ನಮ್ಮ ಅಭ್ಯರ್ಥಿ ಎಂ.ಲಕ್ಷ್ಮಣ್ ಸಾಮಾನ್ಯ ಒಕ್ಕಲಿಗ ಕುಟುಂಬದಲ್ಲಿ ಜನಿಸಿ ಪ್ರಾಮಾಣಿಕ ಪರಿಶ್ರಮದಿಂದ ಮೇಲೆ ಬಂದ ಕಾರ್ಯಕರ್ತ: ಸಿ.ಎಂ.ಸಿದ್ದರಾಮಯ್ಯ

ಮೈಸೂರು : ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ, ಇವರು ನಮ್ಮ-ನಿಮ್ಮಲ್ಲರ ಧ್ವನಿಯಾಗಿ ಪಾರ್ಲಿಮೆಂಟಿಗೆ ಹೋಗ್ತಾರೆ. ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸಿ ಕಳಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.