ministers

ರಾಜ್ಯದ ಕೈಗಾರಿಕಾ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆ, ತ್ವರಿತ ಕ್ರಮಕ್ಕೆ ಸೂಚನೆ: ಎಂ ಬಿ ಪಾಟೀಲ

ಬೆಂಗಳೂರು: ರಾಜ್ಯದ ನಾನಾ ಕೈಗಾರಿಕಾ ಪ್ರದೇಶಗಳು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಸಂಬಂಧಿಸಿದ ವಿವಿಧ ಇಲಾಖೆಗಳೊಂದಿಗೆ ಸೋಮವಾರ ಇಲ್ಲಿ ಸಭೆ ನಡೆಸಿ, ಕಾರ್ಯಸಾಧುವಾದ ಪರಿಹಾರೋಪಾಯಗಳ ಬಗ್ಗೆ ಚರ್ಚಿಸಿದರು. ಜೊತೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಇದ್ದರು.

ಬಿಜೆಪಿ ಮತ್ತು ಆರ್ ಎಸ್ ಎಸ್ ಅನ್ನು ತಿರಸ್ಕರಿಸಿ : ಸಿದ್ದರಾಮಯ್ಯ

ಚಿತ್ರದುರ್ಗ : ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರಗೊಳಿಸುವ ಸಂವಿಧಾನ ವಿರೋಧಿ BJP-RSS ಅನ್ನು ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಸಚಿವ ಶಿವಾನಂದ ಪಾಟೀಲ್ ವಿರುದ್ಧ ರೈತರ ಪ್ರತಿಭಟನೆ

ವಿಜಯನಗರ : ಸಚಿವ ಶಿವಾನಂದ ಪಾಟೀಲ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ, ಬಾರುಕೋಲು ಚಾಟಿ ಏಟು ನೀಡುವ ಮೂಲಕ ಶಿವಾನಂದ್ ಪಾಟೀಲ್ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು.

ತೆಲಂಗಾಣ ವಿಧಾನಸಭೆ ಚುನಾವಣೆ ಕಣದಲ್ಲಿ ಸಚಿವ ಬಿ.ನಾಗೇಂದ್ರ

ಹೈದ್ರಬಾದ್: ಕರ್ನಾಟಕ ದ ನೆರೆಹೊರೆಯ ರಾಜ್ಯ ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ರಂಗೇರಿದೆ. ಕರ್ಣಾಟಕದ ನಂತರ ತೆಲಂಗಣಾ ದಲ್ಲಿಯೂ ಕಾಂಗ್ರೆಸ್ ನ ವಿಜಯ ಪತಾಕೆ ಹಾರಿಸುವ ಉದ್ದೇಶದಿಂದ ಕರ್ನಾಟಕದ ಘಟಾನುಘಟಿ ಕಾಂಗ್ರೆಸ್ ನಾಯಕರು ಚುನಾವಣಾ ಕಣದಲ್ಲಿ ಉತ್ಸಾಹದಿಂದ ಭಾಗವಾಹಿ ಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ವಿವಿಧ ಕೈ ಮುಖಂಡರು ಚುನಾವಣಾ ಕಣದಲ್ಲಿ ಪಾಲ್ಗೊಂಡಿದ್ದಾರೆ. ಈಗ ತೆಲಂಗಾಣ ರಾಜ್ಯ ವಿಧಾನಸಭೆ ಚುನಾವಣೆಯ ಕರೀಂ ನಗರದ

ಕಾರ್ಮಿಕರ ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು

ಬೆಂಗಳೂರು: ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಲೋಕಸಭೆ ಚುನಾವಣೆ ಸಿದ್ಧತೆ, ಅನಗತ್ಯ ಹೇಳಿಕೆಗೆ ಬ್ರೇಕ್, ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ಚರ್ಚೆ

ಬೆಂಗಳೂರು: “ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಪಕ್ಷ ಹಾಗೂ ಸರ್ಕಾರದ ಬಗ್ಗೆ ಅನಗತ್ಯ ಹೇಳಿಕೆ ನೀಡದಂತೆ ಸೂಚನೆ, ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿ, ಅವುಗಳ ಮೇಲ್ವಿಚಾರಣೆ ವಿಚಾರವಾಗಿ ಮಂತ್ರಿಗಳ ಜತೆ ಉಪಹಾರಕೂಟದ ಸಭೆಯಲ್ಲಿ ಚರ್ಚೆ ಮಾಡಲಾಯಿತು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಪಕ್ಷ ಹಾಗೂ ಸರ್ಕಾರದ ಆಂತರಿಕ ವಿಚಾರಗಳ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡದಂತೆ ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಸೂಚನೆ

ಬೆಂಗಳೂರು: “ಅಧಿಕಾರ ಹಂಚಿಕೆ, ಬೆಂಬಲ ಹಾಗೂ ಇತರೆ ವಿಚಾರಗಳ ಬಗ್ಗೆ ಯಾವುದೇ ಶಾಸಕರು ಮಾಧ್ಯಮಗಳ ಮುಂದೆ ಮಾತನಾಡಬಾರದು” ಎಂದು ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ.

ತುಂಗಭದ್ರಾ ಅಚ್ಚುಕಟ್ಟು ರೈತರಿಗೆ ನ.30 ತನಕ ನೀರು

ಬೆಂಗಳೂರು: ತುಂಗಭದ್ರಾ ಜಲಾಯಶಯದಲ್ಲಿ ಪ್ರಸ್ತುತ 53 ಟಿಎಂಸಿ ನೀರಿನ ಲಭ್ಯತೆ ಇದ್ದು, ಎಡದಂಡೆ ಮುಖ್ಯಕಾಲುವೆಗೆ 4100 ಕ್ಯೂಸೆಕ್ ನಂತೆ ನ.30ರವರೆಗೆ ನೀರಿನ ಲಭ್ಯತೆ ಆಧಾರದ ಮೇಲೆ ನೀರು ಹರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಳ ಕಲ್ಯಾಣ ಇಲಾಖೆ ಸಚಿವರೂ ಆದ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.

ಸೆ.3 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಚಿವರು, ಶಾಸಕರಿಗೆ ಸನ್ಮಾನ ಸಮಾರಂಭ

ಬಳ್ಳಾರಿ: ಶ್ರೀಮದ್ ಜಗದ್ಗುರು ಚಿನ್ಮೂಲಾದ್ರಿ ಶಿಲಾಪುರಿ ಸೂರ್ಯ ಸಿಂಹಾಸನ ಭಗೀರಥ ಪೀಠ ಮಹಾಸಂಸ್ಥಾನ ಬ್ರಹ್ಮ ವಿದ್ಯಾನಗರ, ಸುಕ್ಷೇತ್ರ ಮಧುರೆ ಹೊಸದುರ್ಗದಲ್ಲಿ ಸೆ.3ರಂದು ರಾಜ್ಯ ಮಟ್ಟದ ದ್ವಿತೀಯ ಪಿಯುಸಿ, ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಚಿವರು, ಶಾಸಕರಿಗೆ ಹಾಗೂ ಹಿರಿಯ ಅಧಿಕಾರಿಗಳಿಗೆ, ನಿವೃತ್ತಿ ಪಡೆದ ಅಧಿಕಾರಿಗಳಿಗೆ, ವಿಶೇಷ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಶ್ರೀ ಭಗೀರಥ ಉಪ್ಪಾರ ಸಂಘದ ಜಿಲ್ಲಾಧ್ಯಕ್ಷ ಹನುಮೇಶ್ ಉಪ್ಪಾರ್ ಅವರು ಹೇಳಿದರು.

ಎಲೆಕ್ಟ್ರಿಕಲ್ಸ್, ಮತ್ತು ಎಲೆಕ್ಟ್ರಾನಿಕ್ಸ್ ಕ್ಷೇತ್ರಗಳಲ್ಲಿ ಉಚಿತ ತರಬೇತಿ: ಸ್ವಯಂ ಉದ್ಯೋಗಕ್ಕೆ ಸೂಕ್ತ ಸೌಲಭ್ಯ

ಬೆಂಗಳೂರು; ರಾಜ್ಯದ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ನಿರುದ್ಯೋಗ ಯುವಕ – ಯುವತಿಯರಿಗೆ ಸೌರ ವಿದ್ಯುತ್ ವಲಯ ಮತ್ತು ವಿವಿಧ ವಿದ್ಯುನ್ಮಾನ ಕ್ಷೇತ್ರಗಳಲ್ಲಿ ಉಚಿತ ತರಬೇತಿ ನೀಡಿ ಸ್ವಾವಲಂಬಿ ಬದುಕು ರೂಪಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಧನ್ಯ ವಿದ್ಯುನ್ಮಾನ ತರಬೇತಿ ಸಂಸ್ಥೆಯ ಅಧ್ಯಕ್ಷ ಮಹದೇವ ಸ್ವಾಮಿ ತಿಳಿಸಿದ್ದಾರೆ.

Translate »
Scroll to Top