ಕೊಯಮತ್ತೂರು ರ್‍ಯಾಲಿಯಲ್ಲಿ  50ಕ್ಕೂ ಹೆಚ್ಚು ಕನ್ನಡಿಗರು ಭಾಗಿಕೊಯಮತ್ತೂರು

ರ್‍ಯಾಲಿ ಚಾಂಪಿಯನ್ಶಿಪ್ (ಐಎನ್ಆರ್ಸಿ)ನ 3ನೇ ಸುತ್ತು ರ್ಯಾಲಿ ಆಫ್ ಕೊಯಮತ್ತೂರು ಜುಲೈ 29 ಮತ್ತು 30ರಂದು (ಶನಿವಾರ ಹಾಗೂ ಭಾನುವಾರ) ನಡೆಯಲಿದ್ದು, ಬರೋಬ್ಬರಿ 76 ಕಾರ್ಗಳು ಸ್ಪರ್ಧಿಸಲಿವೆ. ರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲಿ ಇದೊಂದು ದಾಖಲೆ ಎನಿಸಿದ್ದು, ಮೋಟಾರ್ ಸ್ಪೋರ್ಟ್ಸ್ ಅಭಿಮಾನಿಗಳ ಕುತೂಹಲ ಕೆರಳಿಸಿದೆ.