Karnataka

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸಿಎಂ ಜತೆ ಚರ್ಚೆ

ಬಿಡದಿ/ಬೆಂಗಳೂರು,31 : ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಂಬಂಧಿತ ಸಚಿವರ ಜತೆ ಮಾತುಕತೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಸಮಿತಿಯ ಮುಖಂಡರು ಸಲ್ಲಿಸಿದ ಮನವಿ ಸ್ವೀಕರಿಸಿದ ನಂತರ ಮಾತನಾಡಿದ ಅವರು; ಈ ಬಗ್ಗೆ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿಯೂ ಪ್ರಸ್ತಾಪ ಮಾಡುವುದಾಗಿ ತಿಳಿಸಿದರು. ಅನೇಕ ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳು ನೆನೆಗುದುಗೆ ಬಿದ್ದಿವೆ. ಅವುಗಳನ್ನು ಈಡೇರಿಸಲೇಬೇಕು. ರಾಜ್ಯದಲ್ಲಿ 47.37 ಲಕ್ಷದಷ್ಟು …

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸಿಎಂ ಜತೆ ಚರ್ಚೆ Read More »

ರಾಷ್ಟ್ರೀಯ ನವೋದ್ಯಮ ದಿನದಲ್ಲಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

ಬೆಂಗಳೂರು,ಜನವರಿ,16 : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ  ಹೆಚ್ಚುವರಿಯಾಗಿ 75 ನವೋದ್ಯಮಗಳಿಗೆ ಸೇರಿದಂತೆ ಈ ವರ್ಷ ರಾಜ್ಯದಲ್ಲಿ ಒಟ್ಟು 200 ನವೋದ್ಯಮಗಳಿಗೆ ಗರಿಷ್ಠ ತಲಾ 50 ಲಕ್ಷ ರೂ.ಗಳವರೆಗೆ ಮೂಲನಿಧಿ (ಸೀಡ್ ಫಂಡ್) ಕೊಡಲಾಗುವುದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ವಿಧಾನಸೌಧದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಪ್ರಪ್ರಥಮ `ರಾಷ್ಟ್ರೀಯ ನವೋದ್ಯಮ ದಿನ’ದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇದುವರೆಗೆ ಸರಿಸುಮಾರು 500 ಸ್ಟಾರ್ಟ್ ಅಪ್ ಗಳಿಗೆ ಅನುದಾನ ಕೊಡಲಾಗಿದ್ದು, ಮೂಲನಿಧಿ ಕೊಡುವ ಉಪಕ್ರಮ ಬೇರಾವ …

ರಾಷ್ಟ್ರೀಯ ನವೋದ್ಯಮ ದಿನದಲ್ಲಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ Read More »

ಕನಕಪುರದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ

ಕನಕಪುರ,ಜ,11 : ಮೊನ್ನೆ ನನಗೆ ಜ್ವರ ಇದ್ದದ್ದರಿಂದ ಪಾದಯಾತ್ರೆಯ ನಡುವೆಯೇ ವಿಶ್ರಾಂತಿಗೆ ಹೋಗಬೇಕಾಯ್ತು, ನಿನ್ನೆ ಕೂಡ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ವೈದ್ಯರ ಸೂಚನೆ ಮೇರೆಗೆ ಅಗತ್ಯ ಚಿಕಿತ್ಸೆ ಪಡೆದು ಇಂದು ಮರಳಿದ್ದೇನೆ. ಕಳೆದೆರಡು ದಿನಗಳ ಕಾಲ ಪಾದಯಾತ್ರೆ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಇದಕ್ಕಾಗಿ ಡಿ.ಕೆ ಶಿವಕುಮಾರ್ ಅವರಿಗೂ, ಪಕ್ಷದ ಕಾರ್ಯಕರ್ತರಿಗೂ ಹಾಗೂ ಪಕ್ಷದ ಎಲ್ಲಾ ನಾಯಕರಿಗೂ, ಪಾದಯಾತ್ರೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ಅರ್ಪಿಸುತ್ತೇನೆ. ಇಂದು ಮೈಸೂರು ಜಿಲ್ಲೆ ಹಾಗೂ ಇನ್ನಿತರ ಹನ್ನೊಂದು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಪಾದಯಾತ್ರೆಗೆ …

ಕನಕಪುರದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ Read More »

ರೈತರು, ಕಾರ್ಮಿಕರು ದೇಶದ ಉಸಿರು

ಮರಿಯಮ್ಮನಹಳ್ಳಿ,,ಜ,10 : :  ನಮ್ಮ ದೇಶದಲ್ಲಿ ರೈತರು ಮತ್ತು ಕಾರ್ಮಿಕರು ದೇಶದ ಉಸಿರು ಎಂದು ಬಿಂಬಿಸುವ ಸರ್ಕಾರಗಳು ಎಲ್ಲೊ ಒಂದು ಕಡೆ ಅವರನ್ನು ನಿರ್ಲಕ್ಷಿಸುತ್ತಿರುವುದು ವಿಷಾದನೀಯ ಎಂದು ವಿಜಯನಗರ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಪಿ.ಸತ್ಯನಾರಾಯಣ ರವರು ಬೇಸರ ವ್ಯಕ್ತಪಡಿಸಿದರು. ಅವರು ಪಟ್ಟಣದ ಲಲಿತ ಕಲಾರಂಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕರ್ನಾಟಕ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ಸಮಾರಂಭದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ರವರು ಭಾವ ಚಿತ್ರಗಳಿಗೆ  ಪುಷ್ಪಗಳ ನಮನ ಸಲ್ಲಿಸಿ ನಂತರ ಕಾರ್ಯಕ್ರಮದ  …

ರೈತರು, ಕಾರ್ಮಿಕರು ದೇಶದ ಉಸಿರು Read More »

ಕೊರೋನಾ ಹಬ್ಬುತ್ತಿರುವ ರಾಜ್ಯಗಳಲ್ಲಿ‌ ಕರ್ನಾಟಕ 3ನೇ ಸ್ಥಾನದಲ್ಲಿದೆ

ಬೆಂಗಳೂರು,ಜ,10 : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಈ ಹಿನ್ನೆಲೆಯಲ್ಲಿ‌ ಇನ್ನಷ್ಟು‌ ಕಠಿಣ ಕ್ರಮಗಳ ಅಗತ್ಯವಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಭಾರತದಲ್ಲಿ ಅತ್ಯಂತ ವೇಗವಾಗಿ‌ ಕೊರೋನಾ ಹಬ್ಬುತ್ತಿರುವ ರಾಜ್ಯಗಳಲ್ಲಿ‌ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ ಪಾಸಿಟಿವ್ ದರ ಶೇಕಡಾ 6.8ಬೆಂಗಳೂರಿನಲ್ಲಿ ಶೇಕಡಾ 10 ಇದೆ.

ರಾಜ್ಯ ಉಪಾಧ್ಯಕ್ಷರಾಗಿ ಬಾಲಕೃಷ್ಣ ಆಯ್ಕೆ

ದೇವನಹಳ್ಳಿ,ಜ,7 : ತಾಲ್ಲೂಕು ಅಧ್ಯಕ್ಷರಾಗಿ ಉತ್ತಮ ಸೇವೆ ಸಲ್ಲಿಸಿದ ಹೆಚ್.ಬಾಲಕೃಷ್ಣ ರವರನ್ನು ಇದೇ ಮೊದಲ ಬಾರಿಗೆ ರಾಜ್ಯ ಸಂಘದ ಉಪಾಧ್ಯಕ್ಷರಾಗಿ ಅಧಿಕಾರ ನೀಡುತ್ತಿದ್ದು ಇವರ ಸೇವೆ ತಾಲ್ಲೂಕಿಗೆ ಸೀಮಿತವಾಗಬಾರದೆಂದು ರಾಜ್ಯ ಮಟ್ಟದಲ್ಲೂ ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವಾಗಬೇಕೆನ್ನುವ ದೃಷ್ಟಿಯಿಂದ ಅಧಿಕಾರ ನೀಡಿದ್ದು ಇವರ ನೇತೃತ್ವದಲ್ಲಿ ಕ್ರೀಡಾಕೂಟ, ಕ್ಯಾಲೆಂಡರ್ ಬಿಡುಗಡೆ, ಸರ್ಕಾರಿ ನೌಕರರ ಸಮಸ್ಯೆಗಳ ಬಗ್ಗೆ ನಿವಾರಿಸಲು ಕಾಳಜಿ ಹೊಂದಿರುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಮೆಚ್ಚುಗೆ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಸರ್ಕಾರಿ …

ರಾಜ್ಯ ಉಪಾಧ್ಯಕ್ಷರಾಗಿ ಬಾಲಕೃಷ್ಣ ಆಯ್ಕೆ Read More »

ದಿ ನ್ಯೂಸ್ ಪೇಪರ್ಸ್ ಅಸೋಷಿಯೇಷನ್ ನಿಂದ 10 ಮಂದಿಗೆ ಕರ್ನಾಟಕ ರತ್ನ, 66 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು, ಡಿ, 23; ದಿ ನ್ಯೂಸ್ ಪೇಪರ್ಸ್ ಅಸೋಷಿಯೇಷನ್ ಕರ್ನಾಟಕದಿಂದ ವಿವಿಧ ವಲಯಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ರಾಜಕಾರಣದ ಪಿತಾಮಹ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವೈದೇಹಿ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯ ಅಧ್ಯಕ್ಷೆ ದಿ. ಡಾ. ಡಿ.ಕೆ. ಆದಿಕೇಶವಲು, ಡಾ. ಸಿ.ಎನ್. ಮಂಜುನಾಥ್ ಸೇರಿ ಹತ್ತು ಮಂದಿಗೆ ಕರ್ನಾಟಕ ರತ್ನ, ನಟರಾದ ರವಿಚಂದ್ರನ್, ರಮೇಶ್ ಅರವಿಂದ್, ಪತ್ರಕರ್ತ, ನಿರೂಪಕ ನಂಜುಂಡಪ್ಪ.ವಿ. ಸೇರಿ 66 ಮಂದಿಗೆ …

ದಿ ನ್ಯೂಸ್ ಪೇಪರ್ಸ್ ಅಸೋಷಿಯೇಷನ್ ನಿಂದ 10 ಮಂದಿಗೆ ಕರ್ನಾಟಕ ರತ್ನ, 66 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ Read More »

ಷಂಡತನ ಪ್ರದರ್ಶನ ಮಾಡುತ್ತಿರುವ ಎಂ.ಇ.ಎಸ್ ನ್ನು ಕರ್ನಾಟಕ ರಾಜ್ಯದಲ್ಲಿ ನಿಷೇಧ ಮಾಡಿ ಹಾಲುಮತದ ವತಿಯಿಂದ ಸರಕಾರಕ್ಕೆ ಆಗ್ರಹ

ಕುಷ್ಟಗಿ:- ಸ್ವಾತಂತ್ರ್ಯ ಹೋರಾಟಗಾರ, ಹುತಾತ್ಮ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಭಗ್ನಗೊಳಿ ದೇಶದೂಹ್ರಿ ಕೆಲಸ ಮಾಡಿ ಗೂಂಡಾವರ್ತನೆ ತೋರುತ್ತೀರುವ ಎಂಇಎಸ್ ಪುಂಡರನ್ನು ಬೆಳಗಾವಿಯಿಂದ ಗಡಿ ಪಾರು ಮಾಡಿ ಗುಂಡಾ ಕಾಯ್ದೆಯಡಿ ಬಂಧಿಸಿ ಶಿಸ್ತು‌ ಕ್ರಮ ಕೈಗೊಳ್ಳಬೇಕು ಎಂದು ಕುಷ್ಟಗಿ ತಾಲೂಕು ಹಾಲುಮತ ಸಮಾಜ ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ಸರಕಾರಕ್ಕೆ ಆಗ್ರಹಿಸಿದರು. ನಂತರ ಇಲ್ಲಿನ ಕನಕದಾಸ ವೃತ್ತದಿಂದ ಬೃಹತ್ ಪ್ರತಿಭಟನೆ ಮಾಡಿ ಎಂಇಎಸ್ ಪುಂಡರ ವಿರುದ್ಧ ಘೋಷಣೆ ಕೂಗುತ್ತಾ ಪಟ್ಟಣದ ವಿವಿಧ ವೃತ್ತಗಳಲ್ಲಿ ಸಂಚರಿಸಿ ಮೆರವಣಿಗೆ …

ಷಂಡತನ ಪ್ರದರ್ಶನ ಮಾಡುತ್ತಿರುವ ಎಂ.ಇ.ಎಸ್ ನ್ನು ಕರ್ನಾಟಕ ರಾಜ್ಯದಲ್ಲಿ ನಿಷೇಧ ಮಾಡಿ ಹಾಲುಮತದ ವತಿಯಿಂದ ಸರಕಾರಕ್ಕೆ ಆಗ್ರಹ Read More »

ಸಾಹಿತ್ಯ, ಕಲೆಗಳ ಎಲ್ಲಾ ಪ್ರಾಕಾರಗಳಿಗೆ ಕರ್ನಾಟಕವೇ ತವರುಭೂಮಿ

ದೇವನಹಳ್ಳಿ: ಜಗತ್ತಿನ ಮತ್ತೆಲ್ಲಾ ಭಾಷೆಯ ಕವಿಗಳೊಡನೆ ಸರಿಸಮಾನವಾಗಿ ನಿಲ್ಲಬಲ್ಲಂತಹ ಕವಿಶ್ರೇಷ್ಟರು ಪ್ರಾಚೀನ ಕಾಲದಿಂದಲೂ ಕನ್ನಡದಲ್ಲಿದ್ದು, ಕನ್ನಡ ಸಾಹಿತ್ಯವನ್ನು ಯುವಪೀಳಿಗೆಯು ಅಧ್ಯಯನ ಮಾಡಬೇಕಿದೆ. ಕನ್ನಡದ ನೆಲ-ಜಲ, ಭಾಷೆ, ಸಾಹಿತ್ಯಕ್ಕೆ ಯಾವುದೇ ಧಕ್ಕೆಯಾದರೂ ಕನ್ನಡಿಗರೆಲ್ಲಾ ಒಗ್ಗೂಡಬೇಕು. ಶಿಲ್ಪಕಲೆ, ರಂಗಕಲೆ, ಚಿತ್ರಕಲೆಯಂತಹ ವಿವಿಧ ಪ್ರಾಕಾರಗಳಿಗೆ ಕರ್ನಾಟಕವೇ ತವರುಭೂಮಿ ಎಂದು ಶಿಕ್ಷಣತಜ್ಞ, ಸಾಹಿತಿ ಎಚ್.ಎಸ್.ರುದ್ರೇಶಮೂರ್ತಿ ಅಭಿಪ್ರಾಯಪಟ್ಟರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಗಾಂಧಿಚೌಕದ ಅಯೋಧ್ಯಾನಗರ ಶಿವಾಚಾರ ವೈಶ್ಯ ನಗರ್ತ ಮಹಂತಿನಮಠ ಸಭಾಂಗಣದಲ್ಲಿ ನಗರ್ತಮಹಿಳಾ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ, ಮಕ್ಕಳದಿನಾಚರಣೆ, ಪ್ರತಿಭಾಪುರಸ್ಕಾರ …

ಸಾಹಿತ್ಯ, ಕಲೆಗಳ ಎಲ್ಲಾ ಪ್ರಾಕಾರಗಳಿಗೆ ಕರ್ನಾಟಕವೇ ತವರುಭೂಮಿ Read More »

ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಒತ್ತಾಯಿಸಿ ಬೃಹತ್ ಪ್ರತಿಭಟನೆ

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಇಂದು ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಒತ್ತಾಯಿಸಿ ಬೃಹತ್ ಪ್ರತಿಭಟನೆ ಮಾಡಲಾಯಿತು. ಸಂದರ್ಭದಲ್ಲಿ ದಲಿತ ಪರ ಸಂಘಟನೆಗಳು ಭಾಗವಹಿಸಿದ್ದವು ದಲಿತ ಸಾಹಿತಿ ದಾನಪ್ಪ ನೀಲಗಲ್ ಮಾತನಾಡಿದರು ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಇಂದು ನ್ಯಾಯಮೂರ್ತಿ ಸದಾಶಿವ ಆಯೋಗ ವರದಿಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಬೃಹತ್ ಪ್ರತಿಭಟನೆ ಮಾಡಲಾಯಿತು. ಸಂದರ್ಭದಲ್ಲಿ ದಲಿತ ಪರ ಸಂಘಟನೆಗಳು ಭಾಗವಹಿಸಿದ್ದವು.

Translate »
Scroll to Top