ದೇಶದ ಅಭಿವೃದ್ಧಿಗಾಗಿ ನನ್ನನ್ನು ಬೆಂಬಲಿಸಿ: ಬಿ.ಶ್ರೀರಾಮುಲು.
ಬಳ್ಳಾರಿ: ಕೂಡ್ಲಿಗಿ ತಾಲ್ಲೂಕು ರಾಜ್ಯದ ಹಿಂದುಳಿದ ತಾಲೂಕುಗಳಲ್ಲಿ ಒಂದಾಗಿದೆ.ಕೂಡ್ಲಿಗಿ ಮೂಲಭೂತ ಸೌಕರ್ಯಗಳಿಂದ ವಂಚಿತವಾದ ತಾಲ್ಲೂಕಾಗಿದೆ.ಜೋತೆಯಲ್ಲಿ ಇಡೀ ತಾಲ್ಲೂಕಿನ ಜನರು ನೀರಿನ ಸಮಸ್ಯೆಯಿಂದ ಬೇಸತ್ತಿದ್ದಾರೆ.ಹೀಗಾಗಿ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಬವಣೆಯನ್ನು ನೀಗಿಸುವ ಭರವಸೆಯನ್ನು ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ನೀಡಿದರು.