new police station

ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟನೆ

ಹೊಸಪೇಟೆ : ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಶುಕ್ರವಾರ ಹೊಸಪೇಟೆ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟನೆ ಮಾಡಿದರು. ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಗಣ್ಯರು ತೆಂಗಿನ ಸಸಿಗಳನ್ನು ನೆಟ್ಟರು.

ನೂತನ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಸಚಿವರಾದ ಬಿ.ಶ್ರೀರಾಮುಲು ಅವರಿಂದ ಭೂಮಿಪೂಜೆ

ಸಂಡೂರು : ತಾಲೂಕಿನ ಚೋರನೂರು ಗ್ರಾಮದಲ್ಲಿ ನೂತನ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ‌ಹಾಗೂ‌ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಶನಿವಾರ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕ ಈ.ತುಕಾರಾಂ, ಸಂಸದ ವೈ.ದೇವೇಂದ್ರಪ್ಪ, ಡಿಸಿ ಪವನಕುಮಾರ್ ಮಾಲಪಾಟಿ, ಎಸ್ಪಿ ಸೈದುಲು ಅಡಾವತ್ ಮತ್ತಿತರರು ಇದ್ದರು.

Translate »
Scroll to Top