MLA

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆ

1. ನಂಜುಂಡಪ್ಪನವರ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ನುರಿತ ಅರ್ಥಶಾಸ್ತçಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಹೈಪವರ್ [ಉನ್ನತಾಧಿಕಾರ ಸಮಿತಿ] ಕಮಿಟಿಯನ್ನು ರಚಿಸಲಾಗುವುದು
ನಂಜುಂಡಪ್ಪ ವರದಿ ಸಲ್ಲಿಕೆಯಾಗಿ 21 ವರ್ಷಗಳಾದವು. ನಂಜುಂಡಪ್ಪನವರ ವರದಿಯನ್ನಾಧರಿಸಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಇದುವರೆಗೆ 61330 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿದೆ. ಸುಮಾರು 42000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ.

ವಿಧಾನಪರಿಷತ್ತಿನಲ್ಲಿ  ಹಿರಿಯ ನಟಿ ಡಾ. ಲೀಲಾವತಿ ಅವರಿಗೆ ಸಂತಾಪ

ವಿಧಾನಪರಿಷತ್ತಿನಲ್ಲಿ ಹಿರಿಯ ನಟಿ ಡಾ. ಲೀಲಾವತಿ ಅವರಿಗೆ ಸಂತಾಪ
ಸೂಚಿಸುವ ನಿರ್ಣಯಕ್ಕೆ ಬೆಂಬಲ ಸೂಚಿಸಿ ವಿಧಾನಪರಿಷತ್ತಿನ ಸಭಾನಾಯಕರು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಮಾತನಾಡಿದರು. 600 ಚಲನ ಚಿತ್ರಗಳಲ್ಲಿ ನಟಿಸಿದ್ದ ಮೇರು ನಟಿ ಲೀಲಾವತಿ ಅವರು ಸಾಮಾಜಿಕ ಕಳಕಳಿಯಿಂದ ಹಲವಾರು ಸಮಾಜ ಸೇವೆಯ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.

ಹನುಮ ಮಾಲಾ ವಿಸರ್ಜನಾ ಕಾರ್ಯಕ್ರಮ ಯಶಸ್ವಿಗೆ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಸೂಚನೆ

ಗಂಗಾವತಿ : ಡಿಸೆಂಬರ್ 24ರಂದು ಗಂಗಾವತಿ ತಾಲೂಕಿನ ಕಿಷ್ಕಿಂದ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸುವ ಹನುಮ ಮಾಲಾಧಾರಿಗಳ ಮಾಲಾ ವಿಸರ್ಜನಾ ಕಾರ್ಯಕ್ರಮ ಯಶಸ್ವಿಯಾಗಿ ಜರುಗಲು ಮೂಲಭೂತ ಸೌಕರ್ಯಗಳು ಸೇರಿ ಮುನ್ನೆಚ್ಚರಿಕೆ ವಹಿಸುವಂತೆ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಳ್ಳಾರಿಯಲ್ಲಿ ಸಂಭ್ರಮದ ಸಂತ ಶ್ರೇಷ್ಠ ಕವಿ ಭಕ್ತ ಕನಕದಾಸರ 536ನೇ ಜಯಂತಿ

ಬಳ್ಳಾರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕಂತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ಸಂತ ಶ್ರೇಷ್ಠ ಕವಿ ಭಕ್ತ ಕನಕದಾಸ ಜಯಂತ್ಯೋತ್ಸವದ ಮೆರವಣಿಗೆಯು ಅದ್ದೂರಿಯಾಗಿ, ಸಂಭ್ರಮದಿಂದ ನಡೆಯಿತು.

ಶೇ 80 ಕಮಿಷನ್‍ನ ಕಾಂಗ್ರೆಸ್ ಸರಕಾರಕ್ಕೆ ಪ್ರಜ್ಞಾವಂತ ಮತದಾರರಿಂದ ತಕ್ಕ ಪಾಠ: ವಿಜಯೇಂದ್ರ ವಿಶ್ವಾಸ

ಬೆಂಗಳೂರು: ಗುಡುಗು, ಸಿಡಿಲು, ಮಳೆ, ಬಿರುಗಾಳಿ ಏನೇ ಬಂದರೂ ಪಕ್ಷದ ಹಿರಿಯರಾದ ಯಡಿಯೂರಪ್ಪ, ಈಶ್ವರಪ್ಪ ಮತ್ತಿತರ ರಾಜ್ಯದ ಎಲ್ಲ ಹಿರಿಯರ ಆಶೀರ್ವಾದ, ಕಾರ್ಯಕರ್ತರ ನೆರವಿನಿಂದ ಬಿಜೆಪಿ ಎಂಬ ವಿಮಾನವನ್ನು ಸೇಫ್ ಆಗಿ ಲ್ಯಾಂಡ್ ಮಾಡಲಿದ್ದೇನೆ ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರನವರು ತಿಳಿಸಿದರು.

ಶಾಮನೂರು ಮೊಮ್ಮಗಳ ಜತೆ ಸಚಿವ ಎಂ.ಬಿ.ಪಾಟೀಲ ಪುತ್ರನ ವಿವಾಹ

ಬೆಂಗಳೂರು: ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಮತ್ತು ಆಶಾ ಅವರ ಜ್ಯೇಷ್ಠ ಪುತ್ರ ಬಸನ್ ಅವರ ವಿವಾಹವು ಕಾಂಗ್ರೆಸ್ಸಿನ ಹಿರಿಯ ಮುಖಂಡ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗಳು ಅಖಿಲಾ ಅವರೊಂದಿಗೆ ಇಲ್ಲಿನ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಗುರುವಾರ ಶಾಸ್ತ್ರೋಕ್ತವಾಗಿ ನೆರವೇರಿತು. ಅಖಿಲಾ ಅವರು ಶಾಮನೂರರ ಪುತ್ರ, ಎಸ್ ಎಸ್ ಗಣೇಶ್ ಮತ್ತು ರೇಖಾ ದಂಪತಿಯ ಪುತ್ರಿಯಾಗಿದ್ದಾರೆ.

ಜೂಪಲ್ಲಿ ಕೃಷ್ಣಾರಾವ್ ಈಗಾಗಲೇ ಗೆದ್ದಿದ್ದಾರೆ, ಅಧಿಕೃತ ಘೋಷಣೆ ಬಾಕಿ ಇದೆ: ಶಾಸಕ ನಾರಾ ಭರತ್ ರೆಡ್ಡಿ

ತೆಲಂಗಾಣ/ಕೊಲ್ಲಾಪುರ: ಕೊಲ್ಲಾಪುರ ಕಾಂಗ್ರೆಸ್ ಅಭ್ಯರ್ಥಿ ಜೂಪಲ್ಲಿ ಕೃಷ್ಣಾರಾವ್ ಅವರು ಈಗಾಗಲೇ ಗೆಲುವು ಸಾಧಿಸಿದ್ದಾರೆ, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎಂದು ನಾನು ನಮ್ಮ ಪಕ್ಷದ ವಕ್ತಾರರಿಗೆ ತಿಳಿಸಿದ್ದೇನೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

ಆರ್ ಟಿಓ ಕಚೇರಿಗೆ ದಿಢೀರ್ ಭೇಟಿ ನೀಡಿದ ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ : ಬಂಟ್ ಭವನ ಬಳಿ ಇರುವ ಪ್ರಾದೇಶಿಕ ಸಾರಿಗೆ ಕಚೇರಿ (ಆರ್ ಟಿಓ)ಗೆ ಶುಕ್ರವಾರ ಬೆಳಿಗ್ಗೆ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ದಿಢೀರ್ ಭೇಟಿ ನೀಡಿ ಅಚ್ಚರಿ ಮೂಡಿಸಿದರು.

ಏಕಶಿಲಾ ಬೆಟ್ಟದ ಮೇಲೆ 68 ಅಡಿ ಕನ್ನಡ ಧ್ವಜಾರೋಹಣ ನಡೆಸಿದ ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ: ಏಷ್ಯಾದಲ್ಲಿಯೇ ಎರಡನೇ ಅತಿ ದೊಡ್ಡ ಏಕಶಿಲಾ ಬೆಟ್ಟವಾದ ಬಳ್ಳಾರಿ ಬೆಟ್ಟದ ಮೇಲೆ ಬುಧವಾರ ಬೆಳಿಗ್ಗೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ 68 ಅಡಿ ಉದ್ದ ಕರ್ನಾಟಕ ಧ್ವಜದ ಧ್ವಜಾರೋಹಣ ಕಾರ್ಯಕ್ರಮವನ್ನು ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಅವರು ನೇರವೇರಿಸಿದರು.

ಗಂಗಾವತಿಯಲ್ಲಿ ಸಾಮೂಹಿಕ ಶ್ರೀ ಲಕ್ಷ್ಮೀಪೂಜಾ ಹಾಗೂ ಧಾರ್ಮಿಕ ಸಭೆ

ಗಂಗಾವತಿ: ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಕೊಪ್ಪಳ, ಸಾಮೂಹಿಕ ಶ್ರೀ ಲಕ್ಷ್ಮಿ ಪೂಜಾ ಸಮಿತಿ ಕೂಕನಪಳ್ಳಿ ಹಾಗೂ ಪ್ರಗತಿಬಂಧು ಜ್ಞಾನ ವಿಕಾಸ ಸ್ವ-ಸಹಾಯಕ ಸಂಘಗಳ ಒಕ್ಕೂಟ ಕೂಕನಪಳ್ಳಿ, ಗ್ರಾಮ ಪಂಚಾಯಿತ ಕಲ್ಲತಾವರಗೇರಾ, ಶ್ರೀ ಬೆಟ್ಟದ ಲಿಂಗೇಶ್ವರ ಸೇವಾ ಸಮಿತಿ ಇವರುಗಳ ಸಂಯುಕ್ತಾಶ್ರಯದಲ್ಲಿ ಪರಮಪೂಜ್ಯ ಪದ್ಮವಿಭೂಷಣ ಡಾ. ವೀರೇಂದ್ರ ಹೆಗ್ಗಡೆಯವರ ಹಾಗೂ ಡಾ. ಹೇಮಾವತಿ ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ಸಾಮೂಹಿಕ ಶ್ರೀ ಲಕ್ಷ್ಮಿ ಪೂಜಾ ಹಾಗೂ ಧಾರ್ಮಿಕ ಸಭಾ ಮತ್ತು ಒಕ್ಕೂಟ ಪದಗ್ರಹಣ ಕಾರ್ಯಕ್ರಮದಲ್ಲಿ ಗಂಗಾವತಿ ಶಾಸಕ ಗಾಲಿ ಜನಾರ್ಧನರೆಡ್ಡಿಯವರು ಪಾಲ್ಗೊಂಡಿದ್ದರು.

Translate »
Scroll to Top