ಉತ್ತಮವಾಗಿ ಕಾರ್ಯ ನಿರ್ವಹಿಸುವೆ ಸಚಿವ ಬಿ.ನಾಗೇಂದ್ರ
ಬಳ್ಳಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನಗೆ ಯುವಜನ ಸೇವೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಖಾತೆ ನೀಡಿದ್ದಾರೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಅಡಿ ಉತ್ತಮ ಕಾರ್ಯ ನಿರ್ವಹಿಸುವ ಗುರಿ ಹೊಂದಿದ್ದೇನೆ ಎಂದು ಸಚಿವ ನಾಗೇಂದ್ರ ಹೇಳಿದರು. ಅವರು ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮತ್ತು ಅರಣ್ಯ ಪರಿಸರದಲ್ಲಿ ವಾಸ ಮಾಡುವ ಪರಿಶಿಷ್ಟ ಪಂಗಡಗಳ ಜನರಿಗೆ ಉತ್ತಮ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದ ಅವರು, ಯೋಜನೆಗಳು ಪಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ …