kannanadu

ರಾಜ್ಯಸಭೆ ಚುನಾವಣೆಯಲ್ಲಿ ರಾಜ್ಯದವರನ್ನೇ ಕಣಕ್ಕಿಳಿಸಬೇಕು

ಬೆಂಗಳೂರು ; ಟಿಕೆಟ್ ಹಂಚಿಕೆ ಕುರಿತು ಹೈಕಮಾಂಡ್ ಮುಂದೆ ನಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತೇವೆ. ನಂತರ ಹೈಕಮಾಂಡ್ ನಿರ್ಧಾರ ಕೈಗೊಳ್ಳುವುದು ಕಾಂಗ್ರೆಸ್ ಪದ್ಧತಿ. ನೂರಕ್ಕೂ ಹೆಚ್ಚು ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು, ಎಲ್ಲರ ಹೆಸರನ್ನು ಹೈಕಮಾಂಡ್ಗೆ ಕಳುಹಿಸಿಕೊಟ್ಟಿದ್ದೇವೆ. ಜತೆಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ. ನಾವು ಕೇವಲ ಶಿಫಾರಸು ಮಾಡುತ್ತೇವೆ. ಆದರೆ ಇಂತಹವರಿಗೆ ಟಿಕೆಟ್ ನೀಡಿ ಎಂದು ಹೇಳುವುದಿಲ್ಲ. ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರು ಒಮ್ಮತದ ಶಿಫಾರಸು ಮಾಡಿಲ್ಲ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ …

ರಾಜ್ಯಸಭೆ ಚುನಾವಣೆಯಲ್ಲಿ ರಾಜ್ಯದವರನ್ನೇ ಕಣಕ್ಕಿಳಿಸಬೇಕು Read More »

ಬುಡಾ ಕಚೇರಿಯಲ್ಲಿ ರಿಯಲ್‌ ಎಸ್ಟೇಟ್‌ ಮಾಲೀಕರೊಂದಿಗೆ “ಬಳ್ಳಾರಿ ಅಭಿವೃದ್ಧಿ” ಕುರಿತು ಸಚಿವ ಬಿ.ಶ್ರೀರಾಮುಲು ಚರ್ಚೆ

ಬಳ್ಳಾರಿ: ಬಳ್ಳಾರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ‌ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು‌ ಬುಡಾ ಕಚೇರಿ ಸಭಾಂಗಣದಲ್ಲಿ ಶನಿವಾರ ಸಂಜೆ ಸಭೆ ನಡೆಸಿದರು. ಬಳ್ಳಾರಿ ನಗರದ ಅಭಿವೃದ್ಧಿ ಮತ್ತು ಸೌಂದರೀಕರಣಕ್ಕೆ ಸಂಬಂಧಿಸಿದಂತೆಯೂ ರಿಯಲ್ ಎಸ್ಟೇಟ್ ಮಾಲೀಕರೊಂದಿಗೆ ಚರ್ಚಿಸಿದರು ಮತ್ತು ಅವರ ಸಮಸ್ಯೆಗಳನ್ನು ಆಲಿಸಿದರು. ರಿಯಲ್ ಎಸ್ಟೇಟ್ ಮಾಲೀಕರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ನಿಯಾಮನುಸಾರ ಕ್ಷಿಪ್ರಗತಿಯಲ್ಲಿ ಕ್ರಮವಹಿಸುವಂತೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ‌ ಜಿ.ಸೋಮಶೇಖರ್ ರೆಡ್ಡಿ, ಬುಡಾ ಅಧ್ಯಕ್ಷ …

ಬುಡಾ ಕಚೇರಿಯಲ್ಲಿ ರಿಯಲ್‌ ಎಸ್ಟೇಟ್‌ ಮಾಲೀಕರೊಂದಿಗೆ “ಬಳ್ಳಾರಿ ಅಭಿವೃದ್ಧಿ” ಕುರಿತು ಸಚಿವ ಬಿ.ಶ್ರೀರಾಮುಲು ಚರ್ಚೆ Read More »

2 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಲೇಜು ನವೀಕರಣ ಕಾರ್ಯಕ್ಕೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಂದ ಚಾಲನೆ

ಪಾದರಾಯನಪು ; ಪಾದರಾಯನಪುರದ ಬಿಬಿಎಂಪಿ ಬಾಲಕಿಯರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ನವೀಕರಣ ಕಾಮಗಾರಿಗೆ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಇಂದು ಚಾಲನೆ ನೀಡಿದರು.ಒಟ್ಟು 2 ಕೋಟಿ ರೂಪಾಯಿ ವೆಚ್ಚದಲ್ಲಿ ಹಮ್ಮಿಕೊಳ್ಳಲಾಗಿರುವ ಕಾಮಗಾರಿಯಡಿ, ಹೊಸದಾಗಿ 6 ಕೊಠಡಿಗಳ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ಮಹಿಳೆಯರಿಗೆ, ಪುರುಷರಿಗೆ‌ ಮತ್ತು ವಿಕಲಚೇತನರಿಗೆ 8 ಪ್ರತ್ಯೇಕ ಶೌಚಾಲಯಗಳು, ಅತ್ಯಾಧುನಿಕ ಕ್ರೀಡಾ ಸಂಕೀರ್ಣ, ಬ್ಯಾಡ್ಮಿಂಟನ್ ಅಂಕಣ ಸೇರಿದಂತೆ ಕಾಲೇಜನ್ನು ಉನ್ನತ ದರ್ಜೆಗೆ ಏರಿಸಲಾಗುವುದು ಎಂದು ಶಾಸಕ ಜಮೀರ್ ಅಹ್ಮದ್ ತಿಳಿಸಿದರು.

ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಜತೆ ಲಂಡನ್ ನಲ್ಲಿ ಮಾತುಕತೆ

ಲಂಡನ್: ಕರ್ನಾಟಕದ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಓದುತ್ತಿರುವ ಆಯ್ದ 1,000 ವಿದ್ಯಾರ್ಥಿಗಳಿಗೆ ಡೇಟಾ ಸಾಕ್ಷರತೆಯನ್ನು ಒದಗಿಸಲು ಮತ್ತು ಶಾಲಾ ವಿದ್ಯಾರ್ಥಿಗಳ ಮಟ್ಟದಲ್ಲಿ ಸಂಪೂರ್ಣವಾಗಿ ಈ ಕಾರ್ಯಕ್ರಮವನ್ನು ವಿಸ್ತರಿಸಲು ಇಲ್ಲಿನ ಅನಲಿಟಿಕ್ಸ್ ಇನ್ಸ್ಟಿಟ್ಯೂಟ್ (ಐಒಎ) ತೀವ್ರ ಆಸಕ್ತಿ ವ್ಯಕ್ತಪಡಿಸಿದೆ.ಇಲ್ಲಿ ನಡೆಯುತ್ತಿರುವ ವರ್ಲ್ಡ್ ಎಜುಕೆಷನ್ ಫೋರಂ ಸಮಾವೇಶದಲ್ಲಿ ಭಾಗವಹಿಸಲು ಬಂದಿರುವ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣಅವರನ್ನು ಭೇಟಿ ಆ ಸಂಸ್ಥೆಯ ಉನ್ನತಾಧಿಕಾರಿಗಳ ನಿಯೋಗ ಈ ವಿಚಾರವನ್ನು ಹಂಚಿಕೊಂಡಿದೆ.ಸಚಿವರೊಂದಿಗೆ ಮಾತುಕತೆ ನಡೆಸಿದ ಅನಲಿಟಿಕ್ಸ್ ಐಒಎ ಪ್ರತಿನಿಧಿ ಡಾ.ಕ್ಲೇರ್ ವಾಲ್ಶ್, …

ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಜತೆ ಲಂಡನ್ ನಲ್ಲಿ ಮಾತುಕತೆ Read More »

ಕೊಪ್ಪಳ ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹಿಟ್ನಾಳ ಭೇಟಿ, ಪರಿಹಾರದ ಭರವಸೆ

ಕೊಪ್ಪಳ,: ಈ ವರ್ಷ ಕೊಪ್ಪಳದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಅಪಾರ ಹಾನಿಯೂ ಸಂಭವಿಸಿದೆ. ಶಾಸಕರು, ಅಧಿಕಾರಿಗಳು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೊತೆಗೆ ಪರಿಹಾರ ಒದಗಿಸುವ ಭರವಸೆ ಕೊಟ್ಟರು. ಕೊಪ್ಪಳ ತಾಲೂಕಿನ ಹಿರೇಹಳ್ಳ ಜಲಾಶಯ ಒಂದೇ ದಿನದಲ್ಲಿ ಭರ್ತಿಯಾಗಿದ್ದು ಶುಕ್ರವಾರ ನಾಲ್ಕು ಗೇಟುಗಳ ಮೂಲಕ ಅಪಾರ ಪ್ರಮಾಣದ ನೀರು ಹೊರಬಿಡಲಾಗಿದೆ. ಹಿರೇಹಳ್ಳದುದ್ದಕ್ಕೂ ಅಲ್ಲಲ್ಲಿ ನಿರ್ಮಿಸಲಾಗಿದ್ದ ಬ್ರಿಡ್ಜ್ ಕಂ ಬ್ಯಾರೇಜ್ ತುಂಬಿ ಪಕ್ಕದ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಎರಡು …

ಕೊಪ್ಪಳ ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹಿಟ್ನಾಳ ಭೇಟಿ, ಪರಿಹಾರದ ಭರವಸೆ Read More »

ಈ ತ್ರೈಮಾಸಿಕದಲ್ಲಿ ಕರ್ನಾಟಕಕ್ಕೆ ಅತಿ ಹೆಚ್ಚಿನ ಎಫ್.ಡಿ.ಐ ಹರಿದುಬಂದಿದೆ: ಬೊಮ್ಮಾಯಿ

ಬೆಂಗಳೂರು: ಕಳೆದ ತ್ರೈಮಾಸಿಕ ಅವಧಿಯಲ್ಲಿ ಭಾರತಕ್ಕೆ ವಿದೇಶಿ ನೇರ ಬಂಡವಾಳ ಹೂಡಿಕೆ ಅತಿ ಹೆಚ್ಚು ಬಂದಿದೆ. ಅದರಲ್ಲಿ ದೇಶದ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯಕ್ಕೆ ಅತಿ ಹೆಚ್ಚಿನ ಬಂಡವಾಳ ಹರಿದು ಬಂದಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ದಾವೋಸ್ ಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ವಿಶ್ವದ ಹಲವಾರು ಪ್ರಮುಖರನ್ನು ಹಾಗೂ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಲಿದ್ದೇನೆ. ವಿದೇಶದವರು ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ವಿಶ್ವ ಹೂಡಿಕೆದಾರರ ಸಮಾವೇಶಕ್ಕೆ ಉತ್ತಮ ಪ್ರತಿಕ್ರಿಯೆ …

ಈ ತ್ರೈಮಾಸಿಕದಲ್ಲಿ ಕರ್ನಾಟಕಕ್ಕೆ ಅತಿ ಹೆಚ್ಚಿನ ಎಫ್.ಡಿ.ಐ ಹರಿದುಬಂದಿದೆ: ಬೊಮ್ಮಾಯಿ Read More »

62 ಜನ ಅಂಗವಿಕಲರಿಗೆ ನರೇಗಾದಡಿ ಪ್ರತ್ಯೇಕ ಕೆಲಸ

ಕಾರಟಗಿ : ಈ ಅಂಗವಿಕಲರದ್ದು ಒಬ್ಬೊಬ್ಬರದ್ದು ಒಂದೊಂದು ಕಥೆ. ಅವರ ಎಲ್ಲ ಸಮಸ್ಯೆಗಳ ಪಯಣಕ್ಕೆ ನರೇಗಾ ಯೋಜನೆ ಊರುಗೋಲು ಆಗಿದೆ ! ಕಾರಟಗಿ ತಾಲೂಕಿನ ಯರಡೋಣ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾದಡಿ 62 ಅಂಗವಿಕಲರಿಗೆ ಪ್ರತ್ಯೇಕವಾಗಿ ಎನ್ ಎಂಆರ್ ತೆಗೆದು ಕಾಲುವೆ ಹೂಳೆತ್ತುವ ಕೆಲಸ ನೀಡಲಾಗಿತ್ತು. ಈ ಕೆಲಸದಲ್ಲಿ ದೈಹಿಕ ನ್ಯೂನ್ಯತೆ ಎದುರಿಸುತ್ತಿರುವ ಅಂಧರು, ಬುದ್ಧಿಮಾಂದ್ಯರು, ಕಾಲು ಇಲ್ಲದವರು, ಕುಷ್ಠರೋಗ ನಿವಾರಿತರು, ಮೂಗರು, ಕಿವುಡರು, ಕುಬ್ಜತೆ ಹೊಂದಿದವರು ಹೀಗೆ ಕಷ್ಟದ ಬದುಕು ಸವೆಸುತ್ತಿರುವ ವಿಕಲಚೇತನರು ನರೇಗಾದಡಿ ಕೆಲಸ ನಿರ್ವಹಿಸಿದರು. …

62 ಜನ ಅಂಗವಿಕಲರಿಗೆ ನರೇಗಾದಡಿ ಪ್ರತ್ಯೇಕ ಕೆಲಸ Read More »

10794 ಟಿಸಿಗಳ ನಿರ್ವಹಣೆ ಮಾಡಿದ ಬೆಸ್ಕಾಂ

ಬೆಂಗಳೂರು: ದುರಸ್ಥಿ ಸ್ಥಿತಿಯಲ್ಲಿರುವ, ತಾಂತ್ರಿಕ ದೋಷದಿಂದ ಕೂಡಿರುವ 10794 ಟಿಸಿಗಳ ನಿರ್ವಹಣೆಯನ್ನು ಬೆಸ್ಕಾಂ ಕಳೆದ 16 ದಿನಗಳಲ್ಲಿ ಮಾಡಿದೆ.ವಿದ್ಯುತ್ ಪರಿವರ್ತಕಗಳ (ಟಿಸಿ) ನಿರ್ವಹಣೆಯನ್ನು ಎಲ್ಲ 535 ಸೆಕ್ಷನ್ ಗಳಲ್ಲಿ ಟಿಸಿಗಳ ನಿರ್ವಹಣೆ ಮಾಡಲಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.ತಾಂತ್ರಿಕ ಸಮಸ್ಯೆ ಉಂಟಾಗಿರುವ ಎಲ್ಲ ಟಿಸಿಗಳಿಗೆ ಶಾಶ್ವತ ಕಾಯಕಲ್ಪ ಒದಗಿಸಲು ಬೆಸ್ಕಾಂ ನಿರ್ದರಿಸಿದ್ದು, ಈ ಅಭಿಯಾನವನ್ನು ಮೇ 5 ರಂದು ಆರಂಭಿಸಲಾಗಿತ್ತು.ಟ್ರಾನ್ಸ್ ಫಾರ್ಮರ್ ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದೆ ಇರುವ ಕಾರಣ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಸೋರಿಕೆಯಾಗುತ್ತಿತ್ತು. ಟಿಸಿಗಳ ನಿರ್ವಹಣೆಯಿಂದಾಗಿ …

10794 ಟಿಸಿಗಳ ನಿರ್ವಹಣೆ ಮಾಡಿದ ಬೆಸ್ಕಾಂ Read More »

ಕೃಷಿ ಪರಿಕರ ಮತ್ತು ಕೀಟನಾಶಕ ಬಳಕೆ ಕುರಿತು ತರಬೇತಿ ಕಾರ್ಯಕ್ರಮ

ಮೊಳಕಾಲ್ಮೂರು ; ಉತ್ತಮ ಗುಣ ಮಟ್ಟದ ಪರಿಕರ, ಉತ್ತಮವಾದ ರಸಾಯನಿಕ ಗೊಬ್ಬರ, ಕಿಟನಾಶಕ ನೀಡಿ ಸಹಕರಿಸಿ, ರೈತರ ಬದುಕಿನ ಜೊತೆ ಆಟ ಆಡುವುದು ಒಳ್ಳೆಯದು ಅಲ್ಲ ಎಂದು ವೃತ್ತ ನಿರೀಕ್ಷಿಕರು ಸತೀಶ್ ರವರು ಸಲಹೆ ನೀಡಿದರು. ಪಟ್ಟಣದ ಕೃಷಿ ಇಲಾಖೆಯ ಕಚೇರಿಯಲ್ಲಿ ಆಯೋಜಿಸಿದ್ದ ಕೃಷಿ ಪರಿಕರ ಮತ್ತು ಕೀಟನಾಶಕ ಬಳಕೆ ಕುರಿತು ತರಬೇತಿ ಕಾರ್ಯಕ್ರಮ ಕುರಿತು ಸಲಹೆ ನೀಡಿ ಇವರು ಮಾತನಾಡಿದರು. ರೈತರಿಗೆ ಸುಮಾರು ವರ್ಷಗಳಿಂದ ಉತ್ತಮ ಬೆಳೆ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ರೈತರಿಗೆ ಉತ್ತಮ …

ಕೃಷಿ ಪರಿಕರ ಮತ್ತು ಕೀಟನಾಶಕ ಬಳಕೆ ಕುರಿತು ತರಬೇತಿ ಕಾರ್ಯಕ್ರಮ Read More »

ಮಳೆ ಹಾನಿ ವೀಕ್ಷಣೆ ನೆಪದಲ್ಲಿ ಫೋಟೋ ಶೂಟ್ ಬೇಡ: ಸಿಎಂಗೆ ಮಾಜಿ ಸಿಎಂ ಹೆಚ್ ಡಿಕೆ ಟಾಂಗ್

ಬೆಂಗಳೂರು: ಫೋಟೋ ಶೂಟ್ ಗೆ ಬಂದು ಹೋಗುವುದು ಬೇಡ, ಮಳೆಹಾನಿ ಪ್ರದೇಶಗಳಲ್ಲಿ ಪರಿಹಾರ ಕೊಡುವುದಕ್ಕೆ ಮಾಹಿತಿಯನ್ನೇ ಇದುವರೆಗೂ ಸರಕಾರ ತೆಗೆದುಕೊಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ದೂರಿದರು.ಬ್ಯಾಟರಾಯನಪುರ ಕ್ಷೇತ್ರದ ನಾಗವಾರ ರಿಂಗ್ ರೋಡ್ ಜಂಕ್ಷನ್, ಥಣಿಸಂದ್ರ, ಹೆಬ್ಬಾಳ ಕ್ಷೇತ್ರದ ಮಳೆ ಹಾನಿ ಪ್ರದೇಶಗಳಲ್ಲಿ ಇಂದು ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಹೆಚ್ ಡಿಕೆ, ಬೆಂಗಳೂರಲ್ಲಿ ಏಳು ಜನರು ಮಂತ್ರಿ ಇದ್ದರೂ ಏನು ಪ್ರಯೋಜನ ಹೇಳಿ? ಸರ್ಕಾರ ಹಾಗೂ ಕಾರ್ಪೊರೇಷನ್ ನಲ್ಲಿ ಹಣದ ಕೊರತೆ ಇಲ್ಲ. …

ಮಳೆ ಹಾನಿ ವೀಕ್ಷಣೆ ನೆಪದಲ್ಲಿ ಫೋಟೋ ಶೂಟ್ ಬೇಡ: ಸಿಎಂಗೆ ಮಾಜಿ ಸಿಎಂ ಹೆಚ್ ಡಿಕೆ ಟಾಂಗ್ Read More »

Translate »
Scroll to Top