈಲು ದುರಂತ ಸಂಭವಿಸಿದ ಬಳಿಕ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ದಣಿವರಿಯದಂತೆ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಹೇಳಿದ್ದಾರೆ.

ಗೃಹ ಜ್ಯೋತಿ ಯೋಜನೆಯ ಮಾರ್ಗಸೂಚಿಗಳು ಬಿಡುಗಡೆ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಈಗಾಗಲೇ ಅನುಮೋದನೆ ನೀಡಿರುವ ರಾಜ್ಯ ಸರ್ಕಾರ, ಇದೀಗ ಯೋಜನೆಗೆ ಸಂಬಂಧಿಸಿದ ಷರತ್ತು ಹಾಗೂ ನಿಬಂಧನೆಗಳ ಕುರಿತ ಮಾರ್ಗಸೂಚಿಯನ್ನು ಹೊರಡಿಸಿದೆ.

ಬಿಹಾರದಲ್ಲಿ ಸೇತುವೆ ಕುಸಿತ: ವಿನ್ಯಾಸದಲ್ಲಿಯೇ ದೋಷ ಎಂದ ಸಿಎಂ ನಿತೀಶ್ ಕುಮಾರ್

ಪಾಟ್ನಾ : ಗಂಗಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದ್ದು, ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇತುವೆ ವಿನ್ಯಾಸವೇ ದೋಷಪೂರಿತವಾಗಿತ್ತು ಎಂದು ಹೇಳಿದ್ದಾರೆ.

ಬಳ್ಳಾರಿಯ ಪ್ರಗತಿಗೆ ಶಕ್ತಿ ಮೀರಿ ಶ್ರಮಿಸುತ್ತೇವೆ ಎಂದ ಸಚಿವ ನಾಗೇಂದ್ರ

ಬಳ್ಳಾರಿ : ಬಳ್ಳಾರಿ ನಗರದ ಸರ್ವತೋಮುಖ ಅಭಿವೃದ್ಧಿಗೆ ನಾವೆಲ್ಲರೂ ಒಗ್ಗೂಡಿ ಶ್ರಮಿಸುತ್ತೇವೆ ಬಳ್ಳಾರಿ ಮೇಯರ್ ತ್ರಿವೇಣಿಯವರು ದೇಶದಲ್ಲಿಯೇ ಅತ್ಯಂತ ಕಿರಿಯ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಂತೆಯೇ ಬಳ್ಳಾರಿ ನಗರ ಶಾಸಕ ಭರತ್‌ರೆಡ್ಡಿಯವರು ಕೂಡಾ ಯುವಕರಾಗಿದ್ದು, ನಾನು ಮತ್ತು ಸಂಸದ ಡಾ||ಸೈಯದ್ ನಾಸಿರ್ ಹುಸೇನ್ ಎಲ್ಲರೂ ಸೇರಿ ಬಳ್ಳಾರಿಯ ಪ್ರಗತಿಗೆ ಶಕ್ತಿಮೀರಿ ಶ್ರಮಿಸುವುದಾಗಿ ರಾಜ್ಯದ ಯುವಜನ ಸಬಲೀಕರಣ, ಕ್ರೀಡಾ ಸಚಿವ ಬಿ.ನಾಗೇಂದ್ರ ತಿಳಿಸಿದ್ದಾರೆ.

ಅಧಿಕಾರಿಗಳು ಕಾಮಗಾರಿಗಳ ಪರಿಶೀಲನೆ ನಡೆಸುವ ಮೂಲಕ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ

ರಾಯಚೂರು: ಕೃಷಿ ಇಲಾಖೆ, ನೀರಾವರಿ ಇಲಾಖೆ ಮತ್ತು ಜೆಸ್ಕಾಂ ಇಲಾಖೆಗಳು ಸರಿಯಾದ ರೀತಿಯಲ್ಲಿ ಮತ್ತು ಜವಾಬ್ದಾರಿಯುತವಾಗಿ ಕಾರ್ಯನಿರ್ವ ಹಿಸದಾಗ ಮಾತ್ರ ಜಿಲ್ಲೆಯಲ್ಲಿ ಕೃಷಿ ಚಟುವಟಿ ಕೆಗಳು ಉತ್ತಮವಾಗಿ ನಡೆಯಲಿವೆ ಆದ್ದರಿಂದ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಕಾಮಗಾರಿಗಳನ್ನು ಕಡ್ಡಾಯವಾಗಿ ಸ್ಥಳ ಪರಿಶೀಲನೆ ಮಾಡುವ ಮೂಲಕ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕೆಂದು ಸಣ್ಣ ನೀರವಾರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಕ್ತಿ ಯೋಜನೆ ಜಾರಿಗೆ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು : ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಘೋಷಿಸಲಾಗಿರುವ ಶಕ್ತಿ ಯೋಜನೆಯ ಜಾರಿಗೆ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದ್ದು, ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಸುವ ಮಹಿಳೆಯರ ಕನಸಿಗೆ ಸರ್ಕಾರ ನೀರೆರೆದಿದೆ. ಜೂನ್ 11 ರಿಂದ ಮಹಿಳೆಯರು ಸಾರಿಗೆ ನಿಗಮಗಳ ಸಾಮಾನ್ಯ ಬಸ್ ಗಳಲ್ಲಿ ಪ್ರಯಾಣಿಸಬಹುದಾಗಿದೆ.

ಕುಸಿದು ಬಿದ್ದ ₹1,700 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಸೇತುವೆ!

ಪಾಟ್ನಾ: ಬರೋಬ್ಬರಿ 1,700 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದ ಸೇತುವೆಯೊಂದು ಕುಸಿದು ಬಿದ್ದಿರುವ ಘಟನೆ ಬಿಹಾರದಲ್ಲಿ ನಡೆದಿದೆ.

Translate »
Scroll to Top