media

ಮಾಧ್ಯಮದಲ್ಲಿ ಬೆಳೆಯಲು ಬರವಣಿಗೆ ಜೊತೆಗೆ ತಾಂತ್ರಿಕತೆಯೂ ಅಗತ್ಯ

ಬಳ್ಳಾರಿ: ‘ಆಧುನಿಕ ಮಾಧ್ಯಮದಲ್ಲಿ ತಾಂತ್ರಿಕ ನೈಪುಣ್ಯತೆ ಹೊಂದಿದವರಿಗೆ ತೆರೆದ ತೋಳಿನ ಸ್ವಾಗತವಿದೆ’ ಅಂತೆಯೇ ಮಾಧ್ಯಮದಲ್ಲಿ ಬೆಳೆಯಬೇಕಾದರೆ ಬರವಣಿಗೆ ಜೊತೆಗೆ ತಾಂತ್ರಿಕತೆಯೂ ಅಗತ್ಯ ಎಂದು ಪ್ರಜಾವಾಣಿ ಪತ್ರಿಕೆಯ ಉಪಸಂಪಾದಕಿ ಕಲಾವತಿ ಬೈಚಬಾಳ ಹೇಳಿದರು.

ತಾಂತ್ರಿಕ ಸವಾಲುಗಳನ್ನು ಎದುರಿಸಲು ಸಿದ್ಧರಾಗಬೇಕು

ಬಳ್ಳಾರಿ: ಇಂದು ಸಮಾಜದಲ್ಲಿ ತಾಂತ್ರಿಕತೆ ಅಭಿವೃದ್ಧಿಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಪತ್ರಕರ್ತರು ಮಾಡುವಂಥಹ ಕೆಲಸಗಳನ್ನು ಕಂಪ್ಯೂಟರ್ ಒಂದೇ ಮಾಡುವ ಕಾಲ ಬರಲಿದೆ. ಹಾಗಾಗಿ ಪತ್ರಕರ್ತರು ನೂತನ ತಾಂತ್ರಿಕ ಸವಾಲುಗಳನ್ನು ಎದುರಿಸಲು ಸಿದ್ಧರಾಗಬೇಕು ಎಂದು ಖ್ಯಾತ ಟಿವಿ ನಿರೂಪಕ, ಆಲ್ಮಾ ಮೀಡಿಯಾ ಸ್ಕೂಲ್ ಸಂಸ್ಥಾಪಕ ನಿರ್ದೇಶಕ ಗೌರೀಶ್ ಅಕ್ಕಿ ಹೇಳಿದರು.

ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರುಗಳ ಮಾಧ್ಯಮ ಪ್ರತಿಕ್ರಿಯೆ

ಬೆಂಗಳೂರು: ಇಂದು ಪಕ್ಷದ ನೂತನ ಪದಾಧಿಕಾರಿಗಳ ಸಭೆ ಮಾಡಿದ್ದು, ಇದೊಂದು ಫಲದಾಯಕ ಚರ್ಚೆ ಮಾಡಲಾಗಿದೆ. ನಾವಿಂದು ಇಡೀ ರಾಷ್ಟ್ರವನ್ನೇ ಬಾಧಿಸುತ್ತಿರುವ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಎತ್ತಿರುವ ವಿಚಾರದ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ಮೋದಿ ಅವರು ಇಂದು ರಾಜಸ್ಥಾನ, ಛತ್ತೀಸ್ ಗಡ, ತೆಲಂಗಾಣ, ಪಶ್ಚಿಮ ಬಂಗಾಳ, ತಮಿಳುನಾಡು, ಜಾರ್ಖಂಡ್ ನ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಜತೆಗಿನ ಮೈತ್ರಿ ಪಕ್ಷಗಳ ಸರ್ಕಾರಗಳಿಗೆ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕಗಳನ್ನು ಕಡಿಮೆ ಮಾಡುವಂತೆ ಸಲಹೆ ನೀಡಿದ್ದಾರೆ. ನಾವು …

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರುಗಳ ಮಾಧ್ಯಮ ಪ್ರತಿಕ್ರಿಯೆ Read More »

ಸಂಘಟನೆಗಳ ವಿರುದ್ಧ ಮಾಜಿ ಸಿಎಂ ತೀವ್ರ ವಾಗ್ದಾಳಿ

ಬೆಂಗಳೂರು: ಶ್ರೀರಾಮನ ಹೆಸರು ಇಟ್ಟುಕೊಂಡು ಶಾಂತಿ ಹಾಳು ಮಾಡುವ ಕೆಲಸ ಮಾಡದಿರಿ, ಅಂಥ ಕೃತ್ಯಗಳನ್ನು ಎಸಗಲು ರಾವಣನ ಹೆಸರಿಟ್ಟುಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೆಲ ಸಂಘಟನೆಗಳ ಮೇಲೆ ವಾಗ್ದಾಳಿ ನಡೆಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಬಾಬು ಜಗಜೀವನ್ ರಾಮ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಕೆಲವರು ರಾಮಸೇನೆ, ಮತ್ಯಾವುದೋ ಸೇನೆ ಅಂತ ಹೆಸರು ಇಟ್ಟಕೊಂಡಿದ್ದಾರೆ. ರಾಮನ ಹೆಸರಿಟ್ಟುಕೊಂಡು ಹಿಂಸೆಯನ್ನು ಪ್ರಚೋದಿಸುತ್ತಿದ್ದಾರೆ. ಅಂಥವರು ರಾವಣಸೇನೆ …

ಸಂಘಟನೆಗಳ ವಿರುದ್ಧ ಮಾಜಿ ಸಿಎಂ ತೀವ್ರ ವಾಗ್ದಾಳಿ Read More »

ಅಂತರರಾಜ್ಯ ಜಲವಿವಾದ

ಹುಬ್ಬಳ್ಳಿ, ಮಾರ್ಚ್ 27: ಅಂತರರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದಂತೆ ಕೇಂದ್ರದಿಂದಲೂ ಹಲವಾರು ಅನುಮತಿಗಳನ್ನು ಪಡೆಯಬೇಕಿದೆ. ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿನೆ ನೀಡಿದ್ದೇನೆ. ಇದಕ್ಕೆ ಸಂಬಂಧಿಸಿದಂತೆ ಏಪ್ರಿಲ್ ಮೊದಲ ವಾರದಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಅಂತರರಾಜ್ಯ ಜಲವಿವಾದಗಳ ಶೀಘ್ರವಾಗಿ ಬಗೆಹರಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಬೇಕಿದೆ. ಕಾನೂನಾತ್ಮಕ ವಿಚಾರಗಳಲ್ಲಿ ನ್ಯಾಯಾಲಯಗಳಿಂದ ಕೂಡಲೇ ಪರಿಹಾರ ಕಂಡುಕೊಳ್ಳಬೇಕಿದೆ. ರೈಲ್ವೆ ಯೋಜನೆಗಳ ಭೂ …

ಅಂತರರಾಜ್ಯ ಜಲವಿವಾದ Read More »

ಭಾವೈಕ್ಯ ಕರ್ನಾಟಕವನ್ನು ರಾಷ್ಟ್ರೀಯ ಪಕ್ಷಗಳು ಹಾಳು ಮಾಡುತ್ತಿವೆ

ಕೋಲಾರ,ಮಾ,27 : ರಾಜ್ಯದಲ್ಲಿ ಉಂಟಾಗಿರುವ ಅಶಾಂತಿಯ ವಾತಾವರಣ ಮತ್ತು ಎಲ್ಲ ಅಹಿತಕರ ಘಟನೆಗಳಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಮೂಲ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಕೋಲಾರದಲ್ಲಿಂದು ಮಾಧ್ಯಮಗಳ ಜತೆ ಮಾತುನಾಡುತ್ತಾ ಪ್ರತಿಪಕ್ಷ ನಾಯಕರ ವಿರುದ್ಧ ಟೀಕಾಪ್ರಹಾರ ನಡೆಸಿದ ಅವರು; “ಧಾರ್ಮಿಕ ಸ್ಥಳಗಳಲ್ಲಿ, ಜಾತ್ರೆಗಳಲ್ಲಿ ಒಂದು ಧರ್ಮದ ಜನರಿಗೆ ವ್ಯಾಪಾರ ಮಾಡಲು ಬಿಡುತ್ತಿಲ್ಲ, ಹಿಜಾಬ್ಕೇಸರಿ ಶಾಲು ಅಂತ ಹೇಳಿ ಶಾಲೆ ಕಾಲೇಜುಗಳಲ್ಲಿ ಸಂಘರ್ಷ ಉಂಟು ಮಾಡಲಾಯಿತು. ಇದೆಲ್ಲಕ್ಕೂ ಕಾರಣ ಆ …

ಭಾವೈಕ್ಯ ಕರ್ನಾಟಕವನ್ನು ರಾಷ್ಟ್ರೀಯ ಪಕ್ಷಗಳು ಹಾಳು ಮಾಡುತ್ತಿವೆ Read More »

ಮಾಧ್ಯಮ ಪ್ರತಿನಿಧಿಗಳಿಗೆ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಕುರಿತ ಕಾರ್ಯಾಗಾರ

ಬಳ್ಳಾರಿ,ಮಾ.24 : ಬಳ್ಳಾರಿ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಪಾಯದ ಹಂಚಿನಲ್ಲಿರುವ ದುರ್ಬಲವರ್ಗದ ಜನಸಂಖ್ಯೆ ಹೊಂದಿದೆ. ಎಚ್‍ಐವಿ ಸೊಂಕಿನಿಂದ ಬಳಲುತ್ತಿರುವವರ ಜೊತೆಗೆ ಗಣಿಗಾರಿಕೆ ಹಾಗೂ ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಜನಸಂಖ್ಯೆ ಹೆಚ್ಚಾಗಿದ್ದು, ಈ ಎಲ್ಲ ವರ್ಗದ ಜನರು ಕ್ಷಯರೋಗಕ್ಕೆ ತುತ್ತಾಗುವ ದುರ್ಬಲ ವರ್ಗದ ಜನರೆಂದು ಕೇಂದ್ರ ಕ್ಷಯ ವಿಭಾಗ ಗುರುತಿಸಿದೆ!.ಕೇಂದ್ರ ಕ್ಷಯ ವಿಭಾಗವು ರಾಷ್ಟ್ರೀಯ ಕಾರ್ಯತಂತ್ರದ ಯೋಜನೆ ಅಡಿಯಲ್ಲಿಯೂ ಅಳವಡಿಸಿದೆ. 2021 ನೇ ಸಾಲಿನಲ್ಲಿ ಒಟ್ಟು 4626 ಕ್ಷಯರೋಗಿಗಳು ಜಿಲ್ಲೆಯಲ್ಲಿ ಕಂಡು ಬಂದಿದ್ದು,ಅದರಲ್ಲಿ ಶೇ.63.9ರಷ್ಟು ಪುರುಷರು ಮತ್ತು ಶೇ.36.1ರಷ್ಟು ಮಹಿಳೆಯರು, …

ಮಾಧ್ಯಮ ಪ್ರತಿನಿಧಿಗಳಿಗೆ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಕುರಿತ ಕಾರ್ಯಾಗಾರ Read More »

ಸರಕಾರಕ್ಕೆ ಪ್ರಶ್ನೆ ಹಾಕಿದ ಮಾಜಿ ಮುಖ್ಯಮಂತ್ರಿ

ಬೆಂಗಳೂರು,ಮಾ,22 : ಪದೇ ಪದೆ ಎಸಿಬಿ ದಾಳಿ ನಡೆಯುತ್ತಿದೆ. ಕೋಟಿ ಕೋಟಿ ಹಣ, ಚಿನ್ನಾಭರಣ, ಆಸ್ತಿ ವಶಕ್ಕೆ ಪಡೆಯಲಾಗುತ್ತಿದೆ. ಆದರೆ ಎಷ್ಟು ಜನಕ್ಕೆ ಶಿಕ್ಷೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದರು. ರಾಜ್ಯದಲ್ಲಿ ಇಂದು ಬೆಳಗ್ಗೆ ನಡೆದಿರುವ ಎಸಿಬಿ ದಾಳಿಯ ಬಗ್ಗೆ ವಿಧಾನಸೌಧದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಅವರು. ಎಸಿಬಿಯಿಂದ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ದಾಳಿ ಪ್ರಕರಣಗಳು ನೋಡುತ್ತಿದ್ದೇನೆ. ಎಷ್ಟು ಪ್ರಕರಣದಲ್ಲಿ ಶಿಕ್ಷೆಯಾಗಿದೆ? ಎಷ್ಟು ಪ್ರಕರಣದಲ್ಲಿ ಆಸ್ತಿ ಮುಟ್ಟುಗೋಲು ಆಗಿದೆ? …

ಸರಕಾರಕ್ಕೆ ಪ್ರಶ್ನೆ ಹಾಕಿದ ಮಾಜಿ ಮುಖ್ಯಮಂತ್ರಿ Read More »

ತಮಿಳುನಾಡಿಗೆ ಕಾವೇರಿ ರಾಜಕೀಯ ದಾಳ

ಬೆಂಗಳೂರು, ಮಾರ್ಚ್ 22: ಸ್ವಾತಂತ್ರ್ಯ ದೊರೆತಾಗಿನಿಂದ ಕಾವೇರಿ ಹೆಸರಿನಲ್ಲಿಯೇ ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಕಾವೇರಿ ಜಲವಿವಾದ ನ್ಯಾಯಮಂಡಲಿ ತೀರ್ಪು ನೀಡಿ ನೀರಿನ ಹಂಚಿಕೆಯಾಗಿದೆ. ನೀರನ್ನು ನೀಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇದೆ. ನಮ್ಮ ರಾಜ್ಯದಲ್ಲಿ ಹುಟ್ಟಿರುವ ಕಾವೇರಿ, ಇಲ್ಲಿ ಬಿದ್ದ ಮಳೆಯ ಆಧಾರದ ಮೇಲೆ ನಾವು ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆಯನ್ನು ರೂಪಿಸಲಾಗಿದೆ. ಇಷ್ಟೆಲ್ಲಾ ಇದ್ದರೂ ತಮಿಳುನಾಡು ತಕರಾರು …

ತಮಿಳುನಾಡಿಗೆ ಕಾವೇರಿ ರಾಜಕೀಯ ದಾಳ Read More »

Translate »
Scroll to Top