London

ಲಂಡನ್ ಮೇಯರ್ ಅಭ್ಯರ್ಥಿ ತರುಣ್ ಗುಲಾಟೆ ಅವರನ್ನು ಸನ್ಮಾನಿಸಿದ ಚಾಂಪಿಯನ್ಸ್ ಗ್ರೂಪ್

ಬೆಂಗಳೂರು: ಅಮೆರಿಕದ ಭಾರತೀಯ ಮೂಲದ ಹಿರಿಯ ರಾಜಕಾರಣಿ ಹಾಗೂ ಲಂಡನ್ ಮೇಯರ್ ಅಭ್ಯರ್ಥಿ ತರುಣ್ ಗುಲಾಟಿ ಅವರನ್ನು ಲಂಡನ್ ಚಾಂಪಿಯನ್ ಸ್ಕ್ವೇರ್ ನಲ್ಲಿ ಚಾಂಪಿಯನ್ಸ್ ಗ್ರೂಪ್ ನಿಂದ ಅದ್ದೂರಿಯಾಗಿ ಸನ್ಮಾನಿಸಲಾಯಿತು.

ಲಂಡನ್‌ನ ಶ್ರೀ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಸವರಾಜ ಹೊರಟ್ಟಿ, ಯು.ಟಿ. ಖಾದರ್

ಬೆಂಗಳೂರು: ಕರ್ನಾಟಕ ಕಾಮನ್ ವೆಲ್ತ್ ಸಂಸದೀಯ ಸಂಘದ ಕರ್ನಾಟಕ ಶಾಖೆಯ ವೀಕ್ಷಕರಾಗಿ ಘಾನಾ ದೇಶದಲ್ಲಿ ನಡೆದ 66ನೇ ಕಾಮನ್ ವೆಲ್ತ್ ಸಂಸದೀಯ ಸಮ್ಮೇಳನ ಹಾಗೂ ಇತರೆ ದೇಶಗಳಲ್ಲಿ ಅಧ್ಯಯನ ಪ್ರವಾಸ ಕೈಗೊಂಡಿರುವ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಶಿವಲಿಂಗಪ್ಪ ಹೊರಟ್ಟಿ ಹಾಗೂ ವಿಧಾನ ಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಅವರುಗಳು ಅಕ್ಟೋಬರ್ 16 ರಂದು ಯುನೈಟೆಡ್ ಕಿಂಗ್ ಡಮ್ನ ಲಂಡನ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಶ್ರೀ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವವನ್ನು ಸಲ್ಲಿಸಿದರು.

ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಜತೆ ಲಂಡನ್ ನಲ್ಲಿ ಮಾತುಕತೆ

ಲಂಡನ್: ಕರ್ನಾಟಕದ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಓದುತ್ತಿರುವ ಆಯ್ದ 1,000 ವಿದ್ಯಾರ್ಥಿಗಳಿಗೆ ಡೇಟಾ ಸಾಕ್ಷರತೆಯನ್ನು ಒದಗಿಸಲು ಮತ್ತು ಶಾಲಾ ವಿದ್ಯಾರ್ಥಿಗಳ ಮಟ್ಟದಲ್ಲಿ ಸಂಪೂರ್ಣವಾಗಿ ಈ ಕಾರ್ಯಕ್ರಮವನ್ನು ವಿಸ್ತರಿಸಲು ಇಲ್ಲಿನ ಅನಲಿಟಿಕ್ಸ್ ಇನ್ಸ್ಟಿಟ್ಯೂಟ್ (ಐಒಎ) ತೀವ್ರ ಆಸಕ್ತಿ ವ್ಯಕ್ತಪಡಿಸಿದೆ.ಇಲ್ಲಿ ನಡೆಯುತ್ತಿರುವ ವರ್ಲ್ಡ್ ಎಜುಕೆಷನ್ ಫೋರಂ ಸಮಾವೇಶದಲ್ಲಿ ಭಾಗವಹಿಸಲು ಬಂದಿರುವ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣಅವರನ್ನು ಭೇಟಿ ಆ ಸಂಸ್ಥೆಯ ಉನ್ನತಾಧಿಕಾರಿಗಳ ನಿಯೋಗ ಈ ವಿಚಾರವನ್ನು ಹಂಚಿಕೊಂಡಿದೆ.ಸಚಿವರೊಂದಿಗೆ ಮಾತುಕತೆ ನಡೆಸಿದ ಅನಲಿಟಿಕ್ಸ್ ಐಒಎ ಪ್ರತಿನಿಧಿ ಡಾ.ಕ್ಲೇರ್ ವಾಲ್ಶ್, …

ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಜತೆ ಲಂಡನ್ ನಲ್ಲಿ ಮಾತುಕತೆ Read More »

Translate »
Scroll to Top