ministers

ಐಟಿ, ಬಿಟಿ ಸಚಿವರನ್ನು ಭೇಟಿಯಾದ ಕಂಪನಿಯ ಉನ್ನತ ನಿಯೋಗ

ಬೆಂಗಳೂರು: ಸೈಬರ್ ಭದ್ರತೆ ಮತ್ತು ಕೃತಕ ಬುದ್ಧಿಮತ್ತೆ ಕ್ಷೇತ್ರಗಳಲ್ಲಿ ತಾನು ಗಳಿಸಿರುವ ಪರಿಣತಿಯನ್ನು ಕರ್ನಾಟಕ ಸರಕಾರದೊಂದಿಗೆ ಹಂಚಿಕೊಳ್ಳಲು ಸಿದ್ಧವಿದ್ದು, ಸೈಬರ್ ಭದ್ರತಾ ನೀತಿಯನ್ನು ರೂಪಿಸಲು ಅಗತ್ಯ ನೆರವು ನೀಡಲು ಮುಕ್ತ ಮನಸ್ಸು ಹೊಂದಿರುವುದಾಗಿ ಪ್ರತಿಷ್ಠಿತ ಐಬಿಎಂ ಕಂಪನಿ ಹೇಳಿದೆ. ಐಟಿ ಮತ್ತು ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರನ್ನು ಮಂಗಳವಾರ ವಿಕಾಸ ಸೌಧದಲ್ಲಿ ಭೇಟಿ ಮಾಡಿ ಹಲವು ವಿಚಾರಗಳನ್ನು ಚರ್ಚಿಸಿದ ಮೂವರುಸದಸ್ಯರ ಐಬಿಎಂ ನಿಯೋಗವು ಈ ಭರವಸೆ ನೀಡಿದೆ. ಸಚಿವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸರಕಾರವು ಅಗತ್ಯ …

ಐಟಿ, ಬಿಟಿ ಸಚಿವರನ್ನು ಭೇಟಿಯಾದ ಕಂಪನಿಯ ಉನ್ನತ ನಿಯೋಗ Read More »

ಬಾಲಕನ ಮೇಲೆ ದೌರ್ಜನ್ಯ ಪ್ರಕರಣ, ಒಬ್ಬ ಆರೋಪಿಯ ಬಂಧನ

ಬೆಂಗಳೂರು, ಮಾರ್ಚ್ 25 ಬಸವನ ಬಾಗೇವಾಡಿ ತಾಲೂಕಿನಲ್ಲಿ, ಏಳು ವರ್ಷದ ಬಾಲಕನ ಮೇಲೆ ನಡೆದ ಅಮಾನುಷ, ದೌರ್ಜನ್ಯ ಘಟನೆಯ ಸಂಬಂಧ, ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ವಿಧಾನ ಪರಿಷತ್ ಗೆ, ತಿಳಿಸಿದ್ದಾರೆ. ಸದನದ, ಶೂನ್ಯ ವೇಳೆಯಲ್ಲಿ, ಕಾಂಗ್ರೆಸ್ ಸದಸ್ಯ ಶ್ರೀ ಪ್ರಕಾಶ್ ರಾಥೋಡ್, ಅವರಿಗೆ ಉತ್ತರಿಸಿದ ಸಚಿವರು, ಸಾಮಾಜಿಕ ಜಾಲ ತಾಣ ದಲ್ಲಿ ಈ ಘಟನೆ ಕುರಿತು ಪ್ರಕಟವಾಗಿದೆ, ಹಾಗೂ ಜಿಲ್ಲಾ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ, …

ಬಾಲಕನ ಮೇಲೆ ದೌರ್ಜನ್ಯ ಪ್ರಕರಣ, ಒಬ್ಬ ಆರೋಪಿಯ ಬಂಧನ Read More »

ಪಾದಯಾತ್ರೆ ಮಾಡುವಾಗ ಸರ್ಕಾರದಿಂದ ಸಾಕಷ್ಟು ತೊಂದರೆ ಅನುಭವಿಸಿದೆ

ಬೆಂಗಳೂರು,ಮಾ.4 : ಈ ಕಾರ್ಯಕ್ರಮ ಯಶಸ್ಸಿಗೆ ಬಹಳ ಮಂದಿ ಗುರುಹಿರಿಯರು ನಮಗೆ ಆಶೀರ್ವಾದ ಮಾಡಿದ್ದಾರೆ. ಮುರುಘಾ ಮಠದ ಶ್ರೀಗಳು ಸುಮಾರು 15 ಶ್ರೀಗಳ ಜತೆ ಪಾದಯಾತ್ರೆಗೆ ಬಂದು ನಮಗೆ ಹಾರೈಸಿದ್ದಾರೆ. ಅವರೆಲ್ಲರ ಪಾದಗಳಿಗೆ ನಾನು ಸಾಷ್ಟಾಂಗ ನಮಸ್ಕರಿಸಲು ಬಯಸುತ್ತೇನೆ. ನಮ್ಮ ಐದು ಜನ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಧೃವನಾರಾಯಣ್, ಸಲೀಂ ಅಹ್ಮದ್, ಈಶ್ವರ್ ಖಂಡ್ರೆ ಹಾಗೂ ಸತೀಶ್ ಜಾರಕಿಹೊಳಿ ಅವರು ಹೆಗಲಿಗೆ ಹೆಗಲು ಕೊಟ್ಟು ದುಡಿದಿದ್ದಾರೆ. ಮಂಡ್ಯ, ಮೈಸೂರು, ಹಾಸನ, ರಾಮನಗರ, ಚಾಮಾರಜನಗರ, ತುಮಕೂರು, ಕೋಲಾರ, ಬೆಂಗಳೂರು ಶಾಸಕರು, …

ಪಾದಯಾತ್ರೆ ಮಾಡುವಾಗ ಸರ್ಕಾರದಿಂದ ಸಾಕಷ್ಟು ತೊಂದರೆ ಅನುಭವಿಸಿದೆ Read More »

ಮೇಕೆದಾಟು ಪಾದಯಾತ್ರೆ

ಬೆಂಗಳೂರು,ಫೆ,20 : ಇತ್ತೀಚೆಗೆ ಮುಖ್ಯಮಂತ್ರಿಗಳು ದೆಹಲಿ ಭೇಟಿ ಕೊಟ್ಟಾಗ ಕೇಂದ್ರ ಸಚಿವರ ಅನುಮತಿ ಪಡೆದು ಮೇಕೆದಾಟು ಯೋಜನೆ ಆರಂಭಿಸುತ್ತಾರೆ ಎಂದು ಭಾವಿಸಿದ್ದೆವು. ಆದರೆ ಅದು ಸಾಧ್ಯವಾಗಲಿಲ್ಲ. ನಾವು ನಮ್ಮ ಪಾದಯಾತ್ರೆ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದೇವೆ. ಅಂಬೇಡ್ಕರ್ ಗೆ ಅಪಮಾನ ವಿರುದ್ಧ ಹೋರಾಟ: ಅಂಬೇಡ್ಕರ್ ಅವರಿಗೆ ನ್ಯಾಯಾಧೀಶರು ಅಪಮಾನ ಮಾಡಿದ ವಿಚಾರವಾಗಿ ಡಿಎಸ್ ಎಸ್ ನವರು ಬೃಹತ್ ಪ್ರತಿಭಟನೆ ಮಾಡಿರುವುದು ಸರಿಯಾಗಿದೆ. ದೇಶಕ್ಕೆ ಸಂವಿಧಾನ ಕೊಟ್ಟಂತಹ ಮಹಾಪುರುಷರಿಗೆ ಅಪಮಾನ ಮಾಡಿದವರು ಯಾರೇ ಆದರೂ ಅವರನ್ನು ವಜಾಗೊಳಿಸಬೇಕಿದೆ. ಇಂದು …

ಮೇಕೆದಾಟು ಪಾದಯಾತ್ರೆ Read More »

ಗಂಗಾ ಆರತಿ

ದಾವಣಗೆರೆ, ಫೆಬ್ರವರಿ 20: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉತ್ತರದಲ್ಲಿ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣದಲ್ಲಿ ಹರಿಹರದಲ್ಲಿ ತುಂಗಭದ್ರಾ ನದಿ ತಟದಲ್ಲಿ ತುಂಗಾ ಆರತಿ ಪ್ರಯುಕ್ತ 108 ಯೋಗ ಮಂಟಪಗಳ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿದರು. ಹರಿಹರದ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮಿಗಳು, ಸಚಿವರಾದ ಬಿ.ಎ. ಬಸವರಾಜ, ಮುರುಗೇಶ್ ನಿರಾಣಿ, ಸಂಸದ ಜಿ.ಎಂ.ಸಿದ್ದೇಶ್ವರ ಮೊದಲಾದವರು ಉಪಸ್ಥಿತರಿದ್ದರು.

ಮಲ್ಲೇಶ್ವರಂ ಕೌಶಲ್ಯ ಕೇಂದ್ರದಲ್ಲಿ ಸಚಿವ ಅಶ್ವತ್ಥನಾರಾಯಣ ಪ್ರತಿಪಾದನೆ

ಬೆಂಗಳೂರು,ಫೆ,18 : ಉದ್ಯೋಗಾವಕಾಶಗಳ ಬಗ್ಗೆ ಯುವಜನರಿಗೆ ಸ್ವಯಂಚಾಲಿತವಾಗಿ ತಿಳಿಸುವ ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಆಧಾರಿತ ತಂತ್ರಜ್ಞಾನ ವೇದಿಕೆಯನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ವಿದ್ಯುತ್ ಚಾಲಿತ ವಾಹನ ಕ್ಷೇತ್ರಕ್ಕೆ ಸಂಬಂಧಿಸಿದ ಓರಿಯಂಟೇಶನ್ ಮತ್ತು ನೋಂದಣಿ ಹಾಗೂ ಉದ್ಯೋಗಾವಕಾಶ ಕುರಿತು ಮಲ್ಲೇಶ್ವರಂ ಕೌಶಲ್ಯ ಕೇಂದ್ರ ಹಾಗೂ ಡಾ.ಸಿ.ಎನ್. ಅಶ್ವತ್ಥನಾರಾಯಣ ಪ್ರತಿಷ್ಠಾನಗಳ ಸಹಯೋಗದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಉದ್ದೇಶಿತ ನೂತನ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ವೈಯಕ್ತಿಕ ವಿವರಗಳನ್ನು (ಪ್ರೊಫೈಲ್/ ಬಯೋಡೇಟಾ) …

ಮಲ್ಲೇಶ್ವರಂ ಕೌಶಲ್ಯ ಕೇಂದ್ರದಲ್ಲಿ ಸಚಿವ ಅಶ್ವತ್ಥನಾರಾಯಣ ಪ್ರತಿಪಾದನೆ Read More »

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ನೀಡಿದ ಪ್ರತಿಕ್ರಿಯೆ

ಬೆಂಗಳೂರು,ಫೆ,18 : ನಾವು ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯಿರಿ ಎಂದು ಸರ್ಕಾರಕ್ಕೆ ಕೇಳುತ್ತಿಲ್ಲ. ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬುದು ನಮ್ಮ ಆಗ್ರಹ. ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸುವಾಗ ಏನೆಂದು ಪ್ರಮಾಣ ಮಾಡಿದ್ದರು? ಸಂವಿಧಾನ ಕಾಪಾಡುತ್ತೇನೆ, ದೇಶದ ಗೌರವ ಕಾಪಾಡುತ್ತೇನೆ ಎಂದಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳು ಹಾಗೂ ರಾಜ್ಯಪಾಲರು ಈಗ ಆ ಕೆಲಸ ಮಾಡಬೇಕಲ್ಲವೇ? ಇದು ಕೇವಲ ಈಶ್ವರಪ್ಪನ ವಿಚಾರ ಅಲ್ಲ. ರಾಷ್ಟ್ರಧ್ವಜ ಗೌರವದ ಪ್ರಶ್ನೆ. ವಿಧಾನಸೌಧದಲ್ಲಿ ಅಹೋರಾತ್ರಿ ನಡೆಸಿದ ಧರಣಿ ನಮ್ಮ ಹಾಗೂ ಬಿಜೆಪಿ ನಡುವಣ ವೈಯಕ್ತಿಕ ಹೋರಾಟ …

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ನೀಡಿದ ಪ್ರತಿಕ್ರಿಯೆ Read More »

ಬಳ್ಳಾರಿ ಟ್ರಾಮಾಕೇರ್ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಟ್ರಾಮಾಕೇರ್ ಸೇವೆಗಳಿಗೆ ಚಾಲನೆ

ಬಳ್ಳಾರಿ,ಫೆ.10: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂತ್ರಾಲಯ, ಕರ್ನಾಟಕ ಸರಕಾರ ಮತ್ತು ವಿಮ್ಸ್ ಸಂಯುಕ್ತ ಆಶ್ರಯದಲ್ಲಿ ಪ್ರಧಾನಮಂತ್ರಿ ಸ್ವಸ್ಥ್ಯ ಸುರಕ್ಷಾ ಯೋಜನೆ ಅಡಿ ನಿರ್ಮಿಸಲಾಗಿರುವ ಟ್ರಾಮಾ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆಯಲ್ಲಿ ಟ್ರಾಮಾಕೇರ್ ಸೇವೆಗಳಿಗೆ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಶನಿವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಬಿ.ಶ್ರೀರಾಮುಲು ಅವರು ಈ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆಯಲ್ಲಿ ಟ್ರಾಮಾಕೇರ್ ಸೇವೆಗಳು ಆರಂಭವಾಗುತ್ತಿರುವುದು ಸಂತಸದ ವಿಷಯ. ವೈದ್ಯರು ಮತ್ತು ವೈದ್ಯಕೀಯ …

ಬಳ್ಳಾರಿ ಟ್ರಾಮಾಕೇರ್ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಟ್ರಾಮಾಕೇರ್ ಸೇವೆಗಳಿಗೆ ಚಾಲನೆ Read More »

ಹಕ್ಕುಪತ್ರಕ್ಕೆ ಅಲೆದಾಡುವುದನ್ನು ತಪ್ಪಿಸಿ

ಬೆಂಗಳೂರು, ಫೆಬ್ರವರಿ 11 : ಹಕ್ಕುಪತ್ರ, ಸಾಗುವಳಿ ಚೀಟಿ ಸಮರ್ಪಕವಾಗಿ ವಿತರಣೆಯಾಗಬೇಕು. 94ಸಿಸಿಯಡಿ ಹಕ್ಕುಪತ್ರ ವಿತರಣೆಗೆ ಅಲೆದಾಡುವುದನ್ನು ತಪ್ಪಿಸಿ. ಬಡವರಿಗೆ ಒಂದು, ಶ್ರೀಮಂತರಿಗೆ ಒಂದು ಮಾಡಬೇಡಿ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಪಂಗಳಲ್ಲಿ ಹಕ್ಕುಪತ್ರ ವಿತರಣೆ, ಸ್ಮಶಾನಕ್ಕೆ ಜಾಗದ ಕೊರತೆ ಸೇರಿದಂತೆ ನಾನಾ ಸಮಸ್ಯೆಗಳು ಹಾಗೂ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಕುರಿತು ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಚಿವರು ಮಾತನಾಡಿದರು. 3-4 ವರ್ಷದ ಹಿಂದೆ …

ಹಕ್ಕುಪತ್ರಕ್ಕೆ ಅಲೆದಾಡುವುದನ್ನು ತಪ್ಪಿಸಿ Read More »

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ

ನವದೆಹಲಿ.ಫೆ.8 : ಕಳೆದ ಆರು ತಿಂಗಳ ಅವಧಿಯಲ್ಲಿ ತಮ್ಮ ನೇತೃತ್ವದ ಸರ್ಕಾರ ಮಾಡಿದ ಸಾಧನೆಯ ಕಿರುಹೊತ್ತಿಗೆ ಹಾಗೂ ತಮ್ಮ ಸರ್ಕಾರದ ಯೋಜನೆಗಳಿಂದ ಬಡವರು ಹಾಗೂ ದೀನ-ದಲಿತರಿಗೆ ಮುಂದಿನ ದಿನಗಳಲ್ಲಿ ಆಗುವ ಲಾಭ ಹಾಗೂ ಬದಲಾವಣೆ ಕುರಿತು ಐಸೆಕ್ ಸಂಸ್ಥೆ ನೀಡಿರುವ ಅಧ್ಯಯನ ವರದಿಯನ್ನು ನೀಡಿದರು. ಈ ಸಂದರ್ಭದಲ್ಲಿ ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದರಾದ ಶಿವಕುಮಾರ ಉದಾಸಿ, ಉಮೇಶ್ ಜಾದವ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Translate »
Scroll to Top